
ಬೆಂಗಳೂರು (ನ.29): ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಂಗಳವಾರ ಮತ್ತೆ ಸರಕಾರ ಮೇಜರ್ ಸರ್ಜರಿ ಮಾಡಿದೆ. ಒಟ್ಟು 30 ಇನ್ಸ್‌ಪೆಕ್ಟರ್‌ಗಳನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶವನ್ನು ಹೊರಡಿಸಿದೆ. ಸೋಮವಾರ ಕೂಡ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿತ್ತು. 108 ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿತ್ತು. ಇಂದು ಮತ್ತೆ 30 ಇನ್ಸ್ ಪೆಕ್ಟರ್ ವರ್ಗಾವಣೆ ಮಾಡಿ ಸರ್ಕಾರದ ಆದೇಶ ಹೊರಡಿಸಿದೆ. ಕಾಟನ್ ಪೇಟೆ ಠಾಣೆಯಿಂದ ಪ್ರವೀಣ್ , ಚಿಕ್ಕಮಗಳೂರು ಮಹಿಳಾ ಠಾಣೆಯಿಂದ ಮಹಮ್ಮದ್ ಸಲೀಂ, ತಿಪಟೂರು ಗ್ರಾಮಾಂತ ಠಾಣೆಯಿಂದ ಜಯಲಕ್ಷ್ಮಮ್ಮ ಸೇರಿ ಒಟ್ಟು 30 ಮಂದಿಯ ವರ್ಗಾವಣೆಯಾಗಿದೆ. ವರ್ಗಾವಣೆ ಆಗಿರುವವರ ಸಂಪೂರ್ಣ ವಿವರ ಇಲ್ಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ