ತಮ್ಮ ಭವಿಷ್ಯ ಹಾಗೂ ಕಾಂಗ್ರೆಸ್ ಪಕ್ಷದ ವರ್ಚಸ್ಸನ್ನು ದೃಷ್ಟಿಯಲ್ಲಿಟ್ಟುಕೊಂಡು ಬೇರೆ ಪಕ್ಷದ ಶಾಸಕರು ಅವರಾಗಿಯೇ ಕಾಂಗ್ರೆಸ್‌ಗೆ ಬರುವ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಆದರೆ, ಕಾಂಗ್ರೆಸ್‌ಗೆ ಎಷ್ಟುಮಂದಿ ಬರುತ್ತಾರೆ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ, ಕಾಲ ಕೂಡಿ ಬಂದಾಗ ಎಲ್ಲವೂ ನಡೆಯುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮೈಸೂರು (ಆ.24) : ತಮ್ಮ ಭವಿಷ್ಯ ಹಾಗೂ ಕಾಂಗ್ರೆಸ್ ಪಕ್ಷದ ವರ್ಚಸ್ಸನ್ನು ದೃಷ್ಟಿಯಲ್ಲಿಟ್ಟುಕೊಂಡು ಬೇರೆ ಪಕ್ಷದ ಶಾಸಕರು ಅವರಾಗಿಯೇ ಕಾಂಗ್ರೆಸ್‌ಗೆ ಬರುವ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಆದರೆ, ಕಾಂಗ್ರೆಸ್‌ಗೆ ಎಷ್ಟುಮಂದಿ ಬರುತ್ತಾರೆ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ, ಕಾಲ ಕೂಡಿ ಬಂದಾಗ ಎಲ್ಲವೂ ನಡೆಯುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾವು ‘ಆಪರೇಷನ್ ಹಸ್ತ’ ಮಾಡುತ್ತಿಲ್ಲ. ನಾವಾಗಿಯೇ ಪಕ್ಷಕ್ಕೆ ಯಾರನ್ನೂ ಕರೆತರುವ ಪ್ರಯತ್ನ ಮಾಡುತ್ತಿಲ್ಲ. ತಮ್ಮ ಭವಿಷ್ಯ ಹಾಗೂ ಕಾಂಗ್ರೆಸ್ ಪಕ್ಷದ ವರ್ಚಸ್ಸನ್ನು ದೃಷ್ಟಿಯಲ್ಲಿಟ್ಟುಕೊಂಡು ಬೇರೆ ಪಕ್ಷದ ಶಾಸಕರು ಅವರಾಗಿಯೇ ಕಾಂಗ್ರೆಸ್‌ಗೆ ಬರುವ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಬರುವವರನ್ನು ಸ್ವಾಗತಿಸುತ್ತಿದ್ದೇವೆ ಅಷ್ಟೆ. ಆದರೆ, ಪಕ್ಷಕ್ಕೆ ಎಷ್ಟುಮಂದಿ ಬರುತ್ತಾರೆ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಎಲ್ಲದಕ್ಕೂ ಸಮಯ ಕೂಡಿ ಬರಬೇಕು. ಆ ಗಳಿಗೆ ಬಂದಾಗ ಎಲ್ಲವೂ ನಡೆಯುತ್ತದೆ ಎಂದರು.
undefined
ವಿರೋಧದ ಮಧ್ಯೆನೂ ಘರ್ ವಾಪ್ಸಿ ಮಾಡ್ತಿದ್ದಾರಾ ಡಿಕೆಶಿ ? ರಾಜೀನಾಮೆ ಮಾತುಗಳಾಡಿದ್ದೇಕೆ ತನ್ವೀರ್ ಸೇಠ್..?
ಜೆಡಿಎಸ್ ಶಾಸಕರನ್ನು ಕಾಂಗ್ರೆಸ್‌ನವರು ಸೆಳೆಯುತ್ತಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ಆ ಬಗ್ಗೆ ಹೇಳುತ್ತಾ ಹೋದರೆ ಅದು ಬಹಳ ದೊಡ್ಡದಾಗುತ್ತ ಹೋಗುತ್ತದೆ. ಅದರ ಬಗ್ಗೆ ಈಗ ಚರ್ಚೆ ಬೇಡ ಎಂದರು.