ಟಿಪ್ಪು ಜಯಂತಿ : ಬಿಎಸ್ ವೈ ವಿಡಿಯೋ ಪ್ರದರ್ಶಿಸಿ ಜಮೀರ್ ಅಣಕ

Published : Nov 09, 2018, 03:15 PM IST
ಟಿಪ್ಪು ಜಯಂತಿ : ಬಿಎಸ್ ವೈ ವಿಡಿಯೋ ಪ್ರದರ್ಶಿಸಿ ಜಮೀರ್ ಅಣಕ

ಸಾರಾಂಶ

ಟಿಪ್ಪು ಜಯಂತಿ ಆಚರಣೆ ಸಂಬಂಧ ವಿಡಿಯೋ ಒಂದನ್ನು ಪ್ರದಶರ್ನ ಮಾಡಿದ ಜಮೀರ್ ಅಹಮದ್ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಬೆಂಗಳೂರು :   ಟಿಪ್ಪು ಜಯಂತಿ ಆಚರಣೆ ವಿಚಾರಣೆಗೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮದ್ ಹೈಡ್ರಾಮ ಮಾಡಿದ್ದು, ಬಿಜೆಪಿಗೆ ಟಾಂಗ್ ನೀಡಿದ್ದಾರೆ. 

ಮೊಬೈಲ್ ವಿಡಿಯೋ ಒಂದನ್ನು ಪ್ರದರ್ಶಿಸಿದ ಜಮೀರ್ ಅಹಮದ್, ಬಿಜೆಪಿ ಬಿಟ್ಟಾಗ ಯಡಿಯೂರಪ್ಪ ಟಿಪ್ಪು ಜಯಂತಿ ಮಾಡಲಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

ಅಬ್ಬಾಬ್ಬಾ ಏನದು ಟಿಪ್ಪು ಕತ್ತಿ ,ಟೊಪ್ಪಿ ವೇಷ ,ಮುಸ್ಲಿಂ ಬಂಧು ಎಂದು ಯಡಿಯೂರಪ್ಪ ಹಾಡಿ ಹೊಗಳಿದ್ದರು.  ಅಲ್ಲದೇ ಟಿಪ್ಪು ಜಯಂತಿ ಆಚರಣೆ ವೇಳೆ ಯಡಿಯೂರಪ್ಪ ಮಾಡಿದ ಡ್ರಾಮಾ ನೋಡಿ ಎಂದು ಜಮೀರ್ ಅಹಮದ್ ವಿಡಿಯೋವನ್ನು ಪ್ರದರ್ಶನ ಮಾಡಿದ್ದಾರೆ. 

ಇನ್ನು ಸಿಎಂ ಕುಮಾರಸ್ವಾಮಿ ಟಿಪ್ಪು ಜಯಂತಿಗೆ  ಗೈರಾಗುವ ಬಗ್ಗೆ ಮಾತನಾಡಿದ ಅವರು, ಬಿಜೆಪಿಯಂತೆ ಟಿಪ್ಪು ಜಯಂತಿ ಆಚರಿಸಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎನ್ನುವ ಭಯದಲ್ಲಿ ಅವರು ಬರುತ್ತಿಲ್ಲ ಎನ್ನಲಾಗುತ್ತಿದೆ.

ಆದರೆ ಅದೆಲ್ಲಾ ಸುಳ್ಳು. ಬಿಜೆಪಿ 2013 ರಲ್ಲಿ ಟಿಪ್ಪು ಜಯಂತಿ ಆಚರಿಸಿಲ್ಲ. ಹೀಗಾಗಿ ಬಿಜೆಪಿ ಅಧಿಕಾರಕ್ಕೆ ಬರಲಿಲ್ಲ. ಸಿದ್ದರಾಮಯ್ಯ 3 ವರ್ಷ ಮಾಡಿದ್ದರು, ಅದಕ್ಕೆ ಅವರು ಪದೇ ಪದೇ‌ ಗೆಲುವು ಸಾಧಿಸಿದರು ಎಂದು ಜಮೀರ್ ಅಹಮದ್ ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಂಗಳೂರು ಏರ್ಪೋರ್ಟ್ ಹೊಸ ಪಿಕ್‌ಅಪ್‌, ಪಾರ್ಕಿಂಗ್ ರೂಲ್ಸ್; ಪ್ರಯಾಣಿಕರ ಸಮಸ್ಯೆ 30 ದಿನಗಳೊಳಗೆ ನಿವಾರಣೆ
ಚಿನ್ನದ ಬೆಲೆ ಲಕ್ಷ ದಾಟಿದ ಬೆನ್ನಲ್ಲೇ ಕರ್ನಾಟಕದ ಈ ಜಿಲ್ಲೆಗೆ ಜಾಕ್‌ಪಾಟ್‌, ಭಾರೀ ಪ್ರಮಾಣದ ಚಿನ್ನದ ನಿಕ್ಷೇಪ ಪತ್ತೆ!