ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಟಿಟಿ ವಾಹನ ರಸ್ತೆ ಮಧ್ಯೆ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವನಗೂಲ್ ಬಳಿ ನಡೆದಿದೆ. ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನದ ಬಳಿಕ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆಂದು ಬರುವಾಗ ಈ ದುರ್ಘಟನೆ ಸಂಭವಿಸಿದೆ.
ಚಿಕ್ಕಮಗಳೂರು (ಅ.16): ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಟಿಟಿ ವಾಹನ ರಸ್ತೆ ಮಧ್ಯೆ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವನಗೂಲ್ ಬಳಿ ನಡೆದಿದೆ.
ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನದ ಬಳಿಕ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆಂದು ಬರುವಾಗ ಈ ದುರ್ಘಟನೆ ಸಂಭವಿಸಿದೆ. ಟಿಟಿ ವಾಹನದಲ್ಲಿ ಸುಮಾರು 15 ಜನ ಪ್ರಯಾಣಿಕರಿದ್ದು ಕೆಲವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
undefined
ಹೊಸಕೋಟೆ- ದೊಡ್ಡಬಳ್ಳಾಪುರ ರಸ್ತೆಯಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಗುದ್ದಿ ಪಲ್ಟಿ ಹೊಡೆದ ಕಾರು
ಟಿಟಿ ವಾಹನ ಕಾರವಾರ ಜಿಲ್ಲೆಯ ಶಿರಸಿ ಮೂಲದ್ದಾಗಿದೆ. ರಸ್ತೆ ಮಧ್ಯೆ ಪಲ್ಟಿಯಾದ ಟಿಟಿ ವಾಹನ ಸುಮಾರು 50 ಅಡಿಯಷ್ಟು ದೂರ ರಸ್ತೆಯಲ್ಲಿ ಉಜ್ಜಿಕೊಂಡು ಹೋಗಿದೆ. ಚಾಲಕ ಅತಿಯಾದ ವೇಗವಾಗಿ ಇದ್ದ ಕಾರಣದಿಂದಲೇ ಅನಾಹುತ ಸಂಭವಿಸಿದೆ ಎಂದು ಹೇಳಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ವಾಹನ ಪಲ್ಟಿಯಾದ ಕೂಡಲೇ ಸ್ಥಳೀಯರು ಗಾಡಿಯಲ್ಲಿದ್ದವರನ್ನು ಹೊರತೆಗೆದು ಸಹಾಯಕ್ಕೆ ಬಂದಿದ್ದಾರೆ. ಕೆಲವರನ್ನ ಕೂಡಲೇ ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.