
ಬೆಂಗಳೂರು (ಜ.14): ಸಂಸದ ಅನಂತ ಕುಮಾರ್ ಹೆಗಡೆ ಅವರೇ 'ರಾಜ್ಯದ 6.5 ಕೋಟಿ ಜನ ಕನ್ನಡಿಗರ ಪ್ರತಿನಿಧಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಬಳಸಿರುವ ಪದ ರಾಜ್ಯದ ಜನತೆಗೆ ಮಾಡಿದ ಅವಮಾನವಾಗಿದೆ. ನೀವು ಆಡಿರುವ ಮಾತು, ಬಳಸಿರುವ ಪದ ನಿಮ್ಮ ಮಾನಸಿಕ ಸ್ಥಿತಿಯ ಪ್ರತೀಕ. ಸಣ್ಣ ಮಾತು ಆಡುವುದರಿಂದ ನೀವು ದೊಡ್ಡವರಾಗುವುದಿಲ್ಲ. ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ದಿಯ ಬಿಡು' ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನೀತಿ ಪಾಠವನ್ನು ಹೇಳಿದ್ದಾರೆ.
ಸಚಿವ ರಾಮಲಿಂಗಾರೆಡ್ಡಿ ಅವರು ಈ ಕರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. 'ಲೋಕಸಭಾ ಸದಸ್ಯರಾದ ಅನಂತಕುಮಾರ ಹೆಗಡೆ ಅವರೇ, "ಕುಲವಂ ಪೇಳ್ವುದು ನಾಲ್ಗೆ" ಎಂಬ ಮಾತಿನಂತೆ ನಿಮ್ಮ ಸಂಸ್ಕಾರ ಏನು ಎಂಬುದನ್ನು ನೀವಾಡಿರುವ ಮಾತು ಪ್ರತಿಬಿಂಬಿಸುತ್ತಿದೆ. ಇದೇ ಏನು ಬಿಜೆಪಿ ಆರ್‌ಎಸ್‌ಎಸ್, ನಿಮ್ಮ ತಂದೆ-ತಾಯಿ ನಿಮಗೆ ಕಲಿಸಿರುವ ಸಂಸ್ಕೃತಿ. ಇದೇ ಏನು ನಿಮ್ಮ ಆಚಾರ-ವಿಚಾರ? "ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ದಿಯ ಬಿಡು ನಾಲಿಗೆ' ಎಂಬ ದಾಸರವಾಣಿಯನ್ನು ಪರಿಪಾಲಿಸಬೇಕಾದ ಸ್ಥಿತಿಗೆ ನೀವು ಬಂದು ನಿಂತಿರುವುದು ದುರಂತ.
Karnataka murder politics : ನನಗೆ ವಿಷ ಹಾಕಿ ಸಾಯಿಸ್ತಾರೆಂದು ಭಯ ವ್ಯಕ್ತಪಡಿಸಿದ ಸಂಸದ ಜಿ.ಎಂ. ಸಿದ್ದೇಶ್ವರ್!
'ಮಾತು ಆಡಿದರೆ ಹೋಯಿತು, ಮುತ್ತು ಉದುರಿದರೆ ಹೋಯಿತು" ಎಂಬಂತೆ ನೀವು ಮುಖ್ಯಮಂತ್ರಿಗಳ ಬಗ್ಗೆ ಬಳಸಿರುವ ಪದ 6.50 ಕೋಟಿ ಕರ್ನಾಟಕದ ಜನತೆಯನ್ನು ಕುರಿತು ಆಡಿದ ಮಾತಾಗಿರುತ್ತದೆ. ಅವರಿಗೆ ಮಾಡಿದ ಅವಮಾನವಾಗಿತ್ತದೆ. ನೀವು ಆಡಿರುವ ಮಾತು, ಬಳಸಿರುವ ಪದ ನಿಮ್ಮ ಮಾನಸಿಕ ಸ್ಥಿತಿಯ ಪ್ರತೀಕ. ಸಣ್ಣ ಮಾತು ಆಡುವುದರಿಂದ ನೀವು ದೊಡ್ಡವರಾಗುವುದಿಲ್ಲ. ಕೇಂದ್ರ ಸಚಿವರಾಗಿದ್ದಾಗ ಸಂವಿಧಾನ ಬದಲಿಸುತ್ತೇವೆ, ಅದಕ್ಕಾಗಿಯೇ ಅಧಿಕಾರಕ್ಕೆ ಬಂದಿರುವುದು ಎಂದು ಹೇಳಿದ್ದೀರಿ. ಈಗ ಇಂತಹ ಮಾತು. ನಿಮಗಿದು ಮರ್ಯಾದೆ ತರುವುದಿಲ್ಲ.
'ನೀನು ಬಾರದಿದ್ದರೆ ರಾಮಜನ್ಮಭೂಮಿ ನಿಲ್ಲಲ್ಲ ಮಗನೇ..' ಸಿದ್ಧರಾಮಯ್ಯಗೆ ಏಕವಚನದಲ್ಲಿ ವಾಗ್ದಾಳಿ!
ಬಿಜೆಪಿ ಪಕ್ಷಕ್ಕೆ ಕಿಂಚಿತ್ತಾದರೂ ಮಾನ-ಮರ್ಯಾದೆ, ಆಚಾರ ವಿಚಾರ ಇದ್ದರೆ ನಿಮ್ಮ ಮೇಲೆ ಶಿಸ್ತು ಕ್ರಮ ಜರುಗಿಸಬೇಕು. ನೀವು ನಾಡಿನ ಜನರ ಕ್ಷಮೆ ಕೇಳಬೇಕು. ನಿಮಗೆ ಸಂಸದರಲ್ಲ, ಯಾವುದೇ ಚುನಾಯಿತ ಪ್ರತಿನಿಧಿ ಆಗುವ ಯೋಗ್ಯತೆಯೂ ಇಲ್ಲ. ಬೇರೆಯವರಿಗೂ ಮಾತಾಡಲು ಬರುತ್ತದೆ. ಆದರೆ ನಿಮ್ಮ ಮಟ್ಟಕ್ಕೆ ಇಳಿಯುವುದು ಅನಾಗರಿಕತೆ ಆಗುತ್ತದೆ. ಇಷ್ಟು ದಿನ ಅಡ್ರೆಸ್ ಇಲ್ಲದಂತೆ ಕಳೆದು ಹೋಗಿದ್ದ ತಾವು ಈಗ ಚುನಾವಣೆ ಸಮಯದಲ್ಲಿ ಮತ ಗಳಿಸಲು ರೋಷ, ಆವೇಶದ ಮಾತುಗಳನ್ನು ಆಡುತ್ತಿದ್ದೀರಿ ಎಂಬುದನ್ನು ಅರ್ಥ ಮಾಡಿಕೊಳ್ಳದೆ ಇರುವಷ್ಟು ಜನ ದಡ್ಡರಲ್ಲ. ಈ ಬಾರಿ ತಮಗೆ ತಕ್ಕ ಪಾಠ ಕಲಿಸುತ್ತಾರೆ. ನಿಮ್ಮನ್ನು ಶಾಶ್ವತವಾಗಿ ಅಡ್ರೆಸ್ ಗೆ ಇಲ್ಲದಂತೆ ಮಾಡುತ್ತಾರೆ. ನೋಡ್ತಾ ಇರಿ…' ಎಂದು ಎಚ್ಚರಿಕೆಯನ್ನು ರವಾನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ