ಆ.1ರಿಂದ ಎಕ್ಸ್‌ಪ್ರೆಸ್‌ವೇನಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ಸಂಚಾರ ನಿಷೇಧ; ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ: ಎಡಿಜಿಪಿ

By Kannadaprabha News  |  First Published Jul 25, 2023, 9:37 PM IST

 ಆ.1ರಿಂದ ಎಕ್ಸ್‌ಪ್ರೆಸ್‌ವೇನಲ್ಲಿ ದ್ವಿಚಕ್ರ, ಆಟೋ, ಟ್ರ್ಯಾಕ್ಟರ್‌, ಎತ್ತಿನ ಗಾಡಿಗಳ ಸಂಚಾರ ನಿಷೇಧ ಮಾಡಲಾಗಿದೆ ಎಂದು ಎಡಿಜಿಪಿ ಅಲೋಕ್‌ಕುಮಾರ್‌ ಹೇಳಿದರು. ಜು.12ರಂದು ಹೆದ್ದಾರಿ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಅಪಘಾತ ಕಡಿಮೆ ಮಾಡಲು ಎಲ್ಲ ರೀತಿಯ ಕ್ರಮ ವಹಿಸಿದ್ದೇವೆ. ಈಗಾಗಲೇ ದಂಡ ಹಾಕುವ ಮೂಲಕ ನಿಯಮ ಉಲ್ಲಂಘನೆಯಾಗದಂತೆ ಎಚ್ಚರಿಕೆ ನೀಡಲಾಗಿದೆ ಎಂದರು.


ಮದ್ದೂರು (ಜು.25) :  ಆ.1ರಿಂದ ಎಕ್ಸ್‌ಪ್ರೆಸ್‌ವೇನಲ್ಲಿ ದ್ವಿಚಕ್ರ, ಆಟೋ, ಟ್ರ್ಯಾಕ್ಟರ್‌, ಎತ್ತಿನ ಗಾಡಿಗಳ ಸಂಚಾರ ನಿಷೇಧ ಮಾಡಲಾಗಿದೆ ಎಂದು ಎಡಿಜಿಪಿ ಅಲೋಕ್‌ಕುಮಾರ್‌ ಹೇಳಿದರು. ಜು.12ರಂದು ಹೆದ್ದಾರಿ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಅಪಘಾತ ಕಡಿಮೆ ಮಾಡಲು ಎಲ್ಲ ರೀತಿಯ ಕ್ರಮ ವಹಿಸಿದ್ದೇವೆ. ಈಗಾಗಲೇ ದಂಡ ಹಾಕುವ ಮೂಲಕ ನಿಯಮ ಉಲ್ಲಂಘನೆಯಾಗದಂತೆ ಎಚ್ಚರಿಕೆ ನೀಡಲಾಗಿದೆ ಎಂದರು.

ಸಂಚಾರ ನಿಯಮ ಉಲ್ಲಂಘನೆ(Violation of traffic rules) ಮಾಡಿದ 27 ಮಂದಿಯ ಚಾಲನಾ ಪರವಾನಗಿಯನ್ನು ರದ್ದುಪಡಿಸಲು ಶಿಫಾರಸು ಮಾಡಲಾಗಿದೆ. ಆ್ಯಪ್‌ ಮೂಲಕ ಸಂಚಾರಿ ನಿಯಮ ಉಲ್ಲಂಘನೆ ಬಗ್ಗೆ ಸಂದೇಶ ರವಾನಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

Latest Videos

undefined

ಮೈಸೂರು-ಬೆಂಗಳೂರು ಹೆದ್ದಾರಿಯ ಎರಡೂ ಕಡೆ ಪೆಟ್ರೋಲಿಂಗ್‌: ಎಡಿಜಿಪಿ ಅಲೋಕ್‌ ಕುಮಾರ್‌

ಬೆಂಗಳೂರು ಸಿಟಿ ಪೊಲೀಸ್‌(Bengaluru city police) ತಂತ್ರಾಂಶ ಬಳಕೆ ಮಾಡಿ ಅಪಘಾತ ಪ್ರಕರಣಗಳಿಗೆ ಕಡಿವಾಣ ಹಾಕುತ್ತಿದ್ದಾರೆ. ಹೀಗಾಗಿ ಕಳೆದ ಒಂದು ತಿಂಗಳಿನಿಂದ ಸಾವಿನ ಪ್ರಮಾಣ ಕಡಿಮೆಯಾಗಿದೆ ಎಂದರು.

ಹೆದ್ದಾರಿ ಪ್ರಾಧಿಕಾರ ಎಕ್ಸ್‌ಪ್ರೆಸ್‌ವೇ(Mysuru bengaluru expressway)ನಲ್ಲಿ ಇನ್ನೂ ಕೆಲವು ನ್ಯೂನತೆಗಳನ್ನು ಸರಿಪಡಿಸಬೇಕಾಗಿದೆ. ಈ ಬಗ್ಗೆ ಸಂಬಂಧಿಸಿದವರಿಗೆ ಅಗತ್ಯ ಸೂಚನೆ ನೀಡಲಾಗಿದೆ. ಎಲ್ಲ ಕೆಲಸಗಳನ್ನು ಪೊಲೀಸ್‌ ಇಲಾಖೆಯೇ ಮಾಡಲು ಸಾಧ್ಯವಿಲ್ಲ. ಸಾಕಷ್ಟುಅಪಘಾತಗಳು ರಾತ್ರಿ ಸಮಯದಲ್ಲಿ ಆಗುತ್ತಿವೆ. ವಾಹನ ಚಾಲಕರು ವೇಗಮಿತಿಗೆ ಸ್ವಯಂ ಕಡಿವಾಣ ಹಾಕಿಕೊಳ್ಳುವುದು ಮುಖ್ಯ. ತಮ್ಮ ಹಾಗೂ ಇತರರ ಜೀವ ಕಾಪಾಡಲು ಜವಾಬ್ದಾರಿ ಹೊರಬೇಕು ಎಂದರು.

ಈಗಾಗಲೇ ಹೆದ್ದಾರಿ ಪ್ರಾಧಿಕಾರದ ತಜ್ಞರ ತಂಡ ಪರಿಶೀಲನೆ ನಡೆಸಿಹೋಗಿದೆ. ಹೆದ್ದಾರಿಯಲ್ಲಿ ಇರುವ ನ್ಯೂನತೆಗಳನ್ನು ಹೇಗೆ ಸರಿಪಡಿಸಬೇಕೆಂಬ ಬಗ್ಗೆ ಸದ್ಯದಲ್ಲೇ ವರದಿ ನೀಡಲಿದೆ. ವರದಿ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Bengaluru mysuru expressway: ಹೆದ್ದಾರಿ ಲೋಪ ಗುರುತಿಸಿದ ಎಡಿಜಿಪಿ ಅಲೋಕ್ ಕುಮಾರ್

ಎಕ್ಸ್‌ಪ್ರೆಸ್‌ ವೇನಲ್ಲಿ ಕೆಲವು ನ್ಯೂನತೆಗಳಿದ್ದು, ಕಾಲಾವಧಿಯೊಳಗೆ ಅವುಗಳನ್ನು ಪರಿಹರಿಸಬೇಕು. ಒಂದು ವೇಳೆ ಪರಿಹರಿಸದೆ ನಿರ್ಲಕ್ಷ್ಯ ವಹಿಸಿ ದೊಡ್ಡ ಮಟ್ಟದ ಅಪಘಾತಗಳಿಗೆ ಕಾರಣವಾದಲ್ಲಿ ಸಂಬಂಧಿಸಿದ ಹೆದ್ದಾರಿ ಪ್ರಾಧಿಕಾರದ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

click me!