
ಬೆಳಗಾವಿ (ಅ.26) : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಳಿಯ ರಜತ್ ಉಳ್ಳಾಗಡ್ಡಿ ಕೊರಳಲ್ಲಿ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಫೋಟೊ ವೈರಲ್ ಆದ ಬೆನ್ನಲ್ಲೇ ಇದೀಗ ಸ್ವತಃ ಲಕ್ಷ್ಮೀ ಹೆಬ್ಬಾಳ್ಕರ್ ಮಗ ಮೃಣಾಲ್ ಕೊರಳಲ್ಲೂ ಹುಲಿ ಉಂಗುರ ಧರಿಸಿರುವ ಫೋಟೊಗಳು ಇದೀಗ ಭಾರೀ ವೈರಲ್ ಆಗುತ್ತಿವೆ.
ಕಾನೂನು ಎಲ್ಲರಿಗೂ ಒಂದೇ, ನಕಲಿ ಹುಲಿ ಉಗುರು ಸಹ ಹಾಕಬಾರದು: ಸಚಿವ ಈಶ್ವರ್ ಖಂಡ್ರೆ
ಸ್ವತಃ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಇನ್ಸ್‌ಟಾಗ್ರಾಂ ಪೇಜ್‌ನಲ್ಲಿ ಹಾಕಿಕೊಂಡಿರುವ ಫೋಟೊಗಳು. ಹುಲಿ ಉಗುರು ಧರಿಸಿದ ಪ್ರಕರಣದಲ್ಲಿ ಕನ್ನಡ ಕಿರುತೆರೆ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 10ರ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷರನ್ನು ಅರಣ್ಯಾಧಿಕಾರಿಗಳು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಬಳಿಕ ಸೆಲೆಬ್ರಿಟಿಗಳು ರಾಜಕಾರಣಿಗಳು ಸಹ ಧರಿಸಿರುವ ಫೋಟೊ ವೈರಲ್ ಆಗುತ್ತಿವೆ. ಈ ಫೋಟೊಗಳನ್ನು ಅಪ್ಲೋಡ್ ಇವರ ಬಂಧನ ಯಾವಾಗ ನ್ಯಾಯ ಎಲ್ಲರಿಗೊಂದೇ ಹ್ಯಾಷ್ ಟ್ಯಾಗ್ ಬಳಸಿ ಎಂದು ಸಾಮಾಜಿಕ ಜಾಲತಾಣದಲ್ಲಿ ಸರ್ಕಾರವನ್ನು ಪ್ರಶ್ನಿಸುತ್ತಿರುವ ನೆಟ್ಟಿಗರು.
ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯನ ಕೊರಳಲ್ಲೂ ಹುಲಿ ಉಗುರು! ಇಕ್ಕಟ್ಟಿಗೆ ಸಿಲುಕಿತಾ ಕಾಂಗ್ರೆಸ್ ಸರ್ಕಾರ?
ಇದೀಗ ಸರ್ಕಾರದ ಸಚಿವರು ಕುಟುಂಬದವರೇ ಹುಲಿ ಉಂಗುರ ಧರಿಸಿರುವ ಪ್ರಕಣಗಳು ಬೆಳಕಿಗೆ ಬಂದಿರುವುದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದಂತಾಗಿದೆ. ಕಾನೂನು ಎಲ್ಲರಿಗೂ ಒಂದೇ ಎಂದಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ. ಇಂದು ಸುದ್ದಿಗೋಷ್ಠಿಯಲ್ಲಿ ವನ್ಯಜೀವಿ ಸಂರಕ್ಷಣೆ ಕಾಯಿದೆ ಬಿಗಿಯಾಗಿದೆ ವನ್ಯಜೀವಿಗಳ ಅಂಗಾಂಗ ವಸ್ತು ಧರಿಸುವುದು ಅಪರಾಧವಾಗಿದೆ. ನಕಲಿ ಹುಲಿ ಉಗುರಿನ ಪೆಂಡೆಂಟ್ ಕೂಡ ಧರಿಸುವುದು ಪ್ರಚೋದನೆ ನೀಡಿದಂತಾಗುತ್ತದೆ ಎಂದಿರುವುದು ಸಚಿವರು. ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳಕ್ರ್ ಕುಟುಂಬದಲ್ಲೇ ಅಳಿಯ, ಮಗ ಹುಲಿ ಉಗುರು ಧರಿಸಿರುವ ಫೋಟೊಗಳು ವೈರಲ್ ಆಗಿರುವುದು ಸರ್ಕಾರವನ್ನು ಪೇಚಿಗೆ ಸಿಲುಕಿಸಿದಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ