ನಂದಿಬೆಟ್ಟ ಗಿರಿಧಾಮಕ್ಕೆ ರೋಪ್ ವೇ ನಿರ್ಮಾಣ ಮಾಡಲು ತೀರ್ಮಾನ

Published : Jul 16, 2021, 12:06 AM ISTUpdated : Jul 16, 2021, 12:19 AM IST
ನಂದಿಬೆಟ್ಟ ಗಿರಿಧಾಮಕ್ಕೆ ರೋಪ್ ವೇ ನಿರ್ಮಾಣ ಮಾಡಲು ತೀರ್ಮಾನ

ಸಾರಾಂಶ

* ವಿಶ್ವವಿಖ್ಯಾತ ನಂದಿ ಬೆಟ್ಟಕ್ಕೆ ರೋಪ್ ವೇ * ನಂದಿಬೆಟ್ಟ ಗಿರಿಧಾಮಕ್ಕೆ ರೋಪ್ ವೇ ನಿರ್ಮಾಣ ಮಾಡಲು ತಿರ್ಮಾನ.. * ಜುಲೈ 23ಕ್ಕೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರರಿಂದ ರೋಪ್ ವೇ ಸ್ಥಳ ಪರಿಶೀಲನೆ

ಬೆಂಗಳೂರು, (ಜು.15): ನಂದಿಬೆಟ್ಟ ಗಿರಿಧಾಮಕ್ಕೆ ರೋಪ್ ವೇ ನಿರ್ಮಿಸಲು ಜುಲೈ 23ಕ್ಕೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್​ ಸ್ಥಳ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ. 

ಕೆಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ನಂದಿ ಬೆಟ್ಟಕ್ಕೆ ರೋಪ್ ವೇ ಯೋಜನೆಗೆ ತ್ವರಿತವಾಗಿ ಚಾಲನೆ ನೀಡಲು ಅವರು ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಇಂದು (ಗುರುವಾರ) ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 

ಇನ್ಮೇಲೆ ನಂದಿಬೆಟ್ಟ ವೀಕ್ಷಿಸಲು ಬರುವ ಪ್ರವಾಸಿಗರಿಗೆ ಹೊಸ ರೂಲ್ಸ್

ಜತೆಗೆ, ಒಡಿಶಾದ ಕೋನಾರ್ಕ್ ಸೂರ್ಯ ದೇವಾಲಯದ ಮಾದರಿಯಲ್ಲಿ ಶ್ರವಣಬೆಳಗೊಳದಲ್ಲಿ ಬಾಹುಬಲಿ ಸಾಕ್ಷ್ಯಚಿತ್ರ ಪ್ರದರ್ಶನದ ವ್ಯವಸ್ಥೆ ಮಾಡಲಾಗುವುದು. ನಂದಿಬೆಟ್ಟ ಗಿರಿಧಾಮಕ್ಕೆ ರೋಪ್ ವೇಯನ್ನು ಖಾಸಗಿ ಸಂಸ್ಥೆಯೊಂದು ನಿರ್ಮಿಸಲಿದ್ದು, ದೇಶ ವಿದೇಶಗಳಲ್ಲಿ ರೋಪ್ ವೇಗಳನ್ನು ನಿರ್ಮಿಸಿದ ಅನುಭವಿದೆ ಎಂದು ಹೇಳಿದರು. 

185 ಕೋಟಿ ಮೊತ್ತದ ಟೆಂಡರ್ ಕರೆದು ಜೋಗ ಜಲಪಾತದ ಅಭಿವೃದ್ಧಿ ಕೆಲಸ ಮಾಡುತ್ತಿದ್ದೇವೆ. ಜೋಗದಲ್ಲಿ 200-300 ಕ್ಯೂಸೆಕ್ಸ್ ನೀರು ಹರಿಸಿ ವರ್ಷಪೂರ್ತಿ ನೀರು ಹರಿಯುವಂತೆ ಮಾಡಲಿದ್ದೇವೆ. ಹೊನ್ನಾವರದಿಂದ ಜಲಮಾರ್ಗದ ಮೂಲಕ ಗೇರುಸೊಪ್ಪೆಗೆ ತರಲು ಸ್ಪೀಡ್ ಬೋಟ್ ವ್ಯವಸ್ಥೆ ಮಾಡಲಿದ್ದೇವೆ. ಕೇವಲ ವಿದ್ಯುತ್ ಗೆ ಮಾತ್ರ ಜೋಗದ ನೀರು ಬಳಕೆಯಾಗುತ್ತಿತ್ತು. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುವುದರಿಂದ ಜೋಗದಲ್ಲಿ ಪ್ರವಾಸೋದ್ಯಮ ಚಟುವಟಿಕೆ ಹೆಚ್ಚಾಗಲಿದೆ. ಕೇರಳದಿಂದ ಗೋವಾ ಹೋಗುವ ಪ್ರವಾಸಿಗರನ್ನು ಸೆಳೆಯಲು ಸಹ ಕೆಲಸ ನಡೆಯುತ್ತಿದೆ ಎಂದು ಯೋಗೇಶ್ವರ್ ಮಾಹಿತಿ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ