ವೈಯಕ್ತಿಕ ಖಾತೆಗಳ ನಿರ್ಬಂಧಕ್ಕೆ ಟ್ವೀಟರ್ ಆಕ್ಷೇಪ

Published : Sep 27, 2022, 11:45 AM IST
ವೈಯಕ್ತಿಕ ಖಾತೆಗಳ ನಿರ್ಬಂಧಕ್ಕೆ ಟ್ವೀಟರ್ ಆಕ್ಷೇಪ

ಸಾರಾಂಶ

ಕೆಲವರ ಖಾತೆಗಳ ನಿಬಂರ್‍ಧಕ್ಕೆ ಟ್ವಿಟರ್‌ ಆಕ್ಷೇಪ ಟ್ವೀಟ್‌ ನಿಷೇಧಿಸಬಹುದು ಖಾತೆಯಲ್ಲ ಎಂದು ವಾದ ಅ.17ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು (ಸೆ.27) : ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರ ಪ್ರತಿಭಟನೆ ಮತ್ತು ಕೋವಿಡ್‌ ಸಂದರ್ಭದ ಅಸಮರ್ಪಕ ನಿರ್ವಹಣೆಗೆ ಸಂಬಂಧಿಸಿದಂತೆ ಆಕ್ಷೇಪಾರ್ಹ ಟ್ವೀಟ್‌ ಮಾಡಿದವರ ವ್ಯಕ್ತಿಗತ ಖಾತೆಗಳನ್ನು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರ ಹೊರಡಿಸಿದ ಆದೇಶವನ್ನು ‘ಟ್ವಿಟರ್‌’ ಸಂಸ್ಥೆ ಹೈಕೋರ್ಟನಲ್ಲಿ ತೀವ್ರವಾಗಿ ಆಕ್ಷೇಪಿಸಿದೆ. ಹೊಸ ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳ ಅಡಿಯಲ್ಲಿ ವ್ಯಕ್ತಿಗತವಾಗಿ ಹಲವು ಖಾತೆ ನಿಷೇಧಿಸುವಂತೆ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಹೊರಡಿಸಿರುವ ಆದೇಶಗಳನ್ನು ಪ್ರಶ್ನಿಸಿ ‘ಟ್ವಿಟರ್‌ ಇನ್‌ಕಾರ್ಪೊರೇಟೆಡ್‌’ ಸಲ್ಲಿಸಿರುವ ತಕರಾರು ಅರ್ಜಿ, ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.

ನಕಲಿ ಖಾತೆಗಳ ಬಗ್ಗೆ ಸ್ಪಷ್ಟತೆ ಇಲ್ಲದೆ ಟ್ವೀಟರ್ ಒಪ್ಪಂದ ಇಲ್ಲ: ಎಲಾನ್ ಮಸ್ಕ್

ಟ್ವಿಟರ್‌ ಸಂಸ್ಥೆ ಪರ ಹಿರಿಯ ವಕೀಲ ಅರವಿಂದ್‌ ದಾತಾರ್‌, ದೆಹಲಿ ಸುತ್ತಮುತ್ತ ಕೃಷಿ ಕಾನೂನುಗಳನ್ನು ವಿರೋಧಿಸಿ ವ್ಯಾಪಕವಾಗಿ ನಡೆದಿದ್ದ ರೈತರ ಪ್ರತಿಭಟನೆಯ ಸಂದರ್ಭದಲ್ಲಿ ಹಲವು ಖಾತೆಗಳನ್ನು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರವು ತನಗೆ ನಿರ್ದೇಶಿಸಿತ್ತು. ರೈತರ ಪ್ರತಿಭಟನೆ ಕುರಿತು ಮಾಧ್ಯಮಗಳು ವರದಿ ಪ್ರಸಾರ ಮಾಡಿದಾಗ ಟ್ವಿಟರ್‌ ಖಾತೆಗಳನ್ನು ನಿರ್ಬಂಧಿಸುವಂತೆ ನಮ್ಮನ್ನು ಏಕೆ ಕೇಳಬೇಕು ಎಂದು ಪ್ರಶ್ನಿಸಿದರು.

ಅಲ್ಲದೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್‌ 69ಎ ಅಡಿಯಲ್ಲಿ ಒಟ್ಟಾಗಿ ಹಲವು ಖಾತೆಗಳನ್ನು ನಿರ್ಬಂಧಿಸಲು ಅವಕಾಶ ನೀಡಿಲ್ಲ. ಆಕ್ಷೇಪಾರ್ಹ ಟ್ವೀಟ್‌ಗಳನ್ನು ಮಾತ್ರ ನಿರ್ಬಂಧಿಸಬಹುದು. ಉದಾಹರಣೆಗೆ ರಾಜಕೀಯ ಪಕ್ಷಕ್ಕೆ ಸೇರಿದ ವ್ಯಕ್ತಿ ದೇಶದ ಸಮಗ್ರತೆ ಧಕ್ಕೆಯಾಗುವ ರೀತಿಯಲ್ಲಿ ಮತ್ತು ಸರ್ಕಾರ ಸರಿಯಿಲ್ಲ ಎಂದು ಪದೇ ಪದೇ ಸಂದೇಶ ರವಾನಿಸುತ್ತಿದ್ದರೆ ಆಗ ಟ್ವೀಟ್‌ ಅನ್ನು ನಿಷೇಧಿಸಬಹುದು ಎಂದು ತಿಳಿಸಿದರು.

ಸಂವಿಧಾನದ ಪರಿಚ್ಛೇದ 19 (1)(ಎ) ಆಶಯವೇ ಟೀಕಿಸುವ ಹಕ್ಕು. ಸರ್ಕಾರವನ್ನು ಟೀಕಿಸುವುದು ವಾಕ್‌ ಸ್ವಾತಂತ್ರ್ಯದಲ್ಲಿ ಸೇರಿದೆ. ಕಾನೂನಿನ ವ್ಯಾಪ್ತಿಯಲ್ಲಿ ಸರ್ಕಾರವನ್ನು ಟೀಕಿಸಬಹುದು. ಈ ಕುರಿತು ಸುಪ್ರೀಂ ಕೋರ್ಚ್‌ ಸಹ ಹೇಳಿದೆ. ಹಾಗಾಗಿ, ಕೇಂದ್ರ ಸರ್ಕಾರದ ನಿರ್ಬಂಧ ಆದೇಶ ಮಧ್ಯಸ್ಥಿಕೆದಾರರು (ಟ್ವಿಟರ್‌ ಸಂಸ್ಥೆ) ಮತ್ತು ನಿರ್ದಿಷ್ಟಖಾತೆ ಹೊಂದಿದವರಿಗೆ ಸಮಸ್ಯೆ ಉಂಟು ಮಾಡುತ್ತದೆ. ಟ್ವಿಟರ್‌ಗೆ ಮಾಹಿತಿ ಪೂರೈಸುವುದಕ್ಕೆ ನಿರ್ಬಂಧ ಹೇರುತ್ತದೆ ಎಂದು ತಿಳಿಸಿದರು.

ಅಂತಿಮವಾಗಿ ಇಂತಹದ್ದೇ ವಿಷಯಗಳಿಗೆ ಸಂಬಂಧಿಸಿದಂತೆ ವಿಶ್ವದ ಬೇರೆ ಕಡೆಗಳಲ್ಲಿನ ತುಲನಾತ್ಮಕ ವಿಶ್ಲೇಷಣೆ ಇದ್ದರೆ ಅದನ್ನು ಸಲ್ಲಿಸುವಂತೆ ಟ್ವಿಟರ್‌ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಅ.17ಕ್ಕೆ ಮುಂದೂಡಿತು.

ಟ್ವೀಟರ್ ಎಡಿಟ್ ಬಟನ್ ಶೀಘ್ರದಲ್ಲೇ ಲಭ್ಯ: ಟೆಸ್ಲಾ ಸಿಇಓ ಎಲಾನ್‌ ಮಸ್ಕ್‌ ಟ್ವೀಟ್‌ ಫಲುಶ್ರುತಿ?

ಪ್ರಕರಣವೇನು?

ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆ-2000ರ ಸೆಕ್ಷನ್‌ 69ಎ ಅಡಿಯಲ್ಲಿ 2021ರ ಫೆ.2ರಿಂದ ವಿವಿಧ ದಿನಾಂಕಗಳಲ್ಲಿ ಹಲವು ನೋಟಿಸ್‌ ನೀಡಿರುವ ಕೇಂದ್ರ ಸರ್ಕಾರ 1,474 ಟ್ವಿಟರ್‌ ಖಾತೆಗಳು ಹಾಗೂ 175 ಟ್ವೀಟ್‌ಗಳನ್ನು ಸಂಪೂರ್ಣವಾಗಿ ನಿರ್ಬಂಧಿಸುವಂತೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿರುವ ಅರ್ಜಿದಾರರು, ಕೇಂದ್ರದ ಆದೇಶದಿಂದ ಬಳಕೆದಾರರ ಹಕ್ಕುಗಳ ಉಲ್ಲಂಘನೆ ಆಗಲಿದೆ. ಯಾವ ಕಾರಣಕ್ಕಾಗಿ ಖಾತೆಗಳನ್ನು ನಿರ್ಬಂಧಿಸಬೇಕು ಮತ್ತು ಅದರ ಅಗತ್ಯವೇನಿದೆ ಎಂಬ ಬಗ್ಗೆ ಕೇಂದ್ರ ಸರ್ಕಾರ ವಿವರಿಸಿಲ್ಲ. ಇದು ಏಕಪಕ್ಷೀಯ ನಿರ್ಧಾರವಾಗಿದ್ದು, ಐಟಿ ಕಾಯ್ದೆಗೆ ವಿರುದ್ಧವಾಗಿದೆ ಎಂದು ಆಕ್ಷೇಪಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka News Live: ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ: ಯತೀಂದ್ರಗೆ ಆಲ್ ದಿ ಬೆಸ್ಟ್ ಹೇಳಿದ ಕಾಂಗ್ರೆಸ್ ಶಾಸಕ
ಹಿಂದೂ, ಧರ್ಮವೇ ಅಲ್ಲ, ಅದೊಂದು ಬೈಗುಳ ಶಬ್ದ : ಬಿ.ಜಿ ಕೋಳ್ಸೆ