ನಾಲ್ವರು ಸಾಗುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ: ಇಬ್ಬರ ದಾರುಣ ಸಾವು, ಯುವತಿ ಕಾಲು ಕಟ್: ಅಪಘಾತದ ರಭಸಕ್ಕೆ ಛಿದ್ರವಾದ ದೇಹಗಳು

Published : Apr 27, 2026, 09:44 AM IST
ಸಾಂದರ್ಭಿಕ ಚಿತ್ರ

ಸಾರಾಂಶ

 ಜಾತ್ರೆ ಮುಗಿಸಿ ವಾಪಸಾಗುತ್ತಿದ್ದ ವೇಳೆ ನಾಲ್ವರು ಸಂಚರಿಸುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾ  ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜಾತ್ರೆ ನೋಡಲು ಹೋದವರು ಮಸಣಕ್ಕೆ

ರಾಯಚೂರು: ಜಾತ್ರೆಗೆ ತೆರಳಿದವರು ಅಪಘಾತಕ್ಕೆ ಬಲಿಯಾದಂತಹ ದಾರುಣ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಅತ್ತನೂರು ದಿಡ್ಡಿ ಬಸವೇಶ್ವರ ಜಾತ್ರೆ ನೋಡುವುದಕ್ಕೆಂದು ಬಂದು ವಾಪಸ್ ಹೋಗುವ ವೇಳೆ ನಾಲ್ವರು ಪ್ರಯಾಣಿಸುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ನಾಲ್ವರು ಸಂಚರಿಸುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಟಿಪ್ಪರ್

ಬಸವೇಶ್ವರ ಜಾತ್ರೆಯ ರಥೋತ್ಸವ ಮುಗಿಸಿ ವಾಪಸ್ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಮೃತರ ದೇಹ ನಜ್ಜುಗುಜ್ಜಾಗಿದ್ದು, ದೇಹದ ಭಾಗಗಳು ಛಿದ್ರ ಛಿದ್ರವಾಗಿವೆ. ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ. ಶಾಖಾಪುರ ಮುಖ್ಯರಸ್ತೆಯಲ್ಲಿ ಈ ದುರಂತ ನಡೆದಿದೆ. ಮೃತರನ್ನು ಬೈಕ್ ಓಡಿಸುತ್ತಿದ್ದ 37 ವರ್ಷದ ಅಂಜಿನಯ್ಯ ನಾಯಕ ಹಾಗೂ 10 ವರ್ಷದ ಬಾಲಕಿ ಅರ್ಚನಾ ಎಂದು ಗುರುತಿಸಲಾಗಿದೆ. ಗಾಯಾಳುಗಳಲ್ಲಿ 19 ಶ್ವೇತಾ ಅವರ ಕಾಲು ಕಟ್ ಆಗಿದೆ ಹಾಗೂ 22 ವರ್ಷದ ಲಕ್ಷ್ಮಿ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಿಬ್ಬರನ್ನು ರಾಯಚೂರು ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದಲ್ಲಿ ಮೃತಪಟ್ಟವರು ಹಾಗೂ ಗಾಯಾಳುಗಳು ನಿನ್ನೆ ಸಂಜೆ ಅತ್ತನೂರು ದಿಡ್ಡಿ ಬಸವೇಶ್ವರ ಜಾತ್ರೆಗೆ ಬಂದಿದ್ದರು. ಬಳಿಕ ರಾತ್ರಿ ಶಾಖಾಪುರಕ್ಕೆ ಒಂದೇ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಮಾರ್ಗಮಧ್ಯೆ ಇವರು ಸಾಗುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಘಟನೆಗೆ ಸಂಬಂಧಿಸಿದಂತೆ ಸಿರವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ವಿಷಕಾರಿ ಹಾವಿನಿಂದ 30 ಮಕ್ಕಳ ರಕ್ಷಿಸಿ ಪ್ರಾಣ ಬಿಟ್ಟ ಶ್ವಾನ: ಬೀದಿನಾಯಿ ಕಾಳಿಗೆ ಗ್ರಾಮಸ್ಥರ ಭಾವುಕ ವಿದಾಯ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅತಿ ಕಡಿಮೆ ಕನ್ನಡ ಮಾತನಾಡುವ Top 5 ಜಿಲ್ಲೆಗಳು… ಬೆಂಗಳೂರಿಗೆ ಯಾವ ನಂ?
ರಿಪೋರ್ಟರ್ಸ್ ಡೈರಿ: ನಮ್ ಮಮ್ಮಿ ಸೋನಿಯಾ, ನಮ್ ಡ್ಯಾಡಿ ರಾಜೀವ್