ಕೊರೋನಾ ವಿರುದ್ಧ ಹೋರಾಟ: ಬೋಯಿಂಗ್‌ ಇಂಡಿಯಾದಿಂದ ಬೆಂಗ್ಳೂರು, ಕಲಬುರಗಿಯಲ್ಲಿ ಆಸ್ಪತ್ರೆ

By Kannadaprabha NewsFirst Published May 8, 2021, 7:33 AM IST
Highlights

ಆಕ್ಸಿಜನ್‌ ವ್ಯವಸ್ಥೆಯುಳ್ಳ 200 ಹಾಸಿಗೆ ಆಸ್ಪತ್ರೆ ನಿರ್ಮಾಣ| ರಾಜ್ಯ ಸರ್ಕಾರ ಧನ್ಯವಾದ| ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಆಮ್ಲಜನಕದ ಪೂರೈಕೆಯ ಹೊರೆ ಕಡಿಮೆ ಮಾಡಲು ಇದು ಸಹಾಯ| 

ಬೆಂಗಳೂರು(ಮೇ.08):  ಬೋಯಿಂಗ್‌ ಇಂಡಿಯಾ ಸಂಸ್ಥೆಯು ಸಿಎಸ್‌ಆರ್‌ ಅನುದಾನದಡಿ ಬೆಂಗಳೂರಿನ ಯಲಹಂಕದಲ್ಲಿ 200 ಮತ್ತು ಕಲಬುರಗಿಯಲ್ಲಿ 250 ಆಕ್ಸಿಜನ್‌ ವ್ಯವಸ್ಥೆಯುಳ್ಳ ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗಿದೆ.

ಈ ವಿಷಯವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಟ್ವೀಟ್‌ ಮೂಲಕ ತಿಳಿಸಿದ್ದು, ಇದಕ್ಕೆ ರಾಜ್ಯ ಸರ್ಕಾರವು ಧನ್ಯವಾದ ತಿಳಿಸಿದೆ. ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದು, ರಾಜ್ಯದಲ್ಲಿ ಕೊರೋನಾ ಸೋಂಕಿನ ಪಾಸಿಟಿವಿಟಿ ಪ್ರಮಾಣ ಶೇ.30ಕ್ಕಿಂತ ಹೆಚ್ಚಳವಾಗುತ್ತಿದೆ. 5,17,075 ಸಕ್ರಿಯ ಪ್ರಕರಣಗಳಿವೆ. ಇಂತಹ ಪರಿಸ್ಥಿತಿಯಲ್ಲಿ ಆಕ್ಸಿಜನ್‌ ಬೇಡಿಕೆ ಹೆಚ್ಚಳವಾಗಿದೆ. ಪ್ರಸ್ತುತ ರಾಜ್ಯದಲ್ಲಿ 1500 ಮೆಟ್ರಿಕ್‌ಟನ್‌ ಆಕ್ಸಿಜನ್‌ ಅವಶ್ಯಕತೆ ಇದ್ದು, ಕೇಂದ್ರ ಸರ್ಕಾರ 965 ಮೆಟ್ರಿಕ್‌ ಟನ್‌ ಹಂಚಿಕೆ ಅಗತ್ಯವಿದೆ. ಬೋಯಿಂಗ್‌ ಇಂಡಿಯಾವನ್ನು ತಮ್ಮ ಸಿಎಸ್‌ಆರ್‌ ಚಟುವಟಿಕೆಗಳ ಅಡಿಯಲ್ಲಿ ಕಲಬುರಗಿಯಲ್ಲಿ 250 ಆಕ್ಸಿಜನ್‌ ಹಾಸಿಗೆಗಳ ಆಸ್ಪತ್ರೆ ನಿರ್ಮಿಸುತ್ತಿರುವುದು ಸಹಾಯಕವಾಗಲಿದೆ ಎಂದು ತಿಳಿಸಿದ್ದಾರೆ.

"

ಗಂಭೀರವಿಲ್ಲದ ಕೊರೋನಾ ರೋಗಿಗಳು ಆಸ್ಪತ್ರೆಯಿಂದ ಶಿಫ್ಟ್‌

ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಆಮ್ಲಜನಕದ ಪೂರೈಕೆಯ ಹೊರೆ ಕಡಿಮೆ ಮಾಡಲು ಇದು ನಮಗೆ ಸಹಾಯ ಮಾಡುತ್ತದೆ. ಉತ್ತರ ಕರ್ನಾಟಕದ ಜಿಲ್ಲೆಗಳು ವಿಶೇಷವಾಗಿ ಬೀದರ್‌, ಕಲಬುರಗಿ, ಬೆಳಗಾವಿ, ರಾಯಚೂರು ಸಹ ಕೋವಿಡ್‌ -19 ಸಾಂಕ್ರಾಮಿಕ ರೋಗದಿಂದ ಹೆಚ್ಚು ಪರಿಣಾಮ ಬೀರುತ್ತಿದೆ. ಅಲ್ಲದೆ, ಇಡೀ ಪ್ರದೇಶದಲ್ಲಿ ವೈದ್ಯಕೀಯ ಮೂಲಸೌಕರ್ಯ ಸೌಲಭ್ಯದ ಕೊರತೆ ಉಂಟಾಗಿದೆ ಎಂದಿದ್ದಾರೆ. ಇದಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಟ್ವೀಟ್‌ ಮೂಲಕ ಉತ್ತರ ನೀಡಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

click me!