Stray Dogs: ಬೀದಿ ನಾಯಿಗಳಿಗೆ ತಿಂಡಿ ಹಾಕ್ತೀರಾ; ಹಾಗಾದ್ರೆ ಲೈಸೆನ್ಸ್ ಪಡೆಯಿರಿ! ಏನಿದು ಹೊಸ ನಿಯಮ?

Kannadaprabha News, Ravi Janekal |   | Kannada Prabha
Published : Nov 05, 2025, 06:46 AM IST
Udupi stray dog feeding rules

ಸಾರಾಂಶ

ಉಡುಪಿ ನಗರದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಸಂಖ್ಯೆ ಮತ್ತು ಕಾಟವನ್ನು ನಿಯಂತ್ರಿಸಲು ನಗರಸಭೆಯು ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಆಹಾರ ನೀಡುವುದನ್ನು ನಿಷೇಧಿಸಿದ್ದು, ಆಹಾರ ನೀಡಲು ನಿರ್ದಿಷ್ಟ ಸ್ಥಳಗಳನ್ನು ಗುರುತಿಸಿದೆ. 

ಉಡುಪಿ (ನ.5): ಉಡುಪಿ ನಗರದಲ್ಲಿ ಬೀದಿ ನಾಯಿಗಳ ಸಂಖ್ಯೆ, ಕಾಟ ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಲು ಉಡುಪಿ ನಗರಸಭಾ ಕೆಲವು ಕ್ರಮಗಳನ್ನು ಕೈಗೊಳ್ಳುತ್ತಿದೆ.ನ.

ಮುಖ್ಯವಾಗಿ ನಗರದ ಸಾರ್ವಜನಿಕ ಸ್ಥಳದಲ್ಲಿ ಕೆಲವು ಶ್ವಾನಪ್ರಿಯರು ಬೀದಿನಾಯಿಗಳಿಗೆ ಆಹಾರ ಕೊಡುತ್ತಿರುವ ಬಗ್ಗೆ ದೂರು ಬಂದಿದ್ದು, ಅನಧಿಕೃತವಾಗಿ ರಸ್ತೆಯ ಚರಂಡಿಗಳ ಮೇಲೆ, ಶಾಲಾ ವಠಾರದಲ್ಲಿ, ಜನ ನಿಬಿಡ ಪ್ರದೇಶಗಳಲ್ಲಿ, ಬಸ್ ನಿಲ್ದಾಣ ಸೇರಿದಂತೆ ಇತರೆ ಸ್ಥಳಗಳಲ್ಲಿ ಸಾರ್ವಜನಿಕರು ಆಹಾರ ಹಾಕುವುದನ್ನು ನಿಷೇಧಿಸಲಾಗಿದೆ.

ಬೀದಿನಾಯಿಗಳಿಗೆ ಎಲ್ಲೆಲ್ಲಿ ಆಹಾರ ಹಾಕಲು ಅನುಮತಿ:

ನಗರಸಭೆಯಿಂದ ಈಗಾಗಲೇ ಪ್ರಾಥಮಿಕ ಹಂತದಲ್ಲಿ ಬೀಡಿನ ಗುಡ್ಡೆ ಹಿಂದೂ ರುದ್ರಭೂಮಿ ಎದುರುಗಡೆ, ಆದಿ ಉಡುಪಿ ಮಾರುಕಟ್ಟೆ ಹಿಂಬದಿ, ಇಂದ್ರಾಳಿ ಹಿಂದೂ ರುದ್ರಭೂಮಿ ಎದುರುಗಡೆ, ಪರ್ಕಳ ಸ್ವಾಗತ ಗೋಪುರದ ಹತ್ತಿರ, ನಿಟ್ಟೂರು ಕೊಳಚೆ ನೀರು ಶುದ್ಧೀಕರಣ ಘಟಕದ ಎದುರುಗಡೆ, ಪೆರಂಪಳ್ಳಿ ಮುಖ್ಯ ರಸ್ತೆಯ ಭಾರತೀಯ ವಿಕಾಸ ಟ್ರಸ್ಟ್ ಕೆಳಗಡೆ, ರಾಜ್ ಫಿಶ್ ಮಿಲ್ ಹತ್ತಿರ, ಆದಿ ಉಡುಪಿ ಮಲ್ಪೆ ರಸ್ತೆಯ ಹೆಲಿಪ್ಯಾಡ್ ಹತ್ತಿರ, ಕಕ್ಕುಂಜೆ ನಾರಾಯಣ ನಗರ ಹೋಗುವ ರಸ್ತೆಯ ತಿರುವು ಬಳಿ ಹಾಗೂ ಬೈಲೂರು ಹನುಮಾನ್ ಗ್ಯಾರೇಜ್ ಡಯಾನ ರಸ್ತೆ ವಿಜಯ ವೀರ ಸಂಘದ ಹತ್ತಿರ ನಿಯಮಾನುಸಾರ ಷರತ್ತು ವಿಧಿಸಿ, ಬೀದಿ ನಾಯಿಗಳಿಗೆ ಆಹಾರ ಹಾಕಲು ಅನುಮತಿಯನ್ನು ನೀಡಲು ಸ್ಥಳಗಳನ್ನು ಗುರುತಿಸಲಾಗಿದ್ದು, ಅಲ್ಲಿ ಮಾತ್ರ ಆಹಾರವನ್ನು ಹಾಕಬಹುದಾಗಿದೆ.

ಬೇರೆ ಯಾವುದೇ ಸ್ಥಳದಲ್ಲಿ ಬೀದಿ ನಾಯಿಗಳಿಗೆ ಆಹಾರ ಹಾಕಲು ಸಾರ್ವಜನಿಕರು ಮುಂದೆ ಬಂದಲ್ಲಿ ನಗರಸಭಾ ಕಚೇರಿಗೆ ಲಿಖಿತ ಮೂಲಕ ಮನವಿ ಸಲ್ಲಿಸಬೇಕು. ಆಹಾರವನ್ನು ಹಾಕುವವರೂ ನಗರಸಭೆಯಿಂದ ಗುರುತಿನ ಚೀಟಿ ಪಡೆದುಕೊಳ್ಳಬೇಕು.

ಬೀದಿನಾಯಿಗಳಿಗೆ ಲಸಿಕೆ, ಸಂತಾನಹರಣ ಚಿಕಿತ್ಸೆ ನಡೆಸಬೇಕು

ಬೀದಿ ನಾಯಿಗಳಿಗೆ ಆಹಾರ ಹಾಕುವವರೇ ಅಂತಹ ನಾಯಿಗಳಿಗೆ ರೇಬಿಸ್ ಲಸಿಕೆ ಹಾಗೂ ಸಂತಾನಹರಣ ಶಸ್ತ್ರ ಚಿಕಿತ್ಸೆ ನಡೆಸಬೇಕು. ಮನೆಗಳಲ್ಲಿ ನಾಯಿಯ ಮರಿಗಳನ್ನು ಕೆಲವರು ಸಾರ್ವಜನಿಕ ಸ್ಥಳಗಳಲ್ಲಿ ತಂದು ಬಿಡುತ್ತಿರುವುದು ಕಂಡು ಬಂದಿದ್ದು, ಇದರಿಂದ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ ಸಾಕು ನಾಯಿಗಳಿಗೆ ರೇಬಿಸ್ ಲಸಿಕೆ ಹಾಗೂ ಸಂತಾನಹರಣ ಶಸ್ತ್ರ ಚಿಕಿತ್ಸೆ ನಡೆಸಬೇಕು. ಜೊತೆಗೆ ಸಾಕು ನಾಯಿಗಳಿಗೆ ಬೆಲ್ಟ್ ಅಳವಡಿಸಬೇಕು.

ಸಾಕು ನಾಯಿಗೆ ಅಥವಾ ಮರಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ತಂದು ಬಿಟ್ಟಿರುವುದು ಕಂಡು ಬಂದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!