ನಟ ಪ್ರಕಾಶ್‌ ರಾಜ್‌ ಸೇರಿ ಹಲವರಿಗೆ ಜೀವ ಬೆದರಿಕೆ: ನಿಮ್ಮ ಕೊನೆಯ ‌ದಿನಗಳನ್ನು ಎಣಿಸಿ ಎಂದ ಅನಾಮಿಕ..!

By Girish Goudar  |  First Published Sep 30, 2023, 10:54 AM IST

ಮತಾಂಧ ಮುಸ್ಲಿಂಮರು, ಪಾಕಿಸ್ತಾನಿಗಳು, ಭಯೋತ್ಪಾದಕರು ಮಾಡ್ತೊರೋದು ತಪ್ಪು ಎಂದು ಹೇಳುವ ತಾಕತ್ತು ನಿಮ್ಮಲ್ಲಿದಿಯೇ?, ದೇಶದ ಒಳಗೆ ಇದ್ದುಕೊಂಡು ಪಾಕ್ ನಾಯಿಗಳು ಮಾಡ್ತಿರೋದು ತಪ್ಪು ‌ಎಂದು ಹೇಳುವ ಧೈರ್ಯ ನಿಮ್ಮಲ್ಲಿದೆಯೇ?. ಧೈರ್ಯವಿದ್ದರೆ ಹೇಳಿ ಇಲ್ಲವಾದರೆ ನಿಮ್ಮ ಕೊನೆಯ ‌ದಿನಗಳನ್ನು ಎಣಿಸಿ ಎಂದ ಪತ್ರದಲ್ಲಿ ಉಲ್ಲೇಖಿಸಿದ ಅನಾಮಿಕ 


ಬೆಳಗಾವಿ(ಸೆ.30):  ಓರ್ವ ಸ್ವಾಮೀಜಿ ಸೇರಿ ರಾಜ್ಯದ ಮೂವರು ಸಚಿವರಿಗೆ ಜೀವ ಬೆದರಿಕೆ ಪತ್ರ ಬಂದಿದೆ. ಹೌದು, ಬೈಲೂರು ನಿಷ್ಕಲಮಂಟಪದ ನಿಜಗುಣಾನಂದ ಶ್ರೀ ಸೇರಿ ಮೂವರು ಸಚಿವರಾದ ಸಚಿವ ಸತೀಶ ಜಾರಕಿಹೊಳಿ, ದಿನೇಶ್‌ ಗುಂಡೂರಾವ್, ಪ್ರಿಯಾಂಕ್ ಖರ್ಗೆ ಸೇರಿ ಪ್ರಗತಿಪರರು, ವಿಚಾರವಾದಿಗಳಿಗೂ ಜೀವ ಬೆದರಿಕೆ ಬಂದಿದೆ. 

ಸೆಪ್ಟಂಬರ್ 20 ರಂದು ಬೈಲೂರು ನಿಷ್ಕಲ ಮಂಟಪಕ್ಕೆ ಬೆದರಿಕೆ ಪತ್ರ ಬಂದಿದ್ದು, ಕಳೆದ ತಿಂಗಳಷ್ಟೆ ಶ್ರೀಗಳಿಗೆ ಜೀವ ಬೆದರಿಕೆ ಪತ್ರ ಬಂದಿತ್ತು. ಈಗ ಮತ್ತೆ ನಿಷ್ಕಲ ಮಂಟಪಕ್ಕೆ ಜೀವ ಬೆದರಿಕೆ ಪತ್ರ ಬಂದಿದೆ.  ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಬೈಲೂರು ನಿಷ್ಕಲ ಮಂಟಪಕ್ಕೆ ಮತ್ತೆ ಜೀವ ಬೆದರಿಕೆ ಪತ್ರ ಬಂದಿದೆ. 

Tap to resize

Latest Videos

ನಿಜಗುಣಾನಂದ ಶ್ರೀಗೆ ಜೀವ ಬೆದರಿಕೆ ಪತ್ರ; 'ಇದು ಲವ್ ಲೆಟರ್' - ಸ್ವಾಮೀಜಿ

ಪತ್ರದಲ್ಲಿ ಏನಿದೆ?

ನಿಜಗುಣಾನಂದ ನಾನು ಬರೆದಿರುವ ಪತ್ರ ಪ್ರೇಮ ಪತ್ರ ಅಂತಾದರೂ ತಿಳಿ, ಅಥವಾ ಸಾವಿನ ಪತ್ರವಂತಾದರೂ ತಿಳಿ, ನಾನು ನಿನ್ನ ಜತೆ ತಮಾಷೆ‌ ಮಾಡುತ್ತಿಲ್ಲ, ನೀನು ಆಯೋಜಿಸುವ ಪಾಪದ ಕಾರ್ಯಕ್ರಮದಲ್ಲೇ ನಿನ್ನ ಕಣ್ಣೆದುರಿಗೆ ನಿನ್ನ ಸಾವು ಬರುತ್ತೆ. ನೀನು ಮನುಷ್ಯ ರೂಪದಲ್ಲಿರುವ ರಾಕ್ಷಸ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. 

ಹಿಂದೂ ಧರ್ಮ ದೇವತೆಗಳನ್ನು ನಿಂದಿಸುವ ನೀನು ರಾಕ್ಷಸನೇ ಸರಿ. ನಿನ್ನ ಜೀವನದ‌ ಕೊನೆಯ ಘಟ್ಟದಲ್ಲಿ ನೀನು ನಿಂತಿದ್ದಿಯ. ನಿನ್ನ ಹತ್ಯೆ ಬಿಟ್ಟರೆ ಬೇರೆ ದಾರಿ ಇಲ್ಲ. ನಿನ್ನಂಥ ದುಷ್ಟ ರಾಕ್ಷಸಿ ಸಂತತಿಯ ಸಂಹಾರವನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಹಲವು ವಿಚಾರವಾದಿಗಳು ಹಾಗೂ ಪ್ರಗತಿಪರರ ಹೆಸರು ಪತ್ರದಲ್ಲಿ ಉಲ್ಲೇಖಿಸಲಾಗಿದೆ. 

ಮತ್ತೆ ಸಚಿವ ಗಡ್ಕರಿಗೆ ಜೀವ ಬೆದರಿಕೆ ಕರೆ: ಬೆಳಗಾವಿ ಕೈದಿ ಹೆಸರಲ್ಲಿ ಮಂಗಳೂರಿಂದ ಬೆದರಿಕೆ

ರಾಜ್ಯದ ಸಾಹಿತಿಗಳಾದ ಎಸ್.ಜಿ. ಸಿದ್ದರಾಮಯ್ಯ, ಕೆ. ಮರುಳಸಿದ್ದಪ್ಪ, ಬರಗೂರು ರಾಮಚಂದ್ರಪ್ಪ, ಭಾಸ್ಕರ್ ಪ್ರಸಾದ್, ಪ್ರೋ.ಭಗವಾನ್, ಪ್ರೋ.ಮಹೇಶ್ ಚಂದ್ರ, ಬಿಟಿ ಲಲಿತಾನಾಯಕ್, ನಟ ಚೇತನ್, ನಟ ಪ್ರಕಾಶ ರಾಜ್, ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ ದಿನೇಶ್‌ ಗುಂಡೂರಾವ್, ಧ್ವಾರಕಾನಾಥ, ದೇವನೂರು ಮಹದೇಪ್, ಬಿ.ಎಲ್. ವೇಣು ಅವರಿಗೆ ನೀವು ನಿಮ್ಮ ತಂದೆ ತಾಯಿಗಳಿಗೆ ಹುಟ್ಟಿದ್ದರೆ ಕೇಳುವ ಪ್ರಶ್ನೆಗೆ ಉತ್ತರ ಕೊಡಿ ಎಂದ ಅನಾಮಧೇಯ ವ್ಯಕ್ತಿಯೊಬ್ಬ ಪತ್ರದಲ್ಲಿ ಜೀವ ಬೆದರಿಕೆ ಹಾಕಿದ್ದಾನೆ. 

ಮತಾಂಧ ಮುಸ್ಲಿಂಮರು, ಪಾಕಿಸ್ತಾನಿಗಳು, ಭಯೋತ್ಪಾದಕರು ಮಾಡ್ತೊರೋದು ತಪ್ಪು ಎಂದು ಹೇಳುವ ತಾಕತ್ತು ನಿಮ್ಮಲ್ಲಿದಿಯೇ?, ದೇಶದ ಒಳಗೆ ಇದ್ದುಕೊಂಡು ಪಾಕ್ ನಾಯಿಗಳು ಮಾಡ್ತಿರೋದು ತಪ್ಪು ‌ಎಂದು ಹೇಳುವ ಧೈರ್ಯ ನಿಮ್ಮಲ್ಲಿದೆಯೇ?. ಧೈರ್ಯವಿದ್ದರೆ ಹೇಳಿ ಇಲ್ಲವಾದರೆ ನಿಮ್ಮ ಕೊನೆಯ ‌ದಿನಗಳನ್ನು ಎಣಿಸಿ ಎಂದ ಅನಾಮಿಕ ಪತ್ರದಲ್ಲಿ ಉಲ್ಲೇಖಿಸಿದ್ದಾನೆ.  

ಸಾಹಿತಿ, ಪ್ರಗತಿಪರ ಚಿಂತಕರಿಗೆ ಜೀವ ಬೆದರಿಕೆ ಪತ್ರ: ಯಾರೀತ ಶಿವಾಜಿ ರಾವ್!

click me!