
ಬೆಂಗಳೂರು (ಮೇ. 6): ಸಂತಾನಹರಣ ಶಸ್ತ್ರಚಿಕಿತ್ಸೆ(vasectomy operation) ಮಾಡಿಸಿಕೊಂಡ ಮಹಿಳೆಯರು ಬೆಡ್ ಸಿಗದೇ ಆಸ್ಪತ್ರೆಯ ನೆಲದ ಮೇಲೇ ಮಲಗಿದ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಪಾವಗಡದ (pavagada) ಸರ್ಕಾರಿ ಆಸ್ಪತ್ರೆಯಲ್ಲಿ (government Hospital) ಸಂತಾನಹರಣ ಶಸಸ್ತ್ರಚಿಕಿತ್ಸೆ ಮಾಡಿಕೊಂಡ ಮಹಿಳೆಯರು ಆಸ್ಪತ್ರೆಯೆ ಬಾಗಿಲು ಹಾಗೂ ಕೋಣೆಗಳ ಒಳಗೆ ಬರೀ ನೆಲದ ಮೇಲೆ ಮಲಗಿದ್ದರು.
ಶುಕ್ರವಾರ ಪಾವಗಡ ಆಸ್ಪತ್ರೆಯಲ್ಲಿ ಸಂತಾನಹರಣ ಶಸ್ತ್ರ ಚಿಕಿತ್ಸೆ ನಡೆಸಿದ ವೈದ್ಯರು. ಸುಮಾರು 25 ಕ್ಕೂ ಹೆಚ್ಚು ಜನ ಮಹಿಳೆಯರಿಗೆ ಏಕಕಾಲದಲ್ಲಿ ಸಂತಾನಹರಣ ಶಸಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆದರೆ ಅವರಿಗೆ ಬೆಡ್ ವ್ಯವಸ್ಥೆಗಳನ್ನು ಸರಿಯಾಗಿ ಮಾಡಿರಲಿಲ್ಲ. ಇದರಿಂದಾಗಿ ಅವರನ್ನು ಆಸ್ಪತ್ರೆಯ ನೆಲದ ಮೇಲೇ ಮಲಗಿಸಿದ ಘಟನೆ ನಡೆಇಸದೆ.
ಶಸ್ತ್ರ ಚಿಕಿತ್ಸೆಯ ಬಳಿಕ ಆಸ್ಪತ್ರೆಯಲ್ಲಿ ಬೆಡ್‌ಗಾಗಿ ಪರದಾಟ. ಗ್ರಾಮೀಣ ಭಾಗದ ಮಹಿಳೆಯರು ಸೇರಿದಂತೆ ಹಲವರು ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರ ಚಿಕಿತ್ಸೆಯ ಬಳಿಕ ಬೆಡ್ ಮೇಲೆ ಮಲಗಿಸದೆ ನಿರ್ಲಕ್ಷ್ಯ. ಶಸ್ತ್ರ ಚಿಕಿತ್ಸೆ ನಡೆಸಿದ ವೈದ್ಯೆ ಡಾ.ಪೂಜಾ. ಸರ್ಕಾರಿ ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಹಿಡಿಶಾಪ ಹಾಕಿದ್ದಾರೆ.
ಟಿಕ್‌ಟಾಕ್ ಮೂಲಕ ಯುವಕನ ಮೋಹಕ್ಕೆ ಮನಸೋತು ಬಂದ 2 ಮಕ್ಕಳ ತಾಯಿ, ಇದೀಗ ಕಂಗಾಲು
ಕಳೆದ ವರ್ಷ ಯಾದಗಿರಿಯಲ್ಲೂ ಇಂಥದ್ದೇ ಪ್ರಕರಣ ನಡೆದಿತ್ತು. ಜಿಲ್ಲೆಯ ಶಹಾಪುರ ತಾಲೂಕು ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ಮಹಿಳೆಯರು ಆಸ್ಪತ್ರೆ ಗೇಟ್ ಹಾಗೂ ಮೆಟ್ಟಿಲುಗಳ ಮೇಲೆ ಪ್ರಯಾಸಪಟ್ಟು ಮಲಗಿದ್ದರು. ಕೋವಿಡ್ ಹಿನ್ನೆಲೆ 9 ತಿಂಗಳ ವರೆಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡಲು ಸಾಧ್ಯವಾಗಿರಲಿಲ್ಲ. ಇದರಿಂದಾಗಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲು ಮಹಿಳೆಯರು ಮುಂದಾಗಿದ್ದರು ಆರೋಗ್ಯ ಇಲಾಖೆ ಕೋವಿಡ್ ಮುಂಜಾಗ್ರತೆ ವಹಿಸಿ ಶಸ್ತ್ರ ಚಿಕಿತ್ಸೆ ಮಾಡಿರಲಿಲ್ಲ. ಈಗ 9 ತಿಂಗಳ ನಂತರಶಹಾಪುರ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಸಂತಾನ ಹರಣ ಶಸ್ತ್ರ ಚಿಕಿತ್ಸೆ ಹಮ್ಮಿಕೊಂಡಿದ್ದರು.
Tumakuru ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ವಾಸನೆ
ಮಹಿಳೆಯರು ಸಂತಾನ ಹರಣ ಚಿಕಿತ್ಸೆ ಮಾಡಿಸಿಕೊಳ್ಳುವ ಬಗ್ಗೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಮಾಹಿತಿ ಇದ್ದರು ಎಲ್ಲರೂ ಅಗತ್ಯ ಪೂರ್ವ ಸಿದ್ದತೆ ಕೈಗೊಂಡಿರಲಿಲ್ಲ. ಸೂಕ್ತ ಬೆಡ್ ವ್ಯವಸ್ಥೆ ಹಾಗೂ 24 ಗಂಟೆ ನಿಗಾವಹಿಸಬೇಕಾಗಿತ್ತು. ಆದರೆ, ಸಂಪೂರ್ಣ ನಿರ್ಲಕ್ಷ್ಯ ಮಾಡಿರುವುದು ಜನರ ಅಕ್ರೋಶಕ್ಕೆ ಕಾರಣವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ