ತುಮಕೂರು ಜಿಲ್ಲೆಯ ಹಾಸ್ಟೆಲ್ ಒಂದರಲ್ಲಿ ವ್ಯಾಸಂಗ ಮಾಡುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿ ಬಾಗೇಪಲ್ಲಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ಚಿಕ್ಕಬಳ್ಳಾಪುರ (ಜ.10): ತುಮಕೂರು ಜಿಲ್ಲೆಯ ಹಾಸ್ಟೆಲ್ ಒಂದರಲ್ಲಿ ವ್ಯಾಸಂಗ ಮಾಡುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿ ಬಾಗೇಪಲ್ಲಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಅಪ್ರಾಪ್ತ ವಯಸ್ಸಿನಲ್ಲಿ ವಿದ್ಯಾರ್ಥಿನಿಯ ಮೇಲೆ ಯಾರು ಅತ್ಯಾಚಾರ ಮಾಡಿದ್ದಾರೆ ಎಂಬುದೇ ಈಗ ಯಕ್ಷ ಪ್ರಶ್ನೆಯಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಆಸ್ಪತ್ರೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಹೆರಿಗೆಯಾಗಿದೆ, ಈ ಬಗ್ಗೆ ಆಸ್ಪತ್ರೆಯಿಂದ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಆಗ ಬಂದು ವಿದ್ಯಾರ್ಥಿನಿಯ ಬಗ್ಗೆ ಮಾಹಿತಿ ಸಂಗ್ರಹ ಮಾಡಿದಾಗ ಆಕೆ, 9ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಆದರೆ, ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಯಾರು ಅತ್ಯಾಚಾರ ಮಾಡಿದ್ದಾರೆ ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಗೇಪಲ್ಲಿ ಠಾಣೆಯ ಪೊಲೀಸರಿಂದ ಪೋಕ್ಸೋ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ.
undefined
Kalaburagi: ಮಂಚಕ್ಕೆ ಕರೆದ ಅಕ್ಕನ ಗಂಡನನ್ನು ಮರ್ಡರ್ ಮಾಡಿಸಿದ ಕಿರಾತಕಿ ನಾದಿನಿ
ತುಮಕೂರಿಗೆ ಕೇಸ್ ವರ್ಗಾಯಿಸಿದ ಪೊಲೀಸರು: ಇನ್ನು ವಿದ್ಯಾರ್ಥಿನಿ ತುಮಕೂರಿನ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಹೀಗಾಗಿ, ಬಾಗೇಪಲ್ಲಿ ಪೊಲೀಸ್ ಠಾಣೆಯಿಂದ ತುಮಕೂರು ನಗರ ಪೊಲೀಸ್ ಠಾಣೆಗೆ ಪೋಕ್ಸೋ ಪ್ರಕರಣವನ್ನು ವರ್ಗಾವಣೆ ಮಾಡಲಾಗಿದೆ. ಆದರೆ, ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿ ಯಾರೆಂಬುದರ ಚಿಂತೆಯಾಗಿದ್ದು, ಪೊಲೀಸರು ಆರೋಪಿಯ ಬೆನ್ನು ಬಿದ್ದಿದ್ದಾರೆ.
ಲೈಂಗಿಕ ಶಿಕ್ಷಣದ ಬಗ್ಗೆ ಮೂಡದ ಒಮ್ಮತ: ನಮ್ಮ ದೇಶದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯರು ಗರ್ಭ ಧರಿಸುವ ಪ್ರಕರಣಗಳು ಇನ್ನೂ ಕಡಿಮೆಯಾಗಿಲ್ಲ. ಜೊತೆಗೆ, ಬಾಲ್ಯ ವಿವಾಹಗಳೂ ಕೂಡ ಆಗಿಂದಾಗ್ಗೆ ನಡೆಯುತ್ತಲೇ ಇವೆ. ಹೀಗಾಗಿ, ಮಕ್ಕಳಿಗೆ ಸಾಮಾನ್ಯ ಶಿಕ್ಷಣದ ಜೊತೆಗೆ ಪ್ರೌಢ ಶಾಲಾ ಹಂತಕ್ಕೆ ಬಂದಾಗ ಲೈಂಗಿಕ ಶಿಕ್ಷಣವನ್ನೂ ನೀಡುವುದು ಅಗತ್ಯವಾಗಿದೆ. ಆದರೆ, ಈ ಬಗ್ಗೆ ಆಯಾ ರಾಜ್ಯ ಸರ್ಕಾರರಗಳು ಸಮರ್ಪಕವಾಗಿ ಶಿಕ್ಷಣ ನೀಡದ ಹಿನ್ನೆಲೆಯಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ ಎಂದೇ ಹೇಳಬಹುದು.
ಮಗುವಿನ ಪ್ರಜ್ಞೆ ತಪ್ಪಿಸಲೋಗಿ ಕೊಂದೇಬಿಟ್ಟೆ; ತಪ್ಪೊಪ್ಪಿಕೊಂಡ ಬೆಂಗಳೂರು ಸ್ಟಾರ್ಟಪ್ ಸಿಇಒ ಸುಚನಾ ಸೇಠ್!
ರಿಪ್ಪನ್‌ಪೇಟೆಯಲ್ಲಿ 9ನೇ ವಿದ್ಯಾರ್ಥಿನಿ ನೇಣಿಗೆ ಶರಣು: ಶಿವಮೊಗ್ಗ (ಜ.10): ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ರಿಪ್ಪನ್‌ಪೇಟೆ ಪಟ್ಟಣದಲ್ಲಿ 9ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮವೊಂದರಲ್ಲಿ ಶಾಲಾ ಬಾಲಕಿಯೊಬ್ಬಳು ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈಕೆ ರಿಪ್ಪನ್‌ಪೇಟೆ ಪಟ್ಟಣದ ಪ್ರೌಡಶಾಲೆಯಲ್ಲಿ 9ನೇ ತರಗತಿ ಓದುತಿದ್ದಳು. 15 ವರ್ಷದ ವಿದ್ಯಾರ್ಥಿನಿ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡಿದ್ದಾಲೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತದೇಹವನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.