ಮುಂದಿನ ಮೂರು ವರ್ಷದೊಳಗೆ ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಕಾಮಗಾರಿ ಪೂರ್ಣಗೊಳಿಸಲಾಗುವುದೆಂದು ಸಚಿವ ಸೋಮಣ್ಣ ಹೇಳಿದ್ದಾರೆ.
ಚಿತ್ರದುರ್ಗ (ಜು.22): ಮುಂದಿನ ಮೂರು ವರ್ಷದೊಳಗೆ ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಕಾಮಗಾರಿ ಪೂರ್ಣಗೊಳಿಸಲಾಗುವುದೆಂದು ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
ಭೋವಿ ಗುರುಪೀಠದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜಿಲ್ಲೆಗೆ ಆಗಮಿಸಿದ್ದ ಅವರು ಇಲ್ಲಿ ನೀಲಕಂಠೇಶ್ವರ ದೇವಸ್ಥಾನದಲ್ಲಿ ವೀರಶೈವ ಸಮಾಜದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದರು. ಈಗಾಗಲೇ ರೈಲ್ವೆ ಯೋಜನೆ ಒಂದು ಹಂತಕ್ಕೆ ತರಲಾಗಿದೆ. ದಾವಣಗೆರೆಯಲ್ಲಿ ರೈಲ್ವೆ ಮಾರ್ಗಕ್ಕೆ ಅಗತ್ಯವಾಗಿ ಬೇಕಾದ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ತುಮಕೂರಿನಿಂದ ಭೂ ಸ್ವಾದೀನವಾಗಿದೆ. ಶಿರಾದಿಂದ ಸ್ವಲ್ಪ ಭಾಗ ಭೂಮಿಯನ್ನು ವಶಪಡಿಸಿಕೊಳ್ಳಬೇಕಿದೆ. ಇದರ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಡಿವಿಜನಲ್ ಕಮಿಷನರ್ ಗಳಿಗೆ ಸೂಚನೆ ನೀಡಲಾಗಿದೆ ಎಂದರು.
undefined
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ, ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು
ರಾಮದುರ್ಗ-ತುಮಕೂರು 290 ಕಿಮೀ, ದಾವಣಗೆರೆಯಿಂದ ತುಮಕೂರು ನೇರ ರೈಲ್ವೆ ಮಾರ್ಗ 175 ಕಿಮೀ ಇವೆರಡನ್ನು 2026 ಡಿಸೆಂಬರ್ ಒಳಗಾಗಿ ಪೂರ್ಣ ಮಾಡುವ ಗುರಿ ಇದೆ. ಆದರೂ 2027ರವರೆಗೆ ಸಮಯವನ್ನು ಪಡೆದಿದ್ದೇನೆ. ಚಿತ್ರದುರ್ಗದಲ್ಲಿ ಲೆವೆಲ್ ಕ್ರಾಸಿಂಗ್ ಸೇರಿದಂತೆ ಇತರೆ ಕೆಲಸ ಮಾಡುವಂತೆ ಮನವಿ ಮಾಡಿದ್ದಾರೆ. ಇದರ ಬಗ್ಗೆ ಡಿವಿಜಲ್ ಕಮಿಷನರ್ ಸೇರಿದಂತೆ ಎಲ್ಲಾ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಎಂದರು.
ಚಿತ್ರದುರ್ಗ ಜಿಲ್ಲೆ ಐತಿಹಾಸಿಕವಾಗಿ ಮತ್ತು ಧಾರ್ಮಿಕವಾಗಿ ತನ್ನದೇ ಆದ ಮಹತ್ವ ಪಡೆದುಕೊಂಡಿದ್ದು, ಅನೇಕ ಕಾರ್ಯಯೋಜನೆಗಳು ನೆನೆಗುದಿಗೆ ಬಿದ್ದಿವೆ. ಅದರಲ್ಲೂ ಚಿತ್ರದುರ್ಗ ರೈಲ್ವೆ ನಿಲ್ದಾಣದ ಹತ್ತಿರ ಪಿಬಿ ರಸ್ತೆಯಲ್ಲಿರುವ ರೈಲ್ವೆ ಗೇಟ್‍ಗೆ ಮೇಲು ಸೇತುವೆ ನಿರ್ಮಾಣ ಮಾಡಿಕೊಡುವುದರೊಂದಿಗೆ ಅಲ್ಲಿ ಉಂಟಾಗುವ ವಾಹನ ದಟ್ಟಣೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.
ಬೆಂಗಳೂರಿನ ವೀಕೆಂಡ್ ಒಂಟಿತನ ಕಳೆಯಲು ಆಟೋ ಡ್ರೈವರ್ ಆದ ಟೆಕ್ಕಿ!
ತುರುವನೂರು ರಸ್ತೆಯಲ್ಲಿ ಅವೈಜ್ಞಾನಿಕದಿಂದ ಕೂಡಿರುವ ರೈಲ್ವೆ ಕೆಳಸೇತುವೆಯಲ್ಲಿ ಅದರಲ್ಲೂ ವಿಶೇಷವಾಗಿ ಮಳೆಗಾಲದಲ್ಲಿ ನೀರು ನಿಂತು ಪಾದಾಚಾರಿಗಳಿಗೆ ಮತ್ತು ವಾಹನಗಳಿಗೆ ಓಡಾಡಲು ತೊಂದರೆಯಾಗುತ್ತಿದ್ದು, ಈ ಸಮಸ್ಯೆಯನ್ನು ನಿವಾರಿಸಲು ವೀರಶೈವ ಸಮಾಜದ ವತಿಯಿಂದ ಮನವಿ ಮಾಡಲಾಯಿತು.
ವೀರಶೈವ ಸಮಾಜದ ಅಧ್ಯಕ್ಷ ಹೆಚ್.ಎನ್.ತಿಪ್ಪೇಸ್ವಾಮಿ, ಕಾರ್ಯದರ್ಶಿ ಪಿ.ವಿರೇಂದ್ರಕುಮಾರ್, ಖಂಜಾಚಿ ಕೆ.ಎಂ.ತಿಪ್ಪೇಸ್ವಾಮಿ, ನಿರ್ದೇಶಕರಾದ ಕೆ.ಎನ್.ವಿಶ್ವನಾಥಯ್ಯ, ಜಿ.ಎಂ.ಪ್ರಕಾಶ್, ಎಸ್.ವಿ.ಸಿದ್ದೇಶ್, ಲತಾ ಉಮೇಶ್, ನಿರಂಜನ ದೇವರಮನೆ, ಎಸ್.ವಿ.ಕೋಟ್ರೇಶ್, ಸಿದ್ದಪ್ಪ ಪಿ.ಎಂ.ಪಿಳ್ಳೇಕೇರನಹಳ್ಳಿ, ಗಾಣಿಗ ಸಮಾಜದ ಅಧ್ಯಕ್ಷ ತಿಪ್ಪೇಸ್ವಾಮಿ, ವಿರೂಪಾಕ್ಷಪ್ಪ, ಅಕ್ಕಮಹಾದೇವಿ ಮಹಿಳಾ ಸಮಾಜದ ಉಪಾಧ್ಯಕ್ಷ ಮೋಕ್ಷಾ ರುದ್ರಸ್ವಾಮಿ, ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ವಿಜಯಕುಮಾರ್, ನಿರ್ದೆಶಕ ಪೃಥ್ವೀಶ್ ಇದ್ದರು.