ಮಹಿಳೆಯ ಹೊಟ್ಟೆಯಲ್ಲಿದ್ದ 11.5 ಕೆ.ಜಿ. ತೂಕದ ಗೆಡ್ಡೆಯನ್ನು ನಗರದ ಕುಮಾರ್ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿ ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗಿದಿದ್ದಾರೆ.
ತಿಪಟೂರು (ಜು.12): ಮಹಿಳೆಯ ಹೊಟ್ಟೆಯಲ್ಲಿದ್ದ 11.5 ಕೆ.ಜಿ. ತೂಕದ ಗೆಡ್ಡೆಯನ್ನು ನಗರದ ಕುಮಾರ್ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿ ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗಿದಿದ್ದಾರೆ. ನಗರದ ಗಾಂಧಿನಗರದ ಸುಮಾರು 45 ವರ್ಷದ ಮಹಿಳೆ ಕಳೆದ ಹಲವಾರು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ತಪಾಸಣೆ ಸಂದರ್ಭದಲ್ಲಿ ಮಹಿಳೆಯ ಹೊಟ್ಟೆಯಲ್ಲಿ ಗೆಡ್ಡೆ ಇರುವುದು ಕಂಡು ಬಂತು. ಬಳಿಕ ಕುಮಾರ್ ಆಸ್ಪತ್ರೆಯ ವೈದ್ಯರಾದ ಡಾ.ಶ್ರೀಧರ್ ತಂಡ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸುವ ಮೂಲಕ ಗೆಡ್ಡೆಯನ್ನು ಹೊರ ತೆಗೆದಿದ್ದು, ಈಗ ಮಹಿಳೆ ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.
ಮಹಿಳೆ ಗರ್ಭಕೋಶದಲ್ಲಿ 2.5 ಕೆಜಿ ಗಡ್ಡೆ ಪತ್ತೆ: ಮಹಿಳೆ ಗರ್ಭಕೋಶದಲ್ಲಿ ಬೆಳೆದಿದ್ದ 2.5.ಕೆಜಿ ತೂಕದ ಗಡ್ಡೆಯನ್ನು ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆದು ಆಕೆಯ ಜೀವ ರಕ್ಷಿಸುವಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆ ವೈದ್ಯರು ಸಫಲರಾಗಿದ್ದಾರೆ. ಗರ್ಭ ಕೋಶದ ಸಮಸ್ಯೆಯಿಂದ ಬಳಲುತ್ತಿದ್ದ 47 ವರ್ಷದ ಮಹಿಳೆಯೊಬ್ಬರು ಸೋಮವಾರ(ಮೇ 22)ವಷ್ಟೇ ಕಬ್ಬೂರು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಬಂದು ಪರೀಕ್ಷಿಸಿಕೊಂಡಿದ್ದು, ವೈದ್ಯರು ಹೆಚ್ಚಿನ ತಪಾಸಣೆ ನಡೆಸಿದಾಗ ಗೆಡ್ಡೆ ಬೆಳೆದಿರುವುದು ಪತ್ತೆಯಾಗಿದೆ. ಮಹಿಳೆ ಜೀವಕ್ಕೆ ಅಪಾಯ ಎಂಬುದನ್ನು ಅರಿತ ವೈದ್ಯರ ತಂಡ, ತಕ್ಷಣವೇ ಮಹಿಳೆಯನ್ನು ಚಿಕಿತ್ಸೆಗೆ ದಾಖಲಿಸಿಕೊಂಡರು.
ಮಾರನೇ ದಿನ ಬುಧವಾರವೇ ಶಸ್ತ್ರ ಚಿಕಿತ್ಸೆ ನಡೆಸಿ ಆಕೆಯ ಪ್ರಾಣ ಉಳಿಸಿದ್ದಾರೆ. ಬುಧವಾರ, ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞರಾದ ಡಾ.ವಿಶ್ವನಾಥ ಭೋವಿ ಹಾಗೂ ಡಾ.ಅಮೀತ ಅಂಬಲೆ, ಸೋಮಣ್ಣ , ಸುನೀತಾ, ಅನ್ನಪೂರ್ಣಾ ತಗಲಿ, ಭೀಮಪ್ಪಾ ಕಾಮಗೌಡ, ಸಂಗೀತಾ ಪಾಟೀಲ ಅವರ ತಂಡ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಿ ಗೆಡ್ಡೆಯನ್ನು ಹೊರ ತೆಗೆದಿದ್ದು, 2.5 ಕೆಜಿಯಷ್ಟಿತ್ತು. ಮಹಿಳೆ ಈಗ ಆರೋಗ್ಯವಾಗಿದ್ದಾರೆ ಎಂದು ಈ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿಯೂ ಆದ ಡಾ.ವಿಶ್ವನಾಥ ಕನ್ನಡಪ್ರಭಕ್ಕೆ ಮಾಹಿತಿ ನೀಡಿದರು.
ವನ್ಯಜೀವಿ ಮಾನವ ಸಂಘರ್ಷ: ಕಂಟ್ರೋಲ್ ರೂಂ ಸ್ಥಾಪಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶ
ಮಹಿಳೆಯೊಬ್ಬರ ಗರ್ಭ ಕೋಶದಲ್ಲಿ ಬೆಳೆದಿದ್ದ ಈ ಗಾತ್ರದ ಗಡ್ಡೆಯನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಿರುವ ಕಬ್ಬೂರ ಪಟ್ಟಣದ ಸರ್ಕಾರಿ ಆಸ್ಪತ್ರೆ ವೈದ್ಯರ ಕಾರ್ಯ ನಿಜಕ್ಕೂ ಶ್ಲಾಘನೀಯ. ಜನತೆ ಇಂಥ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡುತ್ತಿರುವ ಈ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲೇ ವೈದ್ಯರು ಯಶಸ್ವಿ ಚಿಕಿತ್ಸೆ ನೀಡಿ ಮಾದರಿಯಾಗಿದ್ದಾರೆ ಎಂದು ಮಹಿಳೆ ಕುಟುಂಬ ಮತ್ತು ಪಟ್ಟಣಿಗರು ಪ್ರಶಂಸೆ ವ್ಯಕ್ತಪಡಿಸಿದರು.