
ಚಿಕ್ಕಮಗಳೂರು (ಅ.26): ಹುಲಿ ಉಗುರಿನ ಡಾಲರ್ ಧರಿಸಿದ ಪ್ರಕರಣದಲ್ಲಿ ಬಂಧಿಸಲಾಗಿದ್ದ ಚಿಕ್ಕಮಗಳೂರು ತಾಲೂಕಿನ ಖಾಂಡ್ಯಾ ದೇವಸ್ಥಾನದ ಇಬ್ಬರು ಅರ್ಚಕರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಕೋರ್ಟ್.
ಇತಿಹಾಸ ಪ್ರಸಿದ್ಧ ಖಾಂಡ್ಯ ಮಾರ್ಕಂಡೇಶ್ವರ ದೇಗುಲದ ಅರ್ಚಕರಾಗಿರುವ ಕೃಷ್ಣಾನಂದ ಹೊಳ್ಳ (72) ನಾಗೇಂದ್ರ ಜೋಯಿಸಾಗೆ ಜೈಲು ಶಿಕ್ಷೆ. ನ್ಯಾಯಮೂರ್ತಿ ಹರೀಶ್ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ ಹಿನ್ನೆಲೆ ಬಂಧಿಸಿದ ಪೊಲೀಸರು. ಹುಲಿ ಉಗುರು ಧರಿಸಿದ್ದ ಪ್ರಕರಣದಲ್ಲಿ ವಿಚಾರಣೆ ನಡೆಸಿದ ನ್ಯಾಯಾಲಯ ಇಬ್ಬರು ಅರ್ಚಕರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಬಾಳೆಹೊನ್ನೂರು ಅರಣ್ಯ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.. ಖಾಂಡ್ಯ ಮಾರ್ಕಂಡೇಶ್ವರ ದೇವಾಲಯದ ಅರ್ಚಕರಾಗಿರುವ ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ್ ಬಂಧಿತರು. ಚಿಕ್ಕಮಗಳೂರು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜಪಡಿಸಲಾಗಿತ್ತು. ಇಬ್ಬರು ಅರ್ಚಕರು ಹುಲಿ ಉಗುರಿನ ಡಾಲರ್ ಧರಿಸಿದ ಬಗ್ಗೆ ದೂರು ಬಂದ ಹಿನ್ನೆಲೆ ಬಾಳೆಹೊನ್ನೂರು ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದರು.ಕಾರ್ಯಚರಣೆ ವೇಳೆ ಇಬ್ಬರು ಅರ್ಚಕರನ್ನು ಬಂಧಿಸಿ ಮೂರು ಹುಲಿ ಉಗುರು ವಶಕ್ಕೆ ಪಡೆದಿದ್ದ ಅಧಿಕಾರಿಗಳು. ಇಬ್ಬರನ್ನ ವಿಚಾರಣೆ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಅರಣ್ಯ ಇಲಾಖೆಯ ಸಿಬ್ಬಂದಿ.
ಕಾನೂನು ಎಲ್ಲರಿಗೂ ಒಂದೇ, ನಕಲಿ ಹುಲಿ ಉಗುರು ಸಹ ಹಾಕಬಾರದು: ಸಚಿವ ಈಶ್ವರ್ ಖಂಡ್ರೆ
ಕನ್ನಡ ಕಿರುತೆರೆ ರಿಯಾಲಿಟಿ ಶೋ ಬಿಗ್‌ಬಾಸ್ 10ರ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಹುಲಿ ಉಗುರು ಪೆಂಡೆಂಟ್ ಧರಿಸಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಬಳಿಕ ರಾಜ್ಯಾದ್ಯಂತ ಹುಲಿ ಉಗುರಿನ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಸಿನಿಮಾ ನಟರು, ಸ್ವಾಮೀಜಿಗಳು, ರಾಜಕಾರಣಿಗಳು ಸೇರಿದಂತೆ ಹಲವು ಗಣ್ಯರು ಹುಲಿ ಉಗುರು ಧರಿಸಿರುವ ಪ್ರಕರಣ ಬೆಳಕಿಗೆ ಬರುತ್ತಿವೆ.
ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯನ ಕೊರಳಲ್ಲೂ ಹುಲಿ ಉಗುರು! ಇಕ್ಕಟ್ಟಿಗೆ ಸಿಲುಕಿತಾ ಕಾಂಗ್ರೆಸ್ ಸರ್ಕಾರ?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ