ರಾಜ್ಯದ ಹಲವೆಡೆ ಭಾರೀ ಮಳೆ: ಸಿಡಿಲನ ಆರ್ಭಟಕ್ಕೆ ಮೂವರ ಸಾವು

Kannadaprabha News   | Asianet News
Published : May 08, 2021, 07:43 AM IST
ರಾಜ್ಯದ ಹಲವೆಡೆ ಭಾರೀ ಮಳೆ: ಸಿಡಿಲನ ಆರ್ಭಟಕ್ಕೆ ಮೂವರ ಸಾವು

ಸಾರಾಂಶ

ಕಲಬುರಗಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ವಿವಿಧೆಡೆ ಸುರಿದ ಅಕಾಲಿಕ ಮಳೆ| ಮಳೆಯಿಂದಾಗಿ ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಕೊಂಚ ನೆಮ್ಮದಿ| ಸಿಡಿಲು ಬಡಿದು ಮೂವರ ದುರ್ಮರಣ| 

ಬೆಂಗಳೂರು(ಮೇ.08):  ರಾಜ್ಯದ ಮೂರು ಜಿಲ್ಲೆಗಳಲ್ಲಿ ಶುಕ್ರವಾರ ಸಂಜೆ ಸುಮಾರು ಒಂದು ಗಂಟೆಗಳ ಕಾಲ ಉತ್ತಮ ಮಳೆಯಾಗಿದ್ದು, ಸಿಡಿಲ ಆರ್ಭಟಕ್ಕೆ ಬಾಲಕಿ ಸೇರಿ ಮೂವರು ಬಲಿಯಾಗಿದ್ದಾರೆ. 

ವಿಜಯಪುರ ಜಿಲ್ಲೆಯ ಜಿಲ್ಲೆಯ ಇಂಡಿ ತಾಲೂಕಿನ ಅಹಿರಸಂಗ ಗ್ರಾಮದ ಹೊರ ವಲಯದ ತುಕಾರಾಮ ಈಶ್ವರಪ್ಪ (32), ಬಾಗಲಕೋಟೆ ಜಿಲ್ಲೆಯ ಇಳಕಲ್ಲ ತಾಲೂಕಿನ ಚಟ್ನಿಹಾಳ ಗ್ರಾಮದ ಬಾಲಕಿ ಮಲ್ಲಮ್ಮ ಕೋರಕೇರಿ(8), ಕಲಬುರಗಿಯ ಆಳಂದದ ಅರುಣ ಕಾಂತು ರಾಥೋಡ(18)ಮೃತಪಟ್ಟವರು.

ರಾಜ್ಯದ ಹಲವೆಡೆ ವರುಣನ ಅಬ್ಬರ: ಸಿಡಿಲು ಬಡಿದು 7 ಜನ ಸಾವು

ಕಲಬುರಗಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ವಿವಿಧೆಡೆ ಸಂಜೆಯ ವೇಳೆಗೆ ಸುರಿದ ಈ ಅಕಾಲಿಕ ಮಳೆಯಿಂದಾಗಿ ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಕೊಂಚ ನೆಮ್ಮದಿ ಮೂಡಿಸಿತು. ಇನ್ನು ಉಡುಪಿಯಲ್ಲಿ ಗುರುವಾರ ರಾತ್ರಿ ಭಾರೀ ಗಾಳಿಯೊಂದಿಗೆ ಕೆಲಕಾಲ ಉತ್ತಮ ಮಳೆಯಾಗಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!