ಡ್ರಗ್ಸ್ ವಿಚಾರಕ್ಕೆ ಉಡ್ತಾ ಬೆಂಗಳೂರು ಎಂದರೆ ಸಹಿಸೊಲ್ಲ; ಗೃಹ ಸಚಿವ ಪರಮೇಶ್ವರ ಎಚ್ಚರಿಕೆ

By Sathish Kumar KH  |  First Published May 24, 2024, 2:38 PM IST

ರಾಜ್ಯದಲ್ಲಿ ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ಮಟ್ಟಹಾಕುವ ನಿಟ್ಟಿನಲ್ಲಿ ಮುಂದಾಗಿದ್ದೇವೆ. ಆದರೆ, ಬೆಂಗಳೂರಿಗೆ ಅಪಕೀರ್ತಿ ತರುವಂತಹ  'ಉಡ್ತಾ ಬೆಂಗಳೂರು' ಎಂದು ಮಾತುಗಳನ್ನಾಡುವುದು ಸರಿಯಲ್ಲ ಎಂದು ಗೃಹ ಸಚಿವ ಪರಮೇಶ್ವರ ಹೇಳಿದ್ದಾರೆ.


ಬೆಂಗಳೂರು (ಮೇ 24): ರಾಜ್ಯದಲ್ಲಿ ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ಮಟ್ಟಹಾಕುವ ನಿಟ್ಟಿನಲ್ಲಿ ಇಲಾಖೆಯು ಕಟ್ಟುನಿಟ್ಟಿನ‌ ಕ್ರಮ ತೆಗೆದುಕೊಂಡಿದ್ದು, ಬೆಂಗಳೂರಿಗೆ ಅಪಕೀರ್ತಿ ತರುವಂತಹ  'ಉಡ್ತಾ ಬೆಂಗಳೂರು' (Udta Bengaluru)  ಎಂದು ಮಾತುಗಳನ್ನಾಡುವುದು ಸರಿಯಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾದಕದ್ರವ್ಯ ಮುಕ್ತ ರಾಜ್ಯ ನಿರ್ಮಾಣದ ನಿಟ್ಟಿನಲ್ಲಿ ನಾನು ಮತ್ತು ಮುಖ್ಯಮಂತ್ರಿಯವರು ಘೋಷಿಸಿದ್ದೇವೆ.‌ ರಾಜ್ಯದಲ್ಲಿ ಸಾವಿರಾರು ಕೆಜಿ ಗಾಂಜಾ, ಎಂಡಿಎಂಎ, ಸಿಂಥೆಟಿಕ್ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ವಿದೇಶಿಗರನ್ನು ಗಡಿಪಾರು ಮಾಡಲಾಗಿದ್ದು, ಈ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ. ಇಷ್ಟೆಲ್ಲ ಕೆಲಸ ಮಾಡಿದಾಗಿಯೂ ಉಡ್ತಾ ಬೆಂಗಳೂರು ಅಂತ  ಮಾತನಾಡುವುದು ಸರಿಯಲ್ಲ. ಇನ್ನೂ ಹೆಚ್ಚು ನಿಯಂತ್ರಿಸುವ ನಿಟ್ಟಿನಲ್ಲಿ ಸಲಹೆಗಳನ್ನು ನೀಡಲಿ. ಆದರೆ, ಬೆಂಗಳೂರಿಗೆ ಅಪಕೀರ್ತಿ ತರುವಂತಹ ಮಾತನ್ನು ಆಡಬಾರದು ಎಂದು ಎಚ್ಚರಿಸಿದರು.

Tap to resize

Latest Videos

Bengaluru Rave Party: ಡ್ರಗ್ಸ್ ಸೇವಿಸಿ ಸಿಕ್ಕಿಬಿದ್ದ ನಟಿ ಆಶಿ ರಾಯ್‌ಗೆ ಸಿಸಿಬಿ ನೊಟೀಸ್

ಕಾನೂನು ಸುವ್ಯವಸ್ಥೆ ಕಾಪಾಡಲು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಕಳೆದ ಒಂದು ವರ್ಷದಿಂದ ಯಾವುದೇ ರೀತಿಯ ಕಾನೂನು ಸುವ್ಯವಸ್ಥೆಯ ಸಮಸ್ಯೆಯಾಗದಂತೆ ನೋಡಿಕೊಂಡಿದ್ದೇವೆ. ಬಿಜೆಪಿಯವರ ಕಾಲದಲ್ಲಿ ಮರ್ಡರ್‌ಗಳಾಗಿರಲಿಲ್ಲವೇ? ಹಾಗಂತ ಮರ್ಡರ್‌ ಆಗಬೇಕು ಅಂತ ನಾವು ಆಪೇಕ್ಷೆ ಪಡುವುದಿಲ್ಲ. ಅರೋಪಿಗಳನ್ನು ಹಿಡಿದು ಕಾನೂನಿನ ಚೌಕಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುವಂತ‌ ಕೆಲಸವನ್ನು ತಕ್ಷಣವೇ ಮಾಡಿದ್ದೇವೆ. ಶೇ 95ರಷ್ಟು ಕೊಲೆ ಪ್ರಕರಣಗಳ ಆರೋಪಿಗಳನ್ನು 24 ಗಂಟೆಗಳಲ್ಲಿಯೇ ಹಿಡಿದಿದ್ದೇವೆ. ಸುಮ್ಮನೇ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂಬುದು ಸರಿಯಲ್ಲ ಎಂದರು.

ರಾಜ್ಯದಲ್ಲಿ ಗುಂಪು-ಗಲಭೆಗಳಾಗಿಲ್ಲ. ರಾಜ್ಯದಲ್ಲಿ ನಡೆದ ಎರಡು ಹಂತದ ಲೋಕಸಭಾ ಚುನಾವಣೆಯನ್ನು ಶಾಂತಿಯುವಾಗಿ ನಡೆಸಲಾಗಿದೆ. ಗಣೇಶ ಹಬ್ಬದ ಸಂದರ್ಭದಲ್ಲಿ ಪ್ರತಿವರ್ಷ ಗಲಾಟೆಗಳಾಗುತ್ತಿದ್ದವು. ಈ ವರ್ಷ ಗಲಾಟೆಯಾಗದಂತೆ ಶಾಂತಿಯುತವಾಗಿ ಗಣೇಶ್ ಉತ್ಸವ ಆಚರಣೆ ನಡೆದಿದೆ. ಎಲ್ಲಿ ಕಾನೂನು ಸುವ್ಯವಸ್ಥೆಯ ಸಮಸ್ಯೆಯಾಗಿದೆ ಎಂಬುದನ್ನು ಹೇಳಲಿ. ಸುಮ್ಮನೆ ಇವರು ಹೇಳಿಬಿಟ್ಟರೆ ಕೇಳಲಾಗುತ್ತದೆಯೇ? ಜನ ನಮಗೆ ಆಶೀರ್ವಾದ ಮಾಡಿದ್ದಾರೆ. ಸಮರ್ಥವಾದ ನಾಯಕತ್ವ ಇದೆ. ಒಳ್ಳೆ ಆಡಳಿತ ನೀಡುವುದಾಗಿ ಜನರಿಗೆ ಪ್ರಾಮಿಸ್ ಮಾಡಿದ್ದೇವೆ. ಅದರಂತೆ ನಡೆದುಕೊಳ್ಳುತ್ತೇವೆ ಎಂದರು.

ಚುನಾವಣೆ ರೇಡ್‌ನಲ್ಲಿ ಸಿಕ್ಕಿದ್ದು ಸಾವಿರಾರು ಕೋಟಿ: ಎಷ್ಟು ಕೆಜಿ ಡ್ರಗ್ಸ್ ಸಿಕ್ಕಿದೆ ಗೊತ್ತಾ..?

ಎಚ್.ಡಿ.ದೇವೆಗೌಡರು ಪ್ರಜ್ವಲ್‌ಗೆ ಪತ್ರ ಬರೆದಿದ್ದಾರೆ ಎಂಬುದು ಗೊತ್ತಾಗಿದೆ. ಅದು ಅವರ ಕುಟುಂಬದ ಆಂತರಿಕ ವಿಚಾರ ಇರಬಹುದು.‌ ಪ್ರಜ್ವಲ್ ರೇವಣ್ಣ ಸಾರ್ವಜನಿಕ ದೃಷ್ಟಿಯಿಂದ ದೇವೇಗೌಡ ಅವರ ಪತ್ರಕ್ಕೆ ಗೌರವ ಕೊಟ್ಟು ದೇಶಕ್ಕೆ ವಾಪಸ್ ಆಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

click me!