ಉಡುಪಿ ಕುಟುಂಬದ ನಾಲ್ವರ ಕೊಲೆ: ಆರೋಪಿ ಪ್ರವೀಣ್‌ ಚೌಗಲೆಯನ್ನು 14 ದಿನ ಪೊಲೀಸರಿಗೊಪ್ಪಿಸಿದ ಕೋರ್ಟ್

By Sathish Kumar KH  |  First Published Nov 15, 2023, 7:41 PM IST

ಉಡುಪಿ ಗಗನಸಖಿ ಅಯ್ನಾಝ್‌ ಸೇರಿ ಒಂದೇ ಕುಟುಂಬದ ನಾಲ್ವರನ್ನು ಕೊಲೆಗೈದ ಆರೋಪಿ ಪ್ರವೀಣ್‌ ಚೌಗಲೆಯನ್ನು ನ್ಯಾಯಾಲಯ 14 ದಿನ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದೆ.


ಉಡುಪಿ (ನ.15): ಉಡುಪಿಯಲ್ಲಿ ಗಗನಸಖಿ ಅಯ್ನಾಜ್‌ಳನ್ನು ಕೊಲೆ ಮಾಡಲು ಬಂದಿದ್ದ ಆರೋಪಿ ನಂತರ ಸಾಕ್ಷ್ಯ ನಾಶ ಮಾಡುವುದಕ್ಕಾಗಿ ಚಿಕ್ಕ ಮಕ್ಕಳು ಎನ್ನುವುದನ್ನೂ ನೋಡದೇ ಮನೆಯಲ್ಲಿ ಸಿಕ್ಕ ಸಿಕ್ಕವರನ್ನೆಲ್ಲ ಚಾಕುವಿನಿಂದ ಚುಚ್ಚಿ ಕೊಲೆಗೈದು ಪರಾರಿ ಆಗಿದ್ದ ಆರೋಪಿ ಪ್ರವೀಣ್‌ ಅರುಣ್‌ ಚೌಗಲೆಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ಮಾಡಿದ ನ್ಯಾಯಾಧೀಶರು ಆರೋಪಿಯನ್ನು 14 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪಡೆಯುವಂತೆ ಆದೇಶ ಹೊರಡಿಸಿದ್ದಾರೆ. 

ಮಂಗಳೂರು ವಿಮಾನ ನಿಲ್ದಾಣದಲ್ಲಿ ಗಗನಸಖಿಯಾಗಿ ಕೆಲಸ ಮಾಡುತ್ತಿದ್ದ ಅಯ್ನಾಜ್‌ಳ ಸಹ ಉದ್ಯೋಗಿಯಾಗಿದ್ದ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಪ್ರವೀಣ್‌ ಅರುಣ್‌ ಚೌಗಲೆ ಅಯ್ನಾಜ್‌ಳನ್ನು ಕೊಲೆ ಮಾಡುವ ಉದ್ದೇಶಕ್ಕೆಂದಲೇ ಉಡುಪಿಗೆ ಆಗಮಿಸಿದ್ದನು. ಆಯ್ನಾಜ್‌ಳನ್ನು ಕೊಲೆ ಮಾಡಿದ ನಂತರ ಮನೆಯವರೆಲ್ಲರ ಕಿರುಚಾಟ ಮತ್ತು ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದ ಮನೆಯಲ್ಲಿ ಇದ್ದವರನ್ನು ಎಲ್ಲರನ್ನೂ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ. ಅಯ್ನಾಜ್‌ಳ ಕೊಲೆಯ ನಂತರ ಆಕೆಯ ಅಮ್ಮ, ತಂಗಿ ಹಾಗೂ ಚಿಕ್ಕ ಬಾಲಕನನ್ನೂ ಅದೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ. ಕೇವಲ 10 ನಿಮಿಷದಲ್ಲಿ ಎಲ್ಲರನ್ನು ಕೊಲೆಗೈದು ಅಲ್ಲಿಂದ ಪರಾರಿ ಆಗಿದ್ದನು.

Latest Videos

undefined

ಉಡುಪಿಯ ಒಂದೇ ಕುಟುಂಬದ ನಾಲ್ವರ ಹತ್ಯೆಗೈದ ಆರೋಪಿ ಬೆಳಗಾವಿಯಲ್ಲಿ ಅರೆಸ್ಟ್‌!

ಉಡುಪಿಯಲ್ಲಿ ಕೊಲೆ ಮಾಡಿ 15 ನಿಮಿಷದಲ್ಲಿ ಅಲ್ಲಿಂದ ಕರಾವಳಿ ಬಸ್‌ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ಪೊಲೀಸರಿಗೆ ತನ್ನ ಗುರುತು ಸಿಗದಂತೆ ಶರ್ಟ್‌ ಹಾಗೂ ತಲೆಯ ಟೋಪಿಯನ್ನು ಬದಲಿಸಿದ್ದಾನೆ. ನಂತರ, ಪೊಲೀಸರ ಕಣ್ತಪ್ಪಿಸಿಕೊಂಡು ಬೆಳಗಾವಿಗೆ ತೆರಳಿದ್ದುಮ ಅಲ್ಲಿಂದ ತನ್ನ ತವರೂರು ಮಹಾರಾಷ್ಟ್ರದ ಸಾಂಗ್ಲಿಗೆ ಹೋಗಲು ಮುಂದಾಗಿದ್ದನು. ಈ ವೇಳೆ ಪೊಲೀಸರು ಸತತ ಮೂರು ದಿನಗಳ ಕಾರ್ಯಾಚರಣೆ ನಡಸಿ ಬೆಳಗಾವಿ ಮತ್ತು ಉಡುಪಿ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ ಆತನನ್ನು ಬೆಳಗಾವಿ ಜಿಲ್ಲೆ ಕುಡುಚಿಯಲ್ಲಿ ಬಂಧಿಸಿದ್ದರು. ನಂತರ ಆತನನ್ನು ಉಡುಪಿಗೆ ಕರೆತಂದಿದ್ದರು.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಕೆ. ಅರುಣ್‌ ಅವರು, ಉಡುಪಿ ಒಂದೇ ಕುಟುಂಬದ ನಾಲ್ವರ ಹತ್ಯೆ ಮಾಡಿರುವುದು ತಾನೇ ಎಂದು ಪ್ರವೀಣ್ ಅರುಣ್ ಚೌಗುಲೆ ಒಪ್ಪಿಕೊಂಡಿದ್ದಾನೆ. ಆದರೆ, ಕೊಲೆಗೆ ಕಾರಣ ವಿಚಾರಣೆಯಲ್ಲಿ ಪಡೆದುಕೊಳ್ತೇವೆ. ಕೊಲೆಗೆ ಮೂರ್ನಾಲ್ಕು ಕಾರಣಗಳು ಇರುವ ಸಾಧ್ಯತೆ ಇದೆ. ಸಂಪೂರ್ಣ ತನಿಖೆ ಮಾಡದೆ ಕಾರಣ ಹೇಳಲು ಸಾಧ್ಯವಿಲ್ಲ. ಆರೋಪಿ ತಪ್ಪೊಪ್ಪಿಗೆ ಹೇಳಿಕೆ ಕೊಟ್ಟಿದ್ದಾನೆ. ಅವನ ಉದ್ದೇಶ ಅಯ್ನಾಝ್ ಕೊಲೆ ಮಾಡುವುದಾಗಿತ್ತು. ಆರೋಪಿ ತಪ್ಪಿಸಿಕೊಳ್ಳಲು ಮತ್ತು ಸಾಕ್ಷಿ ನಾಶ ಮಾಡಲು ಉಳಿದ ಮೂವರನ್ನು ಕೊಲೆ ಮಾಡಿದ್ದಾಗಿ ಹೇಳಿಕೊಂಡಿದ್ದಾನೆ ಎಂದು ತಿಳಿಸಿದರು.

ಉಡುಪಿ ನಾಲ್ಕು ಕೊಲೆ ಪ್ರಕರಣ: ನರಹಂತಕ ಪ್ರವೀಣ್‌ ಚೌಗಲೆ ಖೆಡ್ಡಾಗೆ ಬಿದ್ದಿದ್ದು ಹೀಗೆ!

ಆರೋಪಿ ಪ್ರವೀಣ್ ಚೌಗುಲೆಗೆ ಮದುವೆಯಾಗಿತ್ತು. ಆದರೆ, ಯಾವ ಕಾರಣಕ್ಕೆ ಕೊಲೆ ಮಾಡಿದ್ದಾನೆಂದು ಹೇಳಿಲ್ಲ. ಆದರೆ, ತಾಂತ್ರಿಕ ಸಾಕ್ಷಿಗಳ ಸಂಗ್ರಹದಿಂದ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರು ಮಾಡುತ್ತಿದ್ದೇವೆ. ಇನ್ನು ಅಯ್ನಾಜ್‌ಳ ಕುಟುಂಬ ಕೊಲೆ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿದೆ. ಕೊಲೆಗೆ ಕಾರಣ ಏನು ಎಂಬೂದು ಪ್ರಮುಖವಾಗಲಿದೆ. ಅಯ್ನಾಝ್ ಮತ್ತು ಪ್ರವೀಣ್ ಚೌಗುಲೆ ನಡುವಿನ ಸಂಬಂಧಗಳ ಬಗ್ಗೆ ತನಿಖೆ ಮಾಡುತ್ತಿದ್ದೇವೆ ಎಂದು ತಿಳಿಸಿದರು. 

ಕೊಲೆ ಆರೋಪಿ 14 ದಿನ ಪೊಲೀಸ್‌ ಕಸ್ಟಡಿಗೆ: ಕೊಲೆ ಆರೋಪಿ ಪ್ರವೀಣ್ ಅರುಣ್ ಚೌಗುಲೆಯನ್ನು ಉಡುಪಿಯ ಒಂದನೇ ಹೆಚ್ಚುವರಿ ಸಿವಿಲ್  ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ಪ್ರಕರಣದ ಬಗ್ಗೆ ಮಾಹಿತಿ ಪಡೆದ ನ್ಯಾಯಾಧೀಶರು ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ 14 ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯುವಂತೆ ಆದೇಶ ಹೊರಡಿಸಿದರು. ಅಂದರೆ, ನವೆಂಬರ್‌ 28ರವರೆಗೆ ಪೊಲೀಸರು ಕಸ್ಟಡಿಗೆ ಪಡೆದು ವಿಚಾರಣೆ ಮಾಡಲು ಅನುಮತಿ ನೀಡಲಾಗಿದೆ. 

click me!