ಕುಂಭಮೇಳ ಕಾಲ್ತುಳಿತ ದುರಂತ: ಬೆಳಗಾವಿಗೆ ಇಬ್ಬರ ಮೃತದೇಹ ಆಗಮನ

Published : Jan 31, 2025, 07:57 AM IST
ಕುಂಭಮೇಳ ಕಾಲ್ತುಳಿತ ದುರಂತ: ಬೆಳಗಾವಿಗೆ ಇಬ್ಬರ ಮೃತದೇಹ ಆಗಮನ

ಸಾರಾಂಶ

ಜಿಲ್ಲಾಸ್ಪತ್ರೆಯಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷಾ ಪ್ರಕ್ರಿಯೆ ಮುಗಿಸಿ ಕುಟುಂಬಸ್ಥರಿಗೆ ಮೃತದೇಹಗಳನ್ನು ಹಸ್ತಾಂತರಿಸಲಾಯಿತು, ವೇಳೆ, ಸಂಸದರಾದ ಜಗದೀಶ ಶೆಟ್ಟರ್, ಪ್ರಿಯಾಂಕಾ ಜಾರಕಿಹೊಳಿ, ಶಾಸಕರಾದ ಅಭಯ ಪಾಟೀಲ, ಆಸೀಫ್ ಸೇತ್, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪುಷ್ಪನಮನ ಸಲ್ಲಿಸಿದರು. ಮಹಾದೇವಿ ಬಾವನೂರು ಮೃತ ದೇಹಕ್ಕೆ ಕುಟುಂಬಸ್ಥರು ಪೂಜೆ ಸಲ್ಲಿಸಿದರು. 

ಬೆಳಗಾವಿ(ಜ.31):  ಪ್ರಯಾಗರಾಜ್‌ನ ಮಹಾಕುಂಭ ಮೇಳ ದಲ್ಲಿ ಮೌನಿ ಅಮಾವಾಸ್ಯೆಯ ಪುಣ್ಯ ಸ್ನಾನದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಸಾವಿಗೀಡಾದ ಬೆಳಗಾವಿಯ ನಾಲ್ವರ ಪೈಕಿ ಇಬ್ಬರ ಮೃತದೇಹಗಳನ್ನು ದೆಹಲಿಯಿಂದ ವಿಮಾನದ ಮೂಲಕ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಗುರುವಾರ ಸಂಜೆ 6.20ಕ್ಕೆ ಕರೆತರಲಾಯಿತು. ಇನ್ನಿಬ್ಬರ ಮೃತ ದೇಹಗಳು ದಿಲ್ಲಿಯಿಂದ ಗೋವಾ ಮೂಲಕ ತಡರಾತ್ರಿ ಆಗಮಿಸಿದವು.

ಬೆಳಗಾವಿಗೆ ಆಗಮಿಸಿದ ಶಿವಾಜಿನಗರದ ಮಹಾದೇವಿ ಬಾವನೂರ (48) ಹಾಗೂ ಶೆಟ್ಟಿ ಗಲ್ಲಿಯ ಅರುಣ ಕೋಪರ್ಡೆ (61) ಅವರ ಮೃತದೇಹಗಳನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದಿಂದ ಬರಮಾಡಿಕೊಳ್ಳಲಾಯಿತು. ಮಹಾದೇವಿ ಹಾಗೂ ಅರುಣ ಶವಗಳು ಸರಿಯಾದ ಸಮಯಕ್ಕೆ ದೆಹಲಿಗೆ ತಲುಪಿದ ಹಿನ್ನೆಲೆಯಲ್ಲಿ ಮಧ್ಯಾಹ್ನದ ವಿಮಾನದಲ್ಲಿ ದೆಹಲಿಯಿಂದ ನೇರವಾಗಿ ಬೆಳಗಾವಿಗೆ ತೆಗೆದುಕೊಂಡು ಬರಲಾಯಿತು. ವಡಗಾವಿ ಜ್ಯೋತಿ ಹತ್ತ ರವಾಠ, ಪುತ್ರಿ ಮೇಘಾ ಶವಗಳು ತಡವಾಗಿ ತಲುಪಿದ್ದರಿಂದ ದೆಹಲಿಯಿಂದ ಗೋವಾಗೆ, ಅಲ್ಲಿಂದ ಬೆಳಗಾವಿಗೆ ತಲುಪಿದವು.

Maha Kumbh stampede: ಮಗಳ ಆಸೆಯಂತೆ ಮಹಾಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿ ಮದುವೆಗೆ ತಯಾರಿ ನಡೆಸಿದ್ದ ಕುಟುಂಬ ದುರಂತ ಅಂತ್ಯ!

ಬಳಿಕ, ಜಿಲ್ಲಾಸ್ಪತ್ರೆಯಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷಾ ಪ್ರಕ್ರಿಯೆ ಮುಗಿಸಿ ಕುಟುಂಬಸ್ಥರಿಗೆ ಮೃತದೇಹಗಳನ್ನು ಹಸ್ತಾಂತರಿಸಲಾಯಿತು, ವೇಳೆ, ಸಂಸದರಾದ ಜಗದೀಶ ಶೆಟ್ಟರ್, ಪ್ರಿಯಾಂಕಾ ಜಾರಕಿಹೊಳಿ, ಶಾಸಕರಾದ ಅಭಯ ಪಾಟೀಲ, ಆಸೀಫ್ ಸೇತ್, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪುಷ್ಪನಮನ ಸಲ್ಲಿಸಿದರು. ಮಹಾದೇವಿ ಬಾವನೂರು ಮೃತ ದೇಹಕ್ಕೆ ಕುಟುಂಬಸ್ಥರು ಪೂಜೆ ಸಲ್ಲಿಸಿದರು. ಬೆಳಗಾವಿ ಶಿವಾಜಿನಗರದಲ್ಲಿ ಮಹಾದೇವಿ ಅವರ ನಿವಾಸವಿದೆ. ಅಲ್ಲಿ ಪೂಜೆ ಸಲ್ಲಿಸಿ ಧಾರವಾಡ ಜಿಲ್ಲೆಹುಬ್ಬಳ್ಳಿ ತಾಲೂಕಿನ ನೂಲ್ವ ಗ್ರಾಮದಲ್ಲಿ ಅವರ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

ಸಚಿವ ಸತೀಶ್ ಜಾರಕಿಹೊಳಿ ತಲಾ 2 ಲಕ್ಷ ಪರಿಹಾರ: 

ಮೃತರ ಕುಟುಂಬದ ಅವಲಂಬಿತರಿಗೆ ತಂದೆ, ಸಚಿವ ಸತೀಶ ಜಾರಕಿಹೊಳಿ ಅವರುವೈಯಕ್ತಿಕವಾಗಿ ತಲಾ 2 ಲಕ ಪರಿಹಾರ ನೀಡಲಿದ್ದಾರೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಇದೆ ವೇಳೆ ಹೇಳಿದರು.

ಪ್ರಯಾಗ್‌ರಾಜ್‌ ಕುಂಭಮೇಳ ಕಾಲ್ತುಳಿತ: ಬೆಳಗಾವಿಯ ತಾಯಿ-ಮಗಳು ದುರ್ಮರಣ

ಬಿಮ್ಸ್‌ ನಲ್ಲೇ ಏಕೆ ಮರಣೋತ್ತರ ಪರೀಕ್ಷೆ?: 

ಪ್ರಯಾಗರಾಜ್‌ನಲ್ಲಿ ನಡೆದ ಕಾಲ್ತುಳಿತದಿಂದ ಮೃತಪಟ್ಟಿರುವ ಒಟ್ಟು 30 ಜನರಲ್ಲಿ ನಾಲ್ವರು ಬೆಳಗಾವಿಯವರೇ ಇದ್ದಾರೆ. ಅಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ಸಾಧ್ಯವಾಗಲಿಲ್ಲ. ಹೀಗಾಗಿ ದೆಹಲಿಯ ಆಸ್ಪತ್ರೆಯಲ್ಲಿ ನಡೆಸಲು ನಿರ್ಧ ರಿಸಲಾಗಿತ್ತು. ಆದರೆ, ಅಲ್ಲಿ ವಿಮಾನಗಳ ಸಮಯ ಹೊಂದಾಣಿಕೆ ಆಗದ ಹಿನ್ನೆಲೆ ಉತ್ತರಪ್ರದೇಶ ಮತ್ತು ದೆಹಲಿ ಪೊಲೀಸರು ನೀಡಿದ ಪ್ರಮಾಣಪತ್ರ ಆಧಾರದ ಮೇಲೆ ಏರ್ ಲಿಫ್ಟ್ ಮಾಡಲಾಗಿದೆ ಎಂದು ಡಿಸಿ ಮೊಹಮ್ಮದ ರೋಷನ್ ತಿಳಿಸಿದರು. ನಾಲ್ವರ ಮರಣೋತ್ತರ ಪರೀಕ್ಷೆಗಳನ್ನು ಬೆಳಗಾವಿ ಬಿಮ್ಸ್‌ನಲ್ಲಿಯೇ ಮಾಡಲು ನಿರ್ಧರಿಸಲಾಯಿತು ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌