
ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಈ ದುರಂತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಬೈಕ್‌ಗೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಕಮಲಾಪುರ ನಿವಾಸಿ 26ರ ಹರೆಯದ ಕೃಷ್ಣ ಹಾಗೂ ವೆಂಕಟಾಪುರದ 50 ವರ್ಷ ಪ್ರಾಯದ ಹನುಮಂತಪ್ಪ ಎಂದು ಗುರುತಿಸಲಾಗಿದೆ. ಇಬ್ಬರು ಅರಣ್ಯ ಇಲಾಖೆಯಲ್ಲಿ ವಾಚರ್‌ಗಳಾಗಿ ಕೆಲಸ ಮಾಡುತ್ತಿದ್ದರು.
ಇಬ್ಬರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದು, ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಇವರ ಬೈಕ್‌ಗೆ ಬುಲೆರೋ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಇಬ್ಬರು ಹೊರಗುತ್ತಿಗೆ ಆಧಾರದ ಮೇಲೆ ಅರಣ್ಯ ಇಲಾಖೆಯಲ್ಲಿ ವಾಚರ್‌ಗಳಾಗಿ ಕೆಲಸ ಮಾಡುತ್ತಿದ್ದರು. ಘಟನೆಯ ಬಳಿಕ ಬೊಲೆರೋ ವಾಹನ ಎಸ್ಕೇಪ್ ಆಗಿದ್ದು, ವಾಹನವನ್ನು ಹಿಡಿದು ಪೊಲೀಸರು ಪ್ರಕರ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಹಂಪಿ ಸಿಪಿಐ ರಾಜೇಶ್ ಭಟಗುರ್ಕಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಕಲಬುರಗಿ: ನಡುರಸ್ತೆಯಲ್ಲೇ ಸರ್ಕಾರಿ ಶಾಲಾ ಶಿಕ್ಷಕಿಯ ಬರ್ಬರ ಹತ್ಯೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ