
ಮಂಗಳೂರು: ಮಂಗಳೂರಿನ ಫಲ್ಗುಣಿ ನದಿಯಲ್ಲಿ ಮೀನುಗಾರಿಕಾ ಬೋಟ್ ಮಗುಚಿ ಇಬ್ಬರು ಯುವಕರು ನೀರುಪಾಲಾದ ಘಟನೆ ನಡೆದಿದೆ. ಮಂಗಳೂರಿನ ಫಲ್ಗುಣಿ ನದಿಯಲ್ಲಿ ಮೀನುಗಾರಿಕೆ ವೇಳೆ ದೋಣಿ ಮುಗುಚಿ ಇಬ್ಬರು ನೀರು ಪಾಲಾಗಿದ್ದಾರೆ. ಅವರಲ್ಲೊಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನೊಬ್ಬರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಮೃತರಾದವರನ್ನು ಕುಂಜತ್‌ಬೈಲ್ ನಿವಾಸಿ 28 ವರ್ಷದ ಗಣೇಶ್ ಎಂದು ಗುರುತಿಸಲಾಗಿದೆ ಹಾಗೂ ನೀರು ಪಾಲಾದ ಮತ್ತೊಬ್ಬ ಯುವಕನನ್ನು 24 ವರ್ಷದ ರಾಯಲ್ ಎಂದು ಗುರುತಿಸಲಾಗಿದೆ. ರಾಯಲ್‌ಗಾಗಿ ಅಗ್ನಿಶಾಮಕ ದಳ ಹಾಗೂ ಮುಳುಗು ತಜ್ಞರು ನದಿಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಒಟ್ಟು ಮೂರು ಜನ ಮೀನು ಹಿಡಿಯುವುದಕ್ಕೆ ಹೋಗಿದ್ದರು ಅವರಲ್ಲಿ 29 ವರ್ಷದ ನಿತೇಶ್ ಅವರು ಸುರಕ್ಷಿತವಾಗಿ ಈಜಿ ದಡ ಸೇರಿದ್ದಾರೆ. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಣೇಶ್, ರಾಯಲ್ ಮತ್ತು ನಿತೇಶ್ ಎಂಬ ಮೂವರು ಯುವಕರ ತಂಡ ಬುಧವಾರ ಮುಂಜಾನೆ ಸುಮಾರು 1:30 ರ ಸುಮಾರಿಗೆ ಸಣ್ಣ ನಾಡದೋಣಿಯಲ್ಲಿ ಮೀನುಗಾರಿಕೆಗಾಗಿ ನದಿಗೆ ತೆರಳಿದ್ದರು. ನದಿಯ ಮಧ್ಯಭಾಗ ತಲುಪಿದಾಗ ದೋಣಿ ಹಠಾತ್ತನೆ ಮಗುಚಿ ಬಿದ್ದು ಮೂವರೂ ನೀರಿಗೆ ಬಿದ್ದಿದ್ದಾರೆ. ಈ ಪೈಕಿ ನಿತೇಶ್ ಅವರು ಈಜಿ ದಡ ಸೇರಿದ್ದಾರೆ. ಗಣೇಶ್ ಮತ್ತು ರಾಯಲ್ ಅವರಿಗೆ ಈಜಲು ಬಾರದೆ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ತನ್ನಂತೆ ಇರುವವನ ಕರೆಸಿ ಸ್ನೇಹಿತನಿಗೆ ಏಪ್ರಿಲ್ ಫೂಲ್ ಮಾಡಿದ ಸಚಿನ್ ತೆಂಡೂಲ್ಕರ್
ಘಟನೆ ನಡೆದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗು ತಜ್ಞರು ಶೋಧ ಕಾರ್ಯ ಆರಂಭಿಸಿದ್ದಾರೆ. ಬುಧವಾರ ಮಧ್ಯಾಹ್ನದ ವೇಳೆಗೆ ಗಣೇಶ್ ಅವರ ಮೃತದೇಹ ಪತ್ತೆಯಾಗಿದ್ದು, ರಾಯಲ್ ಅವರ ಮೃತದೇಹಕ್ಕಾಗಿ ಹುಡುಕಾಟ ಮುಂದುವರಿದಿದೆ. ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಸ್ವಲ್ಪ ರೆಕಾರ್ಡ್ ಮಾಡಿ ಅಂತ ಫೋನ್ ಕೊಟ್ಟು ಹೈಕೋರ್ಟ್ ಮುಂದೆಯೇ ವಾಹನಗಳಿಗೆ ಬೆಂಕಿ ಹಚ್ಚಿದ ಮಹಿಳೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ