
1.ಬುರುಡೆ ಕೇಸ್; ಮಹಜರು ಬೆನ್ನಲ್ಲೇ ಎಸ್ಐಟಿ ಅಸಲಿ ಆಟ ಈಗ ಶುರು!
ಬೆಂಗಳೂರು: ಬುರುಡೆ ಹಿಡಿದುಕೊಂಡು ಬಂದಿದ್ದ ಚಿನ್ನಯ್ಯನನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಮಹಜರು ನಡೆಸಲಗಿತ್ತು. ಇದಕ್ಕೂ ಮೊದಲು ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿಯೂ ಎಸ್ಐಟಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿತ್ತು. ಬಹುತೇಕ ಮಹಜರು ಕಾರ್ಯ ಮುಕ್ತಾಯಗೊಂಡಿದ್ದು ಎಂದು ತಿಳಿದು ಬಂದಿದ್ದು, ಇನ್ಮುಂದೆ ಎಸ್‌ಐಟಿ ತಂಡದ ಅಸಲಿ ಆಟ ಶುರುವಾಗುವ ಸಾಧ್ಯತೆಗಳು ದಟ್ಟವಾಗಿವೆ. ಮಾಹಿತಿ ಈ ವಾರವೇ ಧರ್ಮಸ್ಥಳದಲ್ಲಿ ಶವ ಹೂತಿರುವ ಪ್ರಕರಣ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಲಿದೆ ಎಂದು ತಿಳಿದು ಬಂದಿದೆ.
2. ತಿಂಗಳ ಮೊದಲ ದಿನವೇ ಸಂತಸದ ಸುದ್ದಿ; ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಗಣನೀಯ ಇಳಿಕೆ
ಇಂದು ತಿಂಗಳ ಮೊದಲ ದಿನವಾಗಿದ್ದು, ತೈಲ ಮಾರುಕಟ್ಟೆ ಕಂಪನಿಗಳು LPG ಸಿಲಿಂಡರ್‌ಗಳ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 51.50 ರೂ.ಗಳಷ್ಟು ಕಡಿಮೆಯಾಗಿದೆ. ದೆಹಲಿಯಲ್ಲಿ 19 ಕೆಜಿ ಎಲ್ ಪಿಜಿ ಸಿಲಿಂಡರ್ ಈಗ 1580 ರೂ.ಗೆ ಲಭ್ಯವಿದೆ. ಬೆಲೆ ಇಳಿಕೆಯಿಂದಾಗಿ ಇಂದಿನಿಂದ 51 ರೂ.ಗಳಷ್ಟು ಕಡಿಮೆಯಾಗಲಿದೆ. ವಾಣಿಜ್ಯ ಸಿಲಿಂಡರ್ ಬೆಲೆ ಈಗ ಮುಂಬೈನಲ್ಲಿ 1531.50 ರೂಪಾಯಿ, ಚೆನ್ನೈನಲ್ಲಿ 1738 ರೂಪಾಯಿ ಮತ್ತು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 1,653 ರೂಪಾಯಿ ಆಗಲಿದೆ.
3.ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿಗೆ ಐದು ದಿನ ಭಾರೀ ಮಳೆ ಎಚ್ಚರಿಕೆ!
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣ ಇರುವುದರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಹೆಚ್ಚಿನ ಪ್ರಮಾಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆ.1 ಮತ್ತು ಸೆ.4ರಿಂದ ಸೆ.6ರವರೆಗೆ ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ. ಸೆ.2 ಮತ್ತು ಸೆ.3ಕ್ಕೆ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮಳೆ ಮಾರುತಗಳನ್ನು ಸೆಳೆಯುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ. ಉಳಿದಂತೆ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣದಿಂದ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಧರ್ಮಸ್ಥಳ ಬುರುಡೆ ಕೇಸ್ ಕುರಿತ ಸಂಪೂರ್ಣ ತನಿಖೆಯನ್ನು ಎನ್‌ಐಎಗೆ (ರಾಷ್ಟ್ರೀಯ ತನಿಖಾ ದಳ) ವಹಿಸುವಂತೆ ಒತ್ತಾಯಿಸಿ ಬಿಜೆಪಿ ವತಿಯಿಂದ ಸೋಮವಾರ ‘ಧರ್ಮಸ್ಥಳ ಚಲೋ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ನಡೆಯಲಿರುವ ಈ ಬೃಹತ್ ಸಮಾವೇಶದಲ್ಲಿ ರಾಜ್ಯಾದ್ಯಂತ ಆಗಮಿಸಲಿರುವ 1 ಲಕ್ಷಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇದರಂಗವಾಗಿ ಮಧ್ಯಾಹ್ನ 2 ಗಂಟೆಗೆ ವಿಜಯೇಂದ್ರ ನೇತೃತ್ವದಲ್ಲಿ ‘ಧರ್ಮಸ್ಥಳ ಚಲೋ, ಧರ್ಮದೆಡೆಗೆ ನಮ್ಮ ನಡಿಗೆ’ ಎಂಬ ಧ್ಯೇಯವಾಕ್ಯದೊಂದಿಗೆ ಬೃಹತ್ ಸಮಾವೇಶ ಆಯೋಜಿಸಲಾಗಿದೆ.
5. ಭಾರತದ ‘ಎಜುಕೇಟ್ ಗರ್ಲ್ಸ್’ ಸಂಸ್ಥೆಗೆ ರಾಮನ್ ಮ್ಯಾಗ್ಸಸೇ ಪ್ರಶಸ್ತಿ
ಮುಂಬೈ : ಭಾರತದಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುತ್ತಿರುವ ‘ಎಜುಕೇಟ್ ಗರ್ಲ್ಸ್’ ಸಂಸ್ಥೆ ಪ್ರಸಕ್ತ ಸಾಲಿನ ಪ್ರತಿಷ್ಠಿತ ರಾಮನ್ ಮ್ಯಾಗ್ಸಸೇ ಪ್ರಶಸ್ತಿಗೆ ಭಾಜನವಾಗಿದೆ. ಈ ಮೂಲಕ ಈ ಪುರಸ್ಕಾರ ಪಡೆದ ದೇಶದ ಮೊದಲ ಸಂಸ್ಥೆ ಎನ್ನುವ ಹೆಗ್ಗಳಿಕೆ ಗಳಿಸಿಕೊಂಡಿದೆ. ಏಷ್ಯಾದ ನೊಬೆಲ್ ಎಂದು ಕರೆಯಲ್ಪಡುವ ಈ ಪುರಸ್ಕಾರವನ್ನು ನಿಸ್ವಾರ್ಥ ಸೇವೆ ಮಾಡಿದವರನ್ನು ಗುರುತಿಸಿ ನೀಡಲಾಗುತ್ತದೆ. ಫಿಲಿಪ್ಪೀನ್ಸ್ ಮೂಲದ ರಾಮನ್ ಮ್ಯಾಗ್ಸಸೇ ಅವಾರ್ಡ್ ಫೌಂಡೇಶನ್ ಈ ಪ್ರಶಸ್ತಿ ನೀಡುತ್ತದೆ.
ಎಜುಕೇಟ್ ಗರ್ಲ್ಸ್ ಸಂಸ್ಥೆ, ಹೆಣ್ಣು ಮಕ್ಕಳು ಶಿಕ್ಷಣದ ಮೂಲಕ ಸಾಮಾಜಿಕ ತಾರತಮ್ಯವನ್ನು ಹೊಗಲಾಡಿಸಲು ಸಾಧ್ಯ ಎನ್ನುವ ಬದ್ಧತೆಯೊಂದಿಗೆ ಕಾರ್ಯ ನಿರ್ವಹಿಸುತ್ತಿದೆ. ಈ ಸಂಸ್ಥೆ ಜೊತೆಗೆ ಮಾಲ್ಡೀವ್ಸ್‌ನ ಶಾಹಿನಾ ಅಲಿ ಮತ್ತು ಫಿಲಿಪ್ಪೀನ್ಸ್‌ನ ಫ್ಲೇವಿಯಾನೊ ಆಂಟೋನಿಯೊ ಎಲ್ ವಿಲ್ಲಾನುಯೆವಾ ಕೂಡಾ ಈ ವರ್ಷದ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ