ಕಾಂಗ್ರೆಸ್ ಸರ್ಕಾರದ ವರ್ಗಾವಣೆ 'ನೀತಿ'ಗೆ ಕಾಂಗ್ರೆಸ್ಸಿಗರೇ ಗರಂ!

Published : Jun 19, 2023, 05:32 AM ISTUpdated : Jun 19, 2023, 06:25 AM IST
ಕಾಂಗ್ರೆಸ್ ಸರ್ಕಾರದ ವರ್ಗಾವಣೆ 'ನೀತಿ'ಗೆ ಕಾಂಗ್ರೆಸ್ಸಿಗರೇ ಗರಂ!

ಸಾರಾಂಶ

ಕಂದಾಯ ಇಲಾಖೆ ಸೇರಿ ಪ್ರಮುಖ ಇಲಾಖೆಗಳಲ್ಲಿ ನಿಷ್ಠಾವಂತ ಕಾಂಗ್ರೆಸ್ಸಿಗರು ಹಾಗೂ ಶಾಸಕರ ಅಭಿಪ್ರಾಯಕ್ಕೂ ಮನ್ನಣೆ ನೀಡದೆ ಬಿಜೆಪಿ ಅವಧಿಯಲ್ಲಿ ಕಾಂಗ್ರೆಸ್‌ ವಿರುದ್ಧ ಕೆಲಸ ಮಾಡಿದ ಅಧಿಕಾರಿಗಳನ್ನೇ ಆಯಕಟ್ಟಿನ ಹುದ್ದೆಗಳಿಗೆ ನೇಮಕ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಕಾಂಗ್ರೆಸ್‌ ನಾಯಕರಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿದೆ.

ಬೆಂಗಳೂರು (ಜೂ.19) ಕಂದಾಯ ಇಲಾಖೆ ಸೇರಿ ಪ್ರಮುಖ ಇಲಾಖೆಗಳಲ್ಲಿ ನಿಷ್ಠಾವಂತ ಕಾಂಗ್ರೆಸ್ಸಿಗರು ಹಾಗೂ ಶಾಸಕರ ಅಭಿಪ್ರಾಯಕ್ಕೂ ಮನ್ನಣೆ ನೀಡದೆ ಬಿಜೆಪಿ ಅವಧಿಯಲ್ಲಿ ಕಾಂಗ್ರೆಸ್‌ ವಿರುದ್ಧ ಕೆಲಸ ಮಾಡಿದ ಅಧಿಕಾರಿಗಳನ್ನೇ ಆಯಕಟ್ಟಿನ ಹುದ್ದೆಗಳಿಗೆ ನೇಮಕ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಕಾಂಗ್ರೆಸ್‌ ನಾಯಕರಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿದೆ.

ಕಂದಾಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯಲ್ಲಿ ನಡೆಯುತ್ತಿರುವ ವರ್ಗಾವಣೆಗಳ ಬಗ್ಗೆ ಕಾಂಗ್ರೆಸ್‌ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಿಷ್ಠಾವಂತ ನಾಯಕರ ಅಭಿಪ್ರಾಯ ನಿರ್ಲಕ್ಷಿಸಿ ವಸೂಲಿ ಬಾಜಿ ನಡೆಸಲು ಕುಮ್ಮಕ್ಕು ನೀಡುವವರನ್ನು ಪ್ರಮುಖ ಹುದ್ದೆಗಳಿಗೆ ತುಂಬಲಾಗುತ್ತಿದೆ ಎಂದು ರಾಜ್ಯ ನಾಯಕರಿಗೆ ದೂರು ನೀಡಿದ್ದು, ಸದ್ಯದಲ್ಲೇ ಹೈಕಮಾಂಡ್‌ಗೂ ದೂರು ಒಯ್ಯಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.

31 ರಿಸರ್ವ್ ಪೊಲೀಸ್ ಇನ್​ಸ್ಪೆಕ್ಟರ್​ಗಳ ವರ್ಗಾವಣೆ: ಯಾರು, ಎಲ್ಲಿಂದ, ಎಲ್ಲಿಗೆ? ಇಲ್ಲಿದೆ ಮಾಹಿತಿ..

ಉದಾಹರಣೆಗೆ ಕೆ.ಆರ್‌. ಪುರ ಹಾಗೂ ಮಹದೇವಪುರ ಕಾಂಗ್ರೆಸ್‌ ನಾಯಕರು, 2023ರ ಚುನಾವಣೆ ಕೈ ಅಭ್ಯರ್ಥಿಗಳು, ಕೋಲಾರ ಶಾಸಕರೆಲ್ಲರ ತೀವ್ರ ವಿರೋಧದ ನಡುವೆಯೂ ಬೆಂಗಳೂರು ಪೂರ್ವ ತಾಲ್ಲೂಕು ತಹಸೀಲ್ದಾರ್‌ ಆಗಿ ಬಿಜೆಪಿ ಶಾಸಕರೊಬ್ಬರ ಸಂಬಂಧಿಯನ್ನು ನೇಮಿಸಲಾಗಿದೆ.

ಇದನ್ನು ಗಂಭೀರವಾಗಿ ತೆಗೆದುಕೊಂಡು ರಾಜ್ಯ ನಾಯಕರಿಗೆ ದೂರು ನೀಡಿದ್ದಾರೆ. ಅಲ್ಲದೆ, ರಾಜ್ಯ ನಾಯಕರು ಸಮಸ್ಯೆ ಬಗೆಹರಿಸದಿದ್ದರೆ ಹೈಕಮಾಂಡ್‌ ಬಳಿ ಒಯ್ಯುವುದಾಗಿಯೂ ಎಚ್ಚರಿಸಿರುವುದಾಗಿ ತಿಳಿದುಬಂದಿದೆ. ಈ ರೀತಿ ಹಲವು ಇಲಾಖೆಗಳಲ್ಲಿ ಹಿಂದಿನ ಸರ್ಕಾರದಲ್ಲಿ ಆಯಕಟ್ಟಿನ ಜಾಗದಲ್ಲಿದ್ದು ಕಾಂಗ್ರೆಸ್‌ಗೆ ವಿರುದ್ಧವಾಗಿ ಕೆಲಸ ಮಾಡಿದ್ದವರಿಗೆ ಅವಕಾಶ ನೀಡಿರುವ ಗಂಭೀರ ಆರೋಪ ಕೇಳಿ ಬಂದಿದೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಕಾಂಗ್ರೆಸ್‌ ಶಾಸಕರಿಗೆ ಅನುದಾನ ಕಡಿತಗೊಳಿಸಿದ್ದರು. ನಮ್ಮ ವಿರುದ್ಧವಾಗಿ ಕೆಲಸ ಮಾಡುವಂತಹ ಅಧಿಕಾರಿಗಳನ್ನು ನೇಮಿಸಿ ಕಿರುಕುಳ ನೀಡಿದ್ದರು. ಇದೀಗ ನಮ್ಮ ಪಕ್ಷದ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಕಾಂಗ್ರೆಸ್‌ ನಾಯಕರ ಸಲಹೆ ಪರಿಗಣಿಸುತ್ತಿಲ್ಲ. ಈಗಲೂ ಬಿಜೆಪಿ ಪರ ಹಾಗೂ ಕಾಂಗ್ರೆಸ್‌ ವಿರುದ್ಧವಾಗಿ ಕೆಲಸ ಮಾಡಿದವರನ್ನೇ ನೇಮಿಸಲಾಗುತ್ತಿದೆ. ತನ್ಮೂಲಕ ಕಾಂಗ್ರೆಸ್‌ ನಾಯಕರ ಸಹನೆ ಪರೀಕ್ಷಿಸಲಾಗುತ್ತಿದೆ ಎಂದು ರಾಜ್ಯ ನಾಯಕರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

ಭ್ರಷ್ಟಾಚಾರ ಆರೋಪ:

ಕಾಂಗ್ರೆಸ್‌ ನಾಯಕರ ಅಭಿಪ್ರಾಯಕ್ಕೆ ವಿರುದ್ಧವಾಗಿ ವೈಯಕ್ತಿಕ ಹಿತಾಸಕ್ತಿಗಳಿಗಾಗಿ ಸರ್ಕಾರ ಹಾಗೂ ಪಕ್ಷವನ್ನು ಬಲಿಕೊಡುವ ಕೆಲಸ ಆಗುತ್ತಿದೆ. ವಸೂಲಿಬಾಜಿತನದಿಂದ ಪಕ್ಷವನ್ನು ರಕ್ಷಿಸಬೇಕಿದೆ. ಬಿಜೆಪಿ ನಾಯಕರ ಸಂಬಂಧಿಗಳಿಗೆ ಅವಕಾಶ ನೀಡುವುದನ್ನು ಬಿಟ್ಟು ಸಂವಿಧಾನದ ಬಗ್ಗೆ ನಿಷ್ಠೆ ಇರುವವರಿಗೆ ಪ್ರಮುಖ ಅವಕಾಶಗಳು ದೊರೆಯಬೇಕು. ಕಾಂಗ್ರೆಸ್‌ ಸರ್ಕಾರದಲ್ಲೂ ಬಿಜೆಪಿ ಪ್ರಭಾವಿಗಳೇ ನೇಮಕಾತಿಗಳು ನಿಯಂತ್ರಿಸುವುದಾದರೆ ನಮ್ಮ ಸರ್ಕಾರ ಯಾಕೆ ಬೇಕಿತ್ತು ಎಂದು ತೀಕ್ಷ$್ಣವಾಗಿ ದೂರಿರುವುದಾಗಿ ತಿಳಿದುಬಂದಿದೆ.

ರಾಜ್ಯದಲ್ಲಿ ವರ್ಗಾವಣೆಗೆ ಪ್ರತಿ ಹುದ್ದೆಗೂ ದರ ನಿಗದಿ: ಎಚ್‌.ಡಿ.ಕುಮಾರಸ್ವಾಮಿ ಕಿಡಿ

ಶಾಸಕರ ಆಕ್ಷೇಪ ಏನು?

  • ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಕಾಂಗ್ರೆಸ್‌ ಶಾಸಕರಿಗೆ ಅನುದಾನ ಕಡಿತಗೊಳಿಸಿದ್ದರು.
  • ನಮ್ಮ ವಿರುದ್ಧವಾಗಿ ಕೆಲಸ ಮಾಡುವಂತಹ ಅಧಿಕಾರಿಗಳನ್ನು ನೇಮಿಸಿ ಕಿರುಕುಳ ನೀಡಿದ್ದರು.
  • ಈಗಲೂ ಬಿಜೆಪಿ ಪರ ಹಾಗೂ ಕಾಂಗ್ರೆಸ್‌ ವಿರುದ್ಧವಾಗಿ ಕೆಲಸ ಮಾಡಿದವರನ್ನೇ ನೇಮಿಸಲಾಗುತ್ತಿದೆ.
  • ಕಾಂಗ್ರೆಸ್‌ ನಾಯಕರ ಸಲಹೆಗಳನ್ನು ಪರಿಗಣಿಸುತ್ತಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 10 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!