
ಉಡುಪಿ(ಜೂ.12): ಶುಕ್ರವಾರ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ರೆಡ್ ಅಲರ್ಟ್ ಘೋಷಿಸಿದೆ. ಈ ಕಾರಣದಿಂದಾಗಿ, ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಹಾಗೂ 1 ರಿಂದ 10ನೇ ತರಗತಿಯವರೆಗಿನ ಶಾಲೆಗಳಿಗೆ ನಾಳೆಯೂ ರಜೆ ಘೋಷಿಸಲಾಗಿದೆ.
ಈ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಅವರು ಆದೇಶ ಹೊರಡಿಸಿದ್ದು ಸಾರ್ವಜನಿಕರು ಸುರಕ್ಷಿತವಾಗಿರುವಂತೆ ಮತ್ತು ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತ ಸೂಚಿಸಿದೆ. ಮಾಹಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಘೋಷಿಸಲಾಗಿದೆ.
ಇದನ್ನೂ ಓದಿ: Udupi Red Alert: ಉಡುಪಿ ಜಿಲ್ಲೆಗೆ ನಾಳೆ ರೆಡ್ ಅಲರ್ಟ್; ಶಾಲೆಗಳಿಗೆ ರಜೆ ಘೋಷಣೆ!
ಮೀನುಗಾರರಿಗೆ ಎಚ್ಚರಿಕೆ
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆಯಾಗಿದ್ದು, ಗುರುವಾರದಿಂದ 3 ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ಗಾಳಿಯ ಪ್ರಮಾಣ ತುಸು ಹೆಚ್ಚಳವಾಗಿದ್ದು, ಮೀನುಗಾರರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ