ಮೇ 10 ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿಷೇಧ

By Sathish Kumar KHFirst Published May 2, 2023, 11:09 PM IST
Highlights

ರಾಜ್ಯದಲ್ಲಿ ಮೇ 10 ರಂದು ವಿಧಾನಸಭಾ ಚುನಾವಣೆ ಮತದಾನ ನಡೆಯುತ್ತಿದ್ದು, ಎಲ್ಲ ಮತದಾರರೂ ಮತದಾನದಲ್ಲಿ ಭಾಗವಹಿಸಬೇಕೆಂಬ ಉದ್ದೇಶದಿಂದ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ. 

ಚಿಕ್ಕಬಳ್ಳಾಪುರ (ಮೇ 2): ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಮೇ 10 ರಂದು ಮತದಾನ ನಡೆಯಲಿದೆ. ಈ ವೇಳೆ ಎಲ್ಲ ಮತದಾರರು ಕೂಡ ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕಾದ ಉದ್ದೇಶದಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮಕ್ಕೆ ಮೇ 10ರಂದು ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ.

ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಎಲ್ಲೆಡೆ ಮತದಾನ ಪ್ರಮಾಣವನ್ನು ಹೆಚ್ಚಿಸಲು ಚುನಾವಣಾ ಆಯೋಗ ಹೆಚ್ಚು ಜಾಗೃತಿಯನ್ನು ಮೂಡಿಸುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ನಿವಾಸಿಗಳು ಒಂದು ದಿನ ರಜೆ ಸಿಕ್ಕರೂ ಕೂಡ ಪಕ್ಕದಲ್ಲಿಯೇ ಇರುವ ನಂದಿ ಗಿರಿಧಾಮಕ್ಕೆ ಪ್ರವಾಸಕ್ಕೆ ಹೋಗುವುದನ್ನು ರೂಢಿ ಮಾಡಿಕೊಂಡಿದ್ದಾರೆ. ಆದರೆ, ಮತದಾನ ಪ್ರಕ್ರಿಯೆ ದಿನವೂ ಕೂಡ ಜನರು ಮತದಾನದಲ್ಲಿ ಭಾಗವಹಿಸುವುದು ಬಿಟ್ಟು ನಂದಿ ಗಿರಿಧಾಮಕ್ಕೆ ಬರಬಹುದು ಎಂದು ನಿರೀಕ್ಷಿಸಿ, ಮತದಾನದ ದಿನದಂದು ಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

Latest Videos

ರಾಜ್ಯದ 24 ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಗಳಿಗೆ ಗೇಟ್‌ ಪಾಸ್‌: 6 ವರ್ಷ ಪಕ್ಷದಿಂದ ಉಚ್ಛಾಟನೆ

ಮತದಾನ ಪ್ರಕ್ರಿಯೆಯಲ್ಲಿ ಮತದಾರರೆಲ್ಲರೂ ಕಡ್ಡಾಯವಾಗಿ ಮತದಾನ  ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕೆಂಬ ಚುನಾವಣಾ ಆಯೋಗದ ನಿರ್ದೇಶನ ಮತ್ತು ಸಾರ್ವಜನಿಕರ ಹಿತದೃಷ್ಠಿಯಿಂದ ಚಿಕ್ಕಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಪ್ರವಾಸಿ ತಾಣವಾದ ನಂದಿ ಗಿರಿಧಾಮಕ್ಕೆ ಮೇ 10 ರಂದು ಸಾರ್ವಜನಿಕ ಪ್ರವೇಶಕ್ಕೆ ನಿಷೇಧವನ್ನು ವಿಧಿಸುವುದು ಅವಶ್ಯಕತೆಯಿದೆ. ದಂಡ ಸಂಹಿತೆ ಪ್ರಕ್ರಿಯೆ ಸಂಹಿತೆ (ಸಿ.ಆರ್.ಪಿ.ಸಿ) 1973 ಕಲಂ 144 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಚಿಕ್ಕಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಪ್ರವಾಸಿ ತಾಣವಾದ ನಂದಿ ಗಿರಿಧಾಮಕ್ಕೆ ಮೇ 10 ರಂದು ಬೆಳಿಗ್ಗೆ 5:00 ಗಂಟೆಯಿಂದ ರಾತ್ರಿ 08:00 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧವನ್ನು ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎನ್.ಎಂ.ನಾಗರಾಜ್ ಅವರು ಆದೇಶವನ್ನು ಹೊರಡಿಸಿರುತ್ತಾರೆ.

ಕಾಂಗ್ರೆಸ್‌ನಿಂದ ಬಂಡಾಯವೆದ್ದ ಅಭ್ಯರ್ಥಿಗಳ ಉಚ್ಛಾಟನೆ: ಬೆಂಗಳೂರು- ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿದ್ದರೂ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡದೇ ಬಂಡಾಯವೆದ್ದಿರುವ 24 ಅಭ್ಯರ್ಥಿಗಳಿಗೆ ಕಾಂಗ್ರೆಸ್‌ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಬಂಡಾಯದ ಬಾವುಟ ಹಾರಿಸಿದ್ದ 24 ಅಭ್ಯರ್ಥಿಗಳಿಗೆ ಗೇಟ್ ಪಾಸ್ ನೀಡಲಾಗಿದೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದು ಹಾಕಿ ಬಂಡಾಯ ಅಭ್ಯರ್ಥಿಗಳಿಗೆ ಶಾಕ್ ನೀಡಲಾಗಿದೆ. ಇನ್ನು ಈಗ ಪಕ್ಷದಿಂದ ಉಚ್ಛಾಟನೆಗೊಂಡ ಸದಸ್ಯರು ಮುಂದಿನ 6 ವರ್ಷಗಳ ಕಾಲ ಮತ್ತೆ ಪಕ್ಷವನ್ನು ಸೇರುವಂತಿಲ್ಲ.

ಲಿಂಗಾಯತರನ್ನು ಸೋಲಿಸಲು ಎಲ್ಲ ಮುಸ್ಲಿಮರು ಒಗ್ಗಟ್ಟಾಗಿ: ಶಾಸಕ ರಹೀಂ ಖಾನ್

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು ಎಂದು ಶತಃಪ್ರಯತ್ನ ಮಾಡುತ್ತಿದೆ. ಆದರೆ, ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಮಾಜಿ ಶಾಸಕರು, ಸಚಿವರು, ಕಾಂಗ್ರೆಸ್‌ ಘಟಕದಲ್ಲಿ ಪ್ರಮುಖ ಸ್ಥಾನಮಾನ ಹೊಂದಿದ್ದವರು, ಕಾಂಗ್ರೆಸ್‌ ಮುಖಂಡರು ಹಾಗೂ ಟಿಕೆಟ್‌ ಆಕಾಂಕ್ಷಿಗಳು ಈಗಾಗಲೇ ಟಿಕೆಟ್‌ ಸಿಗದೇ ಬಂಡಾಯ ಸ್ಪರ್ಧೆ ಮಾಡಿದ್ದಾರೆ. ಆದರೆ, ಬಂಡಾಯ ಸ್ಪರ್ಧೆ ಮಾಡಿ ಕಾಂಗ್ರೆಸ್‌ ಬಾವುಟ ಬಳಕೆ ಮಾಡುತ್ತಿದ್ದರೂ ಪಕ್ಷದ ಶಿಸ್ತುಪಾಲನಾ ಸಮಿತಿಯಿಂದ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆದರೆ, ಮತದಾನಕ್ಕೆ ಇನ್ನು 8 ದಿನಗಳು ಬಾಕಿ ಇದೆ ಎನ್ನುವಾಗ ಬಂಡಾಯವೆದ್ದ 24 ಅಭ್ಯರ್ಥಿಗಳನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಛಾಟನೆ ಮಾಡಲಾಗಿದೆ.

click me!