
ರಾಯಚೂರು, ಕೊಪ್ಪಳ (ಜು.17): ಜಿಲ್ಲೆಯ ಗಂಗಾವತಿ ತಾಲೂಕಿನ ದಾಸನಾಳ ಗ್ರಾಮದ ಅಬ್ದುಲ್ (24) ಎಂಬ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕೂಲಿ ಕೆಲಸ ಮಾಡಿಕೊಂಡಿದ್ದ ಮೃತ ಯುವಕ. ಇಂದು ಗಂಗಾವತಿ ನಗರದಲ್ಲಿ ಏಕಾಏಕಿ ಹೃದಯ ಬೇನೆ ಕಾಣಿಸಿಕೊಂಡಿದೆ ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅಬ್ದುಲ್ ಮೃತಪಟ್ಟಿದ್ದಾರೆ.
ಇನ್ನೊಂದೆಡೆ ರಾಯಚೂರಿನಲ್ಲಿ ಮಹಿಳೆಯೋರ್ವರು ಸಹ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸೂಗೂರಿನಿಂದ ಯಡಹಳ್ಳಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಅಕ್ಕಮಹಾದೇವಿ ಶೀಲವಂತರ (65) ಎಂಬ ಮಹಿಳೆ, ಹುನಗುಂದ ಬಳಿ ಬಸ್‌ನಲ್ಲಿಯೇ ಲೋ ಬಿಪಿಯಾಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: Karnataka Heart Attack Rate: ರಾಜ್ಯದಲ್ಲಿ ಸಾಲು ಸಾಲು ಹೃದಯಾಘಾತ; ಸರ್ಕಾರ ಮಹತ್ವದ ಘೋಷಣೆ, ಹೊಸ ಕ್ರಮಗಳೇನು? ತಿಳಿಯಿರಿ
ರಾಜ್ಯದಲ್ಲಿ ಆತಂಕ: ಹೃದಯಾಘಾತದಿಂದ ಸಾವು ಪ್ರಕರಣಗಳು ಹೆಚ್ಚಳ
ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ