ಜಮೀರ್ ಅವರು ಹೈಕೋರ್ಟ್ ತೀರ್ಪನ್ನು 'ರಾಜಕೀಯ ತೀರ್ಪು' ಎಂದು ವ್ಯಾಖ್ಯಾನಿಸಿದ್ದಾರೆ. ಸಚಿವರು ತಮ್ಮ ಹೇಳಿಕೆ ಮೂಲಕ ಉದ್ದೇಶಪೂರ್ವಕವಾಗಿ ನ್ಯಾಯಾಂಗದ ಘನತೆಗೆ ಚ್ಯುತಿ ಉಂಟುಮಾಡಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ
ಬೆಂಗಳೂರು(ಸೆ.29): ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿಸಿದ ರಾಜ್ಯಪಾಲರ ಕ್ರಮ ಎತ್ತಿ ಹಿಡಿದ ಹೈಕೋರ್ಟ್ ಆದೇಶವನ್ನು 'ರಾಜಕೀಯ ತೀರ್ಪು' ಎಂದಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ದ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಅನುಮತಿಸುವಂತೆ ಕೋರಿ ರಾಜ್ಯ ಅಡ್ವಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಅವರಿಗೆ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಪತ್ರ ಬರೆದಿದ್ದಾರೆ.
ಸೆ.26ರಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸುವಾಗ ಜಮೀರ್ ಅವರು ಹೈಕೋರ್ಟ್ ತೀರ್ಪನ್ನು 'ರಾಜಕೀಯ ತೀರ್ಪು' ಎಂದು ವ್ಯಾಖ್ಯಾನಿಸಿದ್ದಾರೆ. ಸಚಿವರು ತಮ್ಮ ಹೇಳಿಕೆ ಮೂಲಕ ಉದ್ದೇಶಪೂರ್ವಕವಾಗಿ ನ್ಯಾಯಾಂಗದ ಘನತೆಗೆ ಚ್ಯುತಿ ಉಂಟುಮಾಡಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಜಮೀರ್ ಅನ್ನೋ ಮೂರ್ಖನಿಂದ ನ್ಯಾಯಾಂಗ ನಿಂದನೆ; ಮಾಜಿ ಸಚಿವ ಭಗವಂತ ಖೂಬಾ ಕಿಡಿ
ನ್ಯಾಯಾಂಗ ನಿಂದನೆ ಕಾಯಿದೆಯ ಉದ್ದೇಶ ನ್ಯಾಯಾಲಯದ ಘನತೆಯನ್ನು ಎತ್ತಿ ಹಿಡಿ ಯುವುದಷ್ಟೇ ಅಲ್ಲ, ತೀರ್ಪು ನೀಡುವ ನ್ಯಾಯಮೂರ್ತಿಗಳ ಪ್ರಾಮಾ ಣಿಕತೆ, ಪಾವಿತ್ರ್ಯತೆ ಎತ್ತಿ ಹಿಡಿಯುವುದೂ ಆಗಿದೆ. ಹೀಗಾಗಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಕ್ರಿಮಿನಲ್ ಪ್ರಕ್ರಿಯೆ ಆರಂಭಿಸಲು ನ್ಯಾಯಾಂಗ ನಿಂದನೆ ಕಾಯಿದೆ ಅಡಿ ಒಪ್ಪಿಗೆ ನೀಡುವಂತೆ ಅಬ್ರಹಾಂ ಪತ್ರದಲ್ಲಿ ಮನವಿ ಮಾಡಿದ್ದಾರೆ.