2 ವರ್ಷಕ್ಕೊಮ್ಮೆ ಪೊಲೀಸರ ವರ್ಗ ನಿಯಮ ಮತ್ತೆ ಜಾರಿ?

By Kannadaprabha NewsFirst Published Feb 13, 2021, 7:32 AM IST
Highlights

ರಾಜ್ಯದಲ್ಲಿ ಪೊಲೀಸರ ವರ್ಗಾವಣೆಯನ್ನು ಎರಡು ವರ್ಷಕ್ಕೊಮ್ಮೆ ವರ್ಗಾವಣೆ ಮಾಡುವ ನಿಯಮವನ್ನು ಮತ್ತೆ ಜಾರಿಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. 

 ಬೆಂಗಳೂರು (ಫೆ.13):  ಪೊಲೀಸರನ್ನು ಎರಡು ವರ್ಷಕ್ಕೊಮ್ಮೆ ವರ್ಗಾವಣೆ ಮಾಡುವ ನಿಯಮವನ್ನು ಮತ್ತೆ ಜಾರಿಗೊಳಿಸಲು ಗಂಭೀರ ಚಿಂತನೆ ನಡೆದಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ನಡೆದ ಹಿರಿಯ ಪೊಲೀಸ್‌ ಅಧಿಕಾರಿಗಳ ಸಮ್ಮೇಳನ ಬಳಿಕ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪೊಲೀಸ್‌ ವರ್ಗಾವಣೆಗೆ ಸಂಬಂಧಿಸಿದಂತೆ ಪೊಲೀಸ್‌ ಮಂಡಳಿ ಇದೆ.

 ಮೊದಲು ಎರಡು ವರ್ಷಕ್ಕೊಮ್ಮೆ ವರ್ಗಾವಣೆ ಮಾಡುವ ನಿಯಮ ಜಾರಿಯಲ್ಲಿತ್ತು. ಆದರೆ, ಈ ಹಿಂದಿನ ಸರ್ಕಾರವು ಅದನ್ನು ಒಂದು ವರ್ಷಕ್ಕೆ ಕಡಿತಗೊಳಿಸಿತು. ಇದರಿಂದ ಒಂದೆಡೆ ಪೊಲೀಸರು ದಕ್ಷತೆಯಿಂದ ಕಾರ್ಯನಿರ್ವಹಿಸಲು ಕಷ್ಟಕರವಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಎರಡು ವರ್ಷಕ್ಕೊಮ್ಮೆ ವರ್ಗಾವಣೆ ಮಾಡುವ ನಿಯಮವನ್ನು ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಇನ್ನು ವಾರಕ್ಕೆ 4 ದಿನವಷ್ಟೇ ಕೆಲಸದ ಅವಕಾಶ! ...

ಆನ್‌ಲೈನ್‌ ಗೇಮ್ಸ್‌ಗಳಿಗೆ ಕಡಿವಾಣ ಹಾಕುವ ಸಂಬಂಧ ವಿಸ್ತೃತವಾಗಿ ಚರ್ಚೆ ನಡೆಸಲಾಗುತ್ತಿದೆ. ಕರಡು ರಚನೆ ಮಾಡುವ ಪ್ರಕ್ರಿಯೆಯು ನಡೆಯುತ್ತಿದೆ. ಕಾನೂನು ಇಲಾಖೆಯು ಪರಿಶೀಲನೆ ನಡೆಸಿದ ಬಳಿಕ ಸೂಕ್ತ ಕ್ರಮ ಜರುಗಿಸಲಾಗುವುದು. ಅಲ್ಲದೆ, ಜೈಲಿನಲ್ಲಿ ಅಕ್ರಮ ನಡೆಯುತ್ತಿರುವ ಬಗ್ಗೆಯೂ ವರದಿ ಪಡೆದುಕೊಳ್ಳಲಾಗಿದೆ. ಈ ಬಗ್ಗೆ ಅಧ್ಯಯನ ನಡೆಸಿದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದರು.

click me!