
ಬೆಂಗಳೂರು : ‘ನವೆಂಬರ್ 10ರಂದು ಟಿಪ್ಪು ಜಯಂತಿಯ ಮುಖ್ಯ ಆಚರಣೆಯನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿಯೇ ಮಾಡಲಾಗುವುದು. ಕಾರ್ಯಕ್ರಮ ಪ್ರವೇಶಕ್ಕೆ 2 ಸಾವಿರ ಟಿಕೆಟ್ ಮುದ್ರಿಸಿದ್ದು, ಟಿಕೆಟ್ ಇದ್ದವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುವುದು’ ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಆಹ್ವಾನಿಸಿ ಮಾತನಾಡಿದ ಅವರು, ‘ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರಿಗೆ ಉಂಟಾಗಿದ್ದ ಗೊಂದಲದಿಂದಾಗಿ ಸ್ಥಳ ವಿವಾದ ಉಂಟಾಗಿತ್ತು. ಇದೀಗ ಅವರಿಗೂ ಮನವೊಲಿಸಿದ್ದು ವಿಧಾನಸೌಧದಲ್ಲಿಯೇ ಆಚರಣೆ ನಡೆಸಲಾಗುವುದು.
ಕಾರ್ಯಕ್ರಮದಲ್ಲಿ ಗೊಂದಲ ಉಂಟಾಗದಂತೆ ಭಾಗವಹಿಸುವವರ ಸಂಖ್ಯೆಯನ್ನು ಸೀಮಿತಗೊಳಿಸಲಾಗಿದೆ. ಎರಡು ಸಾವಿರ ಟಿಕೆಟ್ ಮಾತ್ರ ಮುದ್ರಿಸುತ್ತಿದ್ದು, ಟಿಕೆಟ್ ಇದ್ದವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುವುದು’ ಎಂದು ತಿಳಿಸಿದರು.
‘ನಮ್ಮ ನಿರೀಕ್ಷೆ ಪ್ರಕಾರ 2 ಸಾವಿರಕ್ಕೂ ಹೆಚ್ಚು ಮಂದಿ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಹೆಚ್ಚುವರಿಯಾಗಿ ಆಗಮಿಸುವವರಿಗೆ ಯಾವ ರೀತಿ ವ್ಯವಸ್ಥೆ ಮಾಡಬೇಕು ಎಂಬುದರ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಯಾರಿಗೂ ಸಮಸ್ಯೆಯಾಗದಂತೆ ಯಾವುದೇ ಗೊಂದಲ ಉಂಟಾಗದಂತೆ ಕಾರ್ಯಕ್ರಮ ನಡೆಸಲಾಗುವುದು’ ಎಂದು ಹೇಳಿದರು.
ಬಿಜೆಪಿ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಬಿಜೆಪಿ ಅವರು ಟಿಪ್ಪು ಜಯಂತಿ ವಿಚಾರದಲ್ಲಿ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರೇ ಹಿಂದೆ ಟಿಪ್ಪು ಜಯಂತಿ ಆಚರಣೆ ಮಾಡಿದ್ದರು. ಈಗ ರಾಜಕೀಯಕ್ಕಾಗಿ ವಿರೋಧ ಮಾಡುತ್ತಿದ್ದಾರೆ. 3 ವರ್ಷದಿಂದ ಬಿಜೆಪಿ ವಿರೋಧ ಮಾಡುತ್ತಲೇ ಇದೆ. ಅದಕ್ಕೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ . ಇನ್ನು ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರು ಬೇಡ ಎಂದು ಅನಂತಕುಮಾರ್ ಹೆಗಡೆ ಹೇಳಿದ್ದಾರೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಗತ್ಯ ಕ್ರಮ ಕೈಗೊಳ್ಳುತ್ತದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ