ರಾಜ್ಯ ಸಾರಿಗೆ ಸಿಬ್ಬಂದಿಯಿಂದ ಸರ್ಕಾರಕ್ಕೆ ಡೆಡ್​ಲೈನ್, ಜೊತೆಗೊಂದು ಎಚ್ಚರಿಕೆ

By Suvarna NewsFirst Published Apr 17, 2021, 4:56 PM IST
Highlights

ಸತತವಾಗಿ 11 ದಿನಗಳಿಂದ ಮುಷ್ಕರದಲ್ಲಿ ನಿರತರಾಗಿರುವ ರಾಜ್ಯ ಸಾರಿಗೆ ಸಿಬ್ಬಂದಿ ಸರ್ಕಾರಕ್ಕೆ ಡೆಡ್​ಲೈನ್ ನೀಡಿದ್ದಾರೆ

ಬೆಂಗಳೂರು, (ಏ.17): 6ನೇ ವೇತನಕ್ಕಾಗಿ ರಾಜ್ಯ ಸಾರಿಗೆ ನೌಕರರು ನಡೆಸುತ್ತಿರುವ ಧರಣಿ  11ನೇ ದಿನಕ್ಕೆ ಕಾಲಿಟ್ಟಿದೆ. ಆದ್ರೆ, ರಾಜ್ಯ ಸರ್ಕಾರ ಮಾತ್ರ ಅದ್ಯಾವುದಕ್ಕೂ ಬಗ್ಗುತ್ತಿಲ್ಲ.

ಇನ್ನು ಈ ಬಗ್ಗೆ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಠಿ ನಡೆಸಿದ್ದು, ಮುಷ್ಕರ ನಿರತ ಸಾರಿಗೆ ಸಿಬ್ಬಂದಿಯಿಂದ ಸೋಮವಾರದ ನಂತರ ಜೈಲ್ ಭರೋ ಚಳವಳಿ ಆರಂಭವಾಗಲಿದೆ. ಸೋಮವಾರದ ನಂತರ ಮುಷ್ಕರ ಮತ್ತಷ್ಟು ತೀವ್ರಗೊಳ್ಳುತ್ತೆ. 1 ಲಕ್ಷಕ್ಕೂ ಹೆಚ್ಚು ಜನರು ಜೈಲಿಗೆ ಹೋಗಲು ಸಿದ್ಧರಿದ್ದಾರೆ ಎಂದು ಎಚ್ಚರಿಸಿದರು.

ಸಾರಿಗೆ ಮುಷ್ಕರ ಬೆಂಬಲಿಸಲು ಈಗ ಶಾಸಕರಿಗೆ ಮನವಿ

ಸಾರಿಗೆ ನೌಕರರ ಸಮಸ್ಯೆಗಳ‌ ಬಗ್ಗೆ ರಾಜ್ಯಪಾಲರಿಗೆ ಮನವಿ ಪತ್ರ ಕೊಡುತ್ತೇವೆ. ರಾಜ್ಯಪಾಲರು ಮಧ್ಯ ಪ್ರವೇಶ ಮಾಡಬೇಕು. ಸರ್ಕಾರಕ್ಕೆ ಬುದ್ದಿ ಹೇಳಬೇಕು ಎಂದು ಮನವಿ ಮಾಡಿದರು.

ರಾಜ್ಯ ಸರ್ಕಾರವು ಸಾರಿಗೆ ಕೆಲಸಗಾರರ ಬಗ್ಗೆ ತಿರಸ್ಕಾರ ಭಾವನೆ ತೋರಿಸುತ್ತಿದೆ. ನೌಕರರ ಮನೆ ಮುಂದೆ ಹೋಗಿ ಅವರನ್ನ ಮಾನಸಿಕವಾಗಿ ಘಾಸಿಗೊಳಿಸುತ್ತಿದೆ. ಇದರಿಂದ ನೌಕರರು ಆತ್ಮಹತ್ಯೆ ಮಾಡಿಕೊಳ್ಳುವುದು ಹೆಚ್ಚಾಗಿದೆ. ಸಮಸ್ಯೆ ಬಗ್ಗೆ ಮುಕ್ತ ಮಾತುಕತೆ ಮಾಡಿ ಬಗೆಹರಿಸಬೇಕು. ಆದ್ರೆ ಸರ್ಕಾರ ದೌರ್ಜನ್ಯದ ಮಾರ್ಗ ಅನುಸರಿಸುತ್ತಿದೆ. ಹಲವಾರು ನೌಕರರನ್ನ ಕಾರಣ ಕೊಡದೇ ಅರೆಸ್ಟ್ ಮಾಡಿ, ಭಯೋತ್ಪಾದಕರನ್ನಾಗಿ ನೋಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಜಮಖಂಡಿ: ಮುಷ್ಕರದ ಮಧ್ಯೆ ಬಸ್‌ ಚಾಲನೆ, ಕಲ್ಲೇಟಿಗೆ ಚಾಲಕ ಬಲಿ

ಬಾಗಲಕೋಟೆ ಜಮಖಂಡಿಯಲ್ಲಿ ಸರ್ಕಾರಿ ಬಸ್ ಚಾಲಕನಿಗೆ ಕಲ್ಲಿನಿಂದ ಹಲ್ಲೆ ಅರೋಪ ಪ್ರಸ್ತಾಪಿಸಿದ ಕೋಡಿಹಳ್ಳಿ ಚಂದ್ರಶೇಖರ್, ಘಟನೆಗೆ ವಿಷಾದ ವ್ಯಕ್ತಪಡಿಸಿದರು. ಈ ರೀತಿ ಘಟನೆ ನಡೆಯಬಾರದಿತ್ತು. ನಮ್ಮವರು ಶಾಂತ ರೀತಿಯಲ್ಲಿ ಧರಣಿ ಮಾಡ್ತಿದ್ದಾರೆ. ಸರ್ಕಾರದಿಂದ ಕುಟುಂಬಕ್ಕೆ ಪರಿಹಾರ ನೀಡುವಂತೆ  ಒತ್ತಾಯಿಸಿದರು. 

click me!