ಹುಲಿ ಸಾವು ಕೇಸ್‌: ಕರ್ತವ್ಯ ಲೋಪ ಎಸಗಿದ ಕಾರಣಕ್ಕಾಗಿ 3 ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ

Kannadaprabha News   | Kannada Prabha
Published : Jul 01, 2025, 06:57 AM IST
Tiger dies

ಸಾರಾಂಶ

ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ 5 ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಕಾರಣಕ್ಕಾಗಿ ಮೂವರು ಅರಣ್ಯ ಅಧಿಕಾರಿಗಳನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿ ಅರಣ್ಯ ಪಡೆ ಮುಖ್ಯಸ್ಥರು ಆದೇಶಿಸಿದ್ದಾರೆ.

ಬೆಂಗಳೂರು (ಜು.01): ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ 5 ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಕಾರಣಕ್ಕಾಗಿ ಮೂವರು ಅರಣ್ಯ ಅಧಿಕಾರಿಗಳನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿ ಅರಣ್ಯ ಪಡೆ ಮುಖ್ಯಸ್ಥರು ಆದೇಶಿಸಿದ್ದಾರೆ. ಮಲೆ ಮಹದೇಶ್ವರ ಬೆಟ್ಟ ಅರಣ್ಯ ಪ್ರದೇಶದಲ್ಲಿ ಒಂದು ತಾಯಿ ಮತ್ತು ನಾಲ್ಕು ಮರಿ ಹುಲಿಗಳು ವಿಷ ಪ್ರಾಶನದಿಂದ ಮೃತಪಟ್ಟಿದ್ದು, ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಮೂವರನ್ನು ಬಂಧಿಸಲಾಗಿದ್ದು, ಅರಣ್ಯ ಇಲಾಖೆಯಿಂದ ಉನ್ನತಮಟ್ಟದ ತನಿಖೆಯನ್ನೂ ನಡೆಸಲಾಗುತ್ತಿದೆ. ಇದರ ನಡುವೆಯೇ ಹುಲಿ ಸಾವು ತಡೆಯದ ಹಾಗೂ ಹುಲಿಗಳು ಸಾವಿಗೀಡಾಗಿ 2 ದಿನಗಳಾದರೂ ಅದನ್ನು ಪತ್ತೆ ಮಾಡದೆ ಕರ್ತವ್ಯ ಲೋಪ ಎಸಗಿದ ಕಾರಣಕ್ಕಾಗಿ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಮೂವರು ಅಧಿಕಾರಿಗಳನ್ನು ಕಡ್ಡಾಯ ರಜೆ ಮೇಲೆ ತೆರಳುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಹುಲಿಗಳ ಕಳೇಬರ ರಸ್ತೆಯಿಂದ ಕೇವಲ 100 ಮೀ. ದೂರದಲ್ಲಿ ಪತ್ತೆಯಾಗಿತ್ತು. ಅಲ್ಲದೆ, ಕಳ್ಳಬೇಟೆ ನಿಗ್ರಹ ಶಿಬಿರದ 800 ಮೀ. ದೂರದಲ್ಲಿ ಈ ದುರ್ಘಟನೆ ನಡೆದಿದೆ.

ಜತೆಗೆ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಗೆ 3 ತಿಂಗಳಿನಿಂದ ವೇತನ ನೀಡದೆ ಗಸ್ತು ಕಾರ್ಯಕ್ಕೆ ಅಡಚಣೆ ಉಂಟಾಗುವಂತೆ ಮಾಡಲಾಗಿದೆ. ಇದಕ್ಕೆ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವೈ. ಚಕ್ರಪಾಣಿ, ಹನೂರು ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಜಾನನ ಹೆಗಡೆ ಹಾಗೂ ಹೂಗ್ಯಂ ವನ್ಯಜೀವಿ ವಲಯದ ಉಪ ವಲಯ ಅರಣ್ಯಾಧಿಕಾರಿ ಮಾದೇಶ ಅವರ ಕರ್ತವ್ಯ ಲೋಪ ಕಾರಣ ಎಂದು ಪತ್ತೆ ಮಾಡಲಾಗಿದೆ. ಹೀಗಾಗಿ ಆ ಮೂವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಉನ್ನತ ಮಟ್ಟದ ತನಿಖೆ ನಂತರ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಮಲೇಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ಸಂತೋಷ್‌ ಕುಮಾರ್‌ ಅವರನ್ನು ನೇಮಿಸಲಾಗಿದೆ. ಹಾಗೆಯೇ, ಕೊಳ್ಳೆಗಾಲ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್‌ ಮನೋಹರ್‌ ಅಹಿರಿ ಅವರಿಗೆ ಹನೂರು ವ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆ ಹಾಗೂ ಹನೂರು ಬಫರ್‌ ವಲಯ ಅಧಿಕಾರಿ ಕೆ. ಉಮಾಪತಿ ಅವರಿಗೆ ಹೂಗ್ಯಂ ವನ್ಯಜೀವಿ ವಲಯದ ಉಪ ವಲಯ ಅರಣ್ಯಾಧಿಕಾರಿಯಾಗಿ ಹೆಚ್ಚುವರಿಯಾಗಿ ನೇಮಿಸಿ ಆದೇಶಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!