
ಗದಗ: ರಸ್ತೆ ಬದಿ ನಡೆದು ಹೋಗುತ್ತಿದ್ದ ಇಬ್ಬರು ಪಾದಚಾರಿಗಳಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಗಳಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ ಆಘಾತಕಾರಿ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಲಕ್ಷ್ಮೇಶ್ವರ ಪಟ್ಟಣದ ಚನ್ನಮ್ಮ ಕಾಲೇಜ್ ಬಳಿ ಕಾರು ಚಾಲಕನೋರ್ವ ನಿದ್ದೆ ಮಂಪರಿನಲ್ಲಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಮೃತರನ್ನು 48 ವರ್ಷದ ಶಿವಾನಂದ ಹುಲಕೋಟಿ ಹಾಗೂ 40 ವರ್ಷದ ಅಶೋಕ್ ಸರ್ವಿ ಎಂದು ಗುರುತಿಸಲಾಗಿದೆ. ಈ ಕಾರು ಮಹಾರಾಷ್ಟ್ರದಿಂದ ಲಕ್ಷೇಶ್ವರಕ್ಕೆ ಬರುತ್ತಿತ್ತು.
ಚನ್ನಮ್ಮ ಸರ್ಕಲ್‌ಗೆ ಬರುತ್ತಿದ್ದಂತೆ ಕಾರು ಚಾಲಕನಿಗೆ ನಿದ್ದೆ ಮಂಪರು ಆಗಿದ್ದು, ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ನಡೆದು ಹೋಗುತ್ತಿದ್ದ ಪಾದಚಾರಿಗಳ ಮೇಲೆ ಹತ್ತಿದೆ. ಘಟನೆಯಲ್ಲಿ ಮತ್ತೊಬ್ಬ ಪಾದಚಾರಿಯೂ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಇದೆ.
ಅಪಘಾತದಲ್ಲಿ ಮೃತರಾದ ಅಶೋಕ್ ಹಾಗೂ ಶಿವಾನಂದ ಬೆಳಗಿನ ಜಾವ ಅಂಬೇಡ್ಕರ್ ಬಡಾವಣೆಯಿಂದ ವಾಕ್ ಬಂದಿದ್ದರು. ಅವರು ನಡೆದು ಬರುತ್ತಿದ್ದಾಗಲೇ ಏಕಾಏಕಿ ಎದುರಿಗೆ ಬಂದ ಹುಂಡೈ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಲಕ್ಷ್ಮೇಶ್ವರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಬಿಸಿಲಿಗೆ ಬೆಂದ ಬೆಂಗಳೂರು ಜನರಿಗೆ ಸಿಹಿ ಸುದ್ದಿ: ಸಿಲಿಕಾನ್ ಸಿಟಿಯಲ್ಲಿ ತಂಪರೆಯಲಿರುವ ವರುಣ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ