ಚಾಮರಾಜನಗರ: ಹಸಿವಿನಿಂದ ನಿತ್ರಾಣಗೊಂಡ ಎರಡು ಹುಲಿ ಮರಿಗಳ ಸಾವು!

Kannadaprabha News, Ravi Janekal |   | Kannada Prabha
Published : Aug 13, 2025, 10:57 AM IST
Wildlife

ಸಾರಾಂಶ

ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಧಾಮದಲ್ಲಿ ಎರಡು ಹುಲಿ ಮರಿಗಳು ಹಸಿವಿನಿಂದ ಮೃತಪಟ್ಟಿವೆ. ತಾಯಿ ಹುಲಿಯಿಂದ ಬೇರ್ಪಟ್ಟ ಮರಿಗಳು ಆಹಾರವಿಲ್ಲದೆ ಸಾವನ್ನಪ್ಪಿವೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ವನ್ಯಜೀವಿ ಪ್ರಿಯರಲ್ಲಿ ಆತಂಕ ಮೂಡಿಸಿದೆ.

ಹನೂರು (ಆ.13): ಹಸಿವಿನಿಂದ ನಿತ್ರಾಣಗೊಂಡು ಎರಡು ಹುಲಿಮರಿಗಳು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕಾವೇರಿ ವನ್ಯಧಾಮ ವ್ಯಾಪ್ತಿಯಲ್ಲಿ ನಡೆದಿದ್ದು ಮಂಗಳವಾರ ಸಂಜೆ ಬೆಳಕಿಗೆ ಬಂದಿದೆ.

ಸುಮಾರು 15 ದಿನಗಳ ಹಿಂದೆ ಹುಟ್ಟಿದ್ದ ಹೆಣ್ಣು ಮತ್ತು ಗಂಡು ಮರಿಗಳು ತಾಯಿ ಹುಲಿಯಿಂದ ಬೇರ್ಪಟ್ಟು ನೀರು ಆಹಾರವಿಲ್ಲದೆ ಸಾವನ್ನಪ್ಪಿದ್ದಾಗಿ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಗಸ್ತಿನ ವೇಳೆ ಈ ವಿಷಯ ಅರಣ್ಯ ಇಲಾಖೆಗೆ ತಿಳಿದು ಬಂದಿದ್ದು, ಕೂಡಲೇ ಡಿಸಿಎಫ್ ಸುರೇಂದ್ರ, ಎಸಿಎಫ್ ಮರಿಸ್ವಾಮಿ, ಆರ್‌ಎಫ್‌ಒ ನಿರಂಜನ್ ಸೇರಿದಂತೆ ಎಸ್‌ಒಪಿ ಸಮಿತಿಯ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಅಧಿಕಾರಿಗಳ ಪ್ರಾಥಮಿಕ ನಿರೀಕ್ಷೆಯಂತೆ, ಈ ಹುಲಿ ಮರಿಗಳು ತಾಯಿ ಹುಲಿಯಿಂದ ಕಳೆದ 10–15 ದಿನಗಳಿಂದ ಬೇರ್ಪಟ್ಟಿದ್ದು, ಆಹಾರ ಹಾಗೂ ಕಾಪಾಡುವ ತೊಂದರೆಯಿಂದಾಗಿ ಎರಡು-ಮೂರು ದಿನಗಳ ವ್ಯತ್ಯಾಸದಲ್ಲಿ ಸಾವನ್ನಪ್ಪಿರುವುದಾಗಿ ಅರಣ್ಯಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಕಳೆದ ತಿಂಗಳು ಹೂಗ್ಯಂ ವಲಯ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಸಾವನ್ನಪ್ಪಿರುವ ಬೆನ್ನಲ್ಲೇ ತಾಲೂಕಿನ ಕಾವೇರಿ ವನ್ಯಧಾಮದಲ್ಲಿ ಎರಡು ಹುಲಿ ಮರಿಗಳು ಸಾವನ್ನಪ್ಪಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Justice for Bongo: ಮಗು ಹುಟ್ಟಿದ್ದಕ್ಕೆ ಸಾಕಿ ಸಲುಹಿದ ಶ್ವಾನ ಕೊಂದ್ರಾ ಪಾಪಿಗಳು? ಸಿಲಿಕಾನ್ ಸಿಟಿಯಲ್ಲಿ 'ಬೋಂಗೋ' ಸಾವಿನ ರೋಚಕ ಕಹಾನಿ!
ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ