ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿಯ ಜನಸ್ಪಂದನ ಸಮಾವೇಶಕ್ಕೆ ಆಗಮಿಸಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ
ಬೆಂಗಳೂರು, (ಸೆಪ್ಟೆಂಬರ್. 10): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಶನಿವಾರ ನಡೆದ ಬಿಜೆಪಿಯ ಅದ್ದೂರಿ ಜನಸ್ಪಂದನ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.
ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ತೊಟ್ಟಿಲಕೆರೆ ಗ್ರಾಮದ ಸಿದ್ದಲಿಂಗಪ್ಪ ಮೃತ ವೃದ್ಧ. ದ್ದಲಿಂಗಪ್ಪ ಇಂದು(ಸೆಪ್ಟೆಂಬರ್.10) ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಿಜೆಪಿಯ ಜನಸ್ಪಂದನ ಸಮಾವೇಶಕ್ಕೆ ಬಂದಿದ್ರು.
undefined
ಇದು ಜನಸ್ಪಂದನೆಯಲ್ಲ, ಖಾಲಿ ಕುರ್ಚಿಗಳ ಸ್ಪಂದನೆ: ವಿಡಿಯೋ ಬಿಟ್ಟ ಕಾಂಗ್ರೆಸ್
ಆದ್ರೆ, ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಸಿದ್ದಲಿಂಗಪ್ಪ ಹೃದಯಘಾತವಾಗಿದ್ದು, ಸ್ಥಳದಲ್ಲೇ ಕುಸಿದುಬಿದ್ದಿದ್ದಾರೆ. ಕೂಡಲೇ ಸಿದ್ದಲಿಂಗಪ್ಪನನ್ನು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆದಲ್ಲೇ ಕೊನೆಯುಸಿರೆಳೆದಿದ್ದಾರೆ.
ಬಿಜೆಪಿ ಸರ್ಕಾರದ 3 ವರ್ಷದ ಸಾಧನೆ ಹಾಗೂ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಒಂದು ವರ್ಷ ನಡೆಸಿದ ಆಡಳಿತದ ಜೊತೆ ನರೇಂದ್ರ ಮೋದಿ ಸರ್ಕಾರದ ಯೋಜನೆಗಳನ್ನ ಜನರ ಜನತೆ ಮುಂದಿಡಲು ಈ ಸಮಾವೇಶ ಆಯೋಜಿಸಲಾಗಿತ್ತು.
ಸುಮಾರು 40 ಎಕರೆ ವಿಸ್ತೀರ್ಣದಲ್ಲಿ ಜನಸ್ಪಂದನ ಸಮಾವೇಶ ಆಯೋಜನೆ ಮಾಡಿದ್ದು, 3 ಲಕ್ಷ ಜನರಿಗೆ ಊಟದ ವ್ಯವಸ್ಥೆ, ಸುಮಾರು 200 ಎಕರೆ ಪ್ರದೇಶದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ, ಸರ್ಕಾರಿ ಹಾಗೂ ಖಾಸಗಿ ಸೇರಿದಂತೆ 5 ಸಾವಿರ ಬಸ್‌ಗಳ ವ್ಯವಸ್ಥೆ ಮಾಡಲಾಗಿತ್ತು.
ಈ ಸಮಾವೇಶದಲ್ಲಿ ಕೇಂದ್ರದಿಂದ ಸಚಿವೆ ಸ್ಮೃತಿ ಇರಾಣಿ ಬಿಟ್ಟರೇ ಬೇರೆ ಯಾವ ನಾಯರು ಬಂದಿಲ್ಲ. ಇನ್ನುಳಿದಂತೆ ಕರ್ನಾಟಕದ ನಾಯಕರಾದ ಯಡಿಯೂರಪ್ಪ, ಸಿಟಿ ರವಿ, ನಳಿನ್ ಕುಮಾರ್ ಕಟೀಲ್, ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಸಚಿವರು, ಶಾಸರು ಸೇರಿದಂತೆ ಬಿಜೆಪಿಯ ವಿವಿಧ ಮೋರ್ಚಗಳ ನಾಯಕರು ಬಾಗವಹಿಸಿದ್ದರು.