* ಮೊದಲ ಬಾರಿಗೆ ಉಡುಪಿಗೆ ಆಗಮಿಸಿದ ಸಿಎಂಗೆ ವಿಶೇಷ ಗಿಫ್ಟ್ ಕೊಟ್ಟ ಪಲಿಮಾರು ಶ್ರೀ
* ಪಲಿಮಾರು ಶ್ರೀಗಳಿಂದ ಪೌರಾಣಿಕೆ ಗ್ರಂಥಗಳನ್ನು ಸ್ವೀಕರಿಸಿದ ಸಿಎಂ
* ಶ್ರೀಪಾದದ್ವಯರಿಂದ ಅನುಗ್ರಹ ಮಂತ್ರಾಕ್ಷತೆ ಪಡೆdದ ಬೊಮ್ಮಾಯಿ
ಉಡುಪಿ, (ಆ.13): ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಮೇಲೆ ಪ್ರಥಮ ಬಾರಿಗೆ ಇಂದು (ಆ.13) ಉಡುಪಿ ಜಿಲ್ಲೆಗೆ ಭೇಟಿ ನೀಡಿದರು.
ಭೇಟಿ ನೀಡಿದ ಬಸವರಾಜ ಬೊಮ್ಮಾಯಿ ಅವರು ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಮತ್ತು ಕಿರಿಯ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಅವರನ್ನು ಗೌರವಿಸಿ, ಶ್ರೀಪಾದದ್ವಯರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.
'2023ಕ್ಕೆ ಬೊಮ್ಮಾಯಿ ನಾಯಕತ್ವದಲ್ಲಿ ಮತ್ತೆ ಅಧಿಕಾರಕ್ಕೆ'
ಈ ಸಂದರ್ಭದಲ್ಲಿ ಶ್ರೀಗಳು ಮುಖ್ಯಮಂತ್ರಿ ಅವರಿಗೆ ಶಾಲು ಹೊದೆಸಿ ಪೌರಾಣಿಕ ಗ್ರಂಥಗಳನ್ನು ನೀಡಿ ಗೌರವಿಸಿದರು.
ಅರೋಗ್ಯ ಸಚಿವರಾದ ಡಾ.ಕೆ.ಸುಧಾಕರ್, ಸಮಾಜಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕರಾದ ರಘುಪತಿ ಭಟ್, ಕರಾವಳಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಬಿ.ಜೆ.ಪಿ ಅಧ್ಯಕ್ಷರಾದ ಸುರೇಶ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.
ನಿನ್ನೆ (ಆ.12) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ಹಾಗೂ ಗಡಿ ಭಾಗಗಳಲ್ಲಿ ತಪಾಸಣೆ ವ್ಯವಸ್ಥೆ ಪರಿಶೀಲಿಸಿ ಇಂದು (ಶುಕ್ರವಾರ) ಉಡುಪಿಗೆ ಆಗಮಿಸಿದರು.
ಉಡುಪಿಯಲ್ಲಿ 250 ಹಾಸಿಗೆಗಳ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಹಾಗೇ ಜಿಲ್ಲೆಯಲ್ಲಿ ಕೋವಿಡ್-19 ನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ಮಾಡಿದರು.