ಚಿನ್ನಸ್ವಾಮಿ ಸ್ಟೇಡಿಯಂ ಖ್ಯಾತಿ ಕುಗ್ಗಿಸಲಿದೆಯೇ ತುಮಕೂರು ಅಂತಾರಾಷ್ಟ್ರೀಯ ಸ್ಟೇಡಿಯಂ!

By Sathish Kumar KH  |  First Published Nov 29, 2024, 3:22 PM IST

ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಕಾಮಗಾರಿಗೆ ಡಿ.2 ರಂದು ಚಾಲನೆ ದೊರೆಯಲಿದ್ದು, ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಭಾಗವಹಿಸಲಿದ್ದಾರೆ. ಈ ಹೊಸ ಕ್ರೀಡಾಂಗಣ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಖ್ಯಾತಿಗೆ ಧಕ್ಕೆ ತರುತ್ತದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.


ತುಮಕೂರು (ನ.29): ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಕಾಮಗಾರಿಗೆ ಡಿ.2ರಂದು ಚಾಲನೆ ಸಿಗಲಿದೆ. ಇದಕ್ಕೆ ಸ್ವತಃ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಸೇರಿದಂತೆ ಹಲವು ಕ್ರಿಕೆಟ್ ಜಗತ್ತಿನ ಗಣ್ಯರು ಆಗಮಿಸಲಿದ್ದಾರೆ. ಹಾಗಾದರೆ, ಈ ತುಮಕೂರು ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಸೇವೆಗೆ ಮುಕ್ತಗೊಂಡ ನಂತರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಖ್ಯಾತಿ ಕುಗ್ಗಲಿದೆಯೇ ಎಂಬ ಪ್ರಶ್ನೆ ಎದುರಾಗಿದೆ.

ತುಮಕೂರಿನಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆಯ ಬಗ್ಗೆ ಮಾತನಾಡಿದ ಗೃಹ ಮಂತ್ರಿ ಡಾ.ಜಿ. ಪರಮೇಶ್ವರ ಅವರು, ತುಮಕೂರು ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖೆಗಳ ಯೋಜನೆಯ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲು ಡಿ.2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಗೆ ಆಗಮಿಸಲಿದ್ದಾರೆ. ಇದೇ ವೇಳೆ ತುಮಕೂರು ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಈ ಕಾರ್ಯಕ್ರಮಕ್ಕೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಕೆಎಸ್‌ಸಿಎ ಅಧ್ಯಕ್ಷ ಎ.ರಘುರಾಮ್ ಭಟ್, ಕಾರ್ಯದರ್ಶಿ ಶಂಕರ್ ಸೇರಿದಂತೆ ಮುಂತಾದವರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. 

Tap to resize

Latest Videos

ಇನ್ನು ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಪಿ.ಗೊಲ್ಲಹಳ್ಳಿ ಮತ್ತು ಸೂರೆಕುಂಟೆ ವ್ಯಾಪ್ತಿಯಲ್ಲಿ 41 ಎಕರೆ ಭೂಮಿಯನ್ನು ಕೆಐಎಡಿಬಿ ವತಿಯಿಂದ ಕೆಎಸ್‌ಸಿಎ ಅವರಿಗೆ ಹಸ್ತಾಂತರ ಮಾಡಲಾಗಿದೆ. ಇಲ್ಲಿ ಅಂತಾರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ 150 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಸ್ಟೇಡಿಯಂ ನಿರ್ಮಾಣವಾಗುತ್ತಿದೆ. ಈ ಕ್ರೀಡಾಂಗಣ ನಿರ್ಮಾಣ ಕಾಮಗಾರಿ 2 ವರ್ಷದೊಳಗೆ ಪೂರ್ಣಗೊಳ್ಳಲಿದೆ. ನಂತರ, ಇಲ್ಲಿ ರಾಜ್ಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಎಲ್ಲ ಮಾದರಿಯ ಕ್ರಿಕೆಟ್ ಪಂದ್ಯಗಳನ್ನು ನಡೆಸಲು ಅನುಕೂಲ ಆಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಮಾಧ್ಯಮಗಳ ಮುಂದೆ ಮಾತನಾಡಿದಂತೆ ರಾಜಕೀಯ ನಡೆಯುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಒಟ್ಟಾರೆ, ತುಮಕೂರು ಜಿಲ್ಲೆಗೆ ಸಂಬಂಧಿಸದ ಸುಮಾರು ರೂ. 938 ಕೋಟಿ ಮೊತ್ತದ 825 ಕಾಮಗಾರಿಗಳಿಗೆ ಶಂಕುಸ್ಥಾಪನೆ, 94 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ನೂತನ ಕಾಮಗಾರಿಗಳ ಉದ್ಘಾಟನೆ. ವಿವಿಧ ಇಲಾಖೆಗಳ 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು ವಿತರಣೆ, ಕಂದಾಯ ಇಲಾಖೆಯಿಂದ ಇ-ಸ್ವತ್ತು, ಹಕ್ಕು ಪತ್ರ ವಿತರಿಸಲಾಗುವುದು. ಕೃಷಿ ಇಲಾಖೆಯಿಂದ ಫಲಾನುಭವಿ ರೈತರಿಗೆ ಟ್ರ್ಯಾಕ್ಟರ್, ಡೀಸೆಲ್ ಇಂಜಿನ್, ಪಿವಿಸಿ ಪೈಪ್, ತುಂತುರು ನೀರಾವರಿಯ ಕಿಟ್‌ಗಳು, ತೋಟಗಾರಿಕೆ ಇಲಾಖೆಯಲ್ಲಿ ಹನಿ‌ನೀರಾವರಿ, ಪವರ್‌ಫೀಡರ್ಸ್, ರೇಷ್ಮೇ ಇಲಾಖೆಯ 2100 ಫಲಾನುಭವಿಗಳಿಗೆ ಸೋಂಕು ನಿವರಣಾ ಕಿಟ್, ದೇವರಾಜು ಅರಸು ನಿಗಮದಿಂದ ಮಹಿಳೆಯರಿಗೆ 200 ಹೊಲಿಗೆ ಯಂತ್ರ, ಟ್ಯಾಕ್ಸಿ, ಕಾರ್ಮಿಕ‌ ಇಲಾಖೆಯಿಂದ ವೆಲ್ಡಿಂಗ್ ಟೂಲ್‌ ಕಿಟ್‌ ಸೇರಿದಂತೆ ಜಿಲ್ಲಾಡಳಿತ ಗುರುತಿಸಿರುವ 1.50 ಲಕ್ಷ ಅರ್ಹ ಫಲಾನುಭವಿಗಳಿಗೆ  ಸವಲತ್ತುಗಳನ್ನು ಹಂಚಿಕೆ‌ ಮಾಡಲಾಗುವುದು ಎಂದು‌ ಮಾಹಿತಿ ನೀಡಿದರು.

ಇದನ್ನೂ ಓದಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ 10 ದಿನದಲ್ಲಿ 5 ಬಾಣಂತಿಯರ ಸಾವಿನ ವರದಿ ಮುಚ್ಚಿಟ್ಟ ಸರ್ಕಾರ; ಆರ್. ಅಶೋಕ್!

ನಮ್ಮ ಸರ್ಕಾರವು ಎಲ್ಲ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದೆ. ಅಲ್ಲದೇ, ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೇವೆ ಎಂಬುದು ಜನಸಮೂಹಕ್ಕೆ ಸಂದೇಶ ರವಾನೆಯಾಗಬೇಕು. ಸರ್ಕಾರದ ಮೇಲೆ ಟೀಕೆ ಟಿಪ್ಪಣಿಗಳನ್ನು ಮಾಡುವವರಿಗೆ ಉತ್ತರವಾಗಲಿದೆ. ಕಂದಾಯ ಇಲಾಖೆಯಿಂದ 2000 ಸಾವಿರ ಹಕ್ಕು ಪತ್ರಗಳನ್ನು ಹಂಚಿಕೆ‌ ಮಾಡಲಾಗುವುದು. ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ನಮ್ಮ ಸರ್ಕಾರವು ಮಹಿಳಾ ಸಬಲೀಕರಣಕ್ಕೆ ಹೆಚ್ಚು ಪ್ರಾತಿನಿದ್ಯ ನೀಡಿದೆ. ಸಂಜೀವಿನಿ ಕಾರ್ಯಕ್ರಮದಡಿ 40 ಸಾವಿರ ಮಹಿಳೆಯರಿಗೆ 40 ಕೋಟಿ ರೂ. ನೀಡಲಾಗುತ್ತಿದೆ. ಎಲ್ಲ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂಬುದು ನಮ್ಮ ಸರ್ಕಾರದ ಉದ್ದೇಶ ಎಂದು ತಿಳಿಸಿದರು.

click me!