Egg Distribution in School ಶಾಲೆಗಳಲ್ಲಿ ಮೊಟ್ಟೆ ವಿತರಣೆಗೆ ಪೇಜಾವರ ಶ್ರೀ ವಿರೋಧ

By Suvarna News  |  First Published Dec 9, 2021, 8:46 PM IST

* ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ವಿತರಣೆ
* ಶಾಲೆಗಳಲ್ಲಿ ಮೊಟ್ಟೆ ನೀಡಿಕೆಗೆ ಪೇಜಾವರ ಶ್ರೀ ವಿರೋಧ
* ಮಕ್ಕಳೊಳಗೆ ಮತಭೇದ ಉಂಟಾಗುವಂತೆ ಮಾಡಬಾರದು ಎಂದ ಶ್ರೀಗಳು


ಉಡುಪಿ, (ಡಿ.09): ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟದ (Midday Meal)  ಜತೆ ಮಕ್ಕಳಿಗೆ ಮೊಟ್ಟೆ (Egg) ವಿತರಣೆ ಬಗ್ಗೆ ರಾಜ್ಯದಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. 

ಇನ್ನು ಈ ಬಗ್ಗೆ ಉಡುಪಿಯಲ್ಲಿ (Udupi) ಇಂದು(ಡಿ.9) ಪೇಜಾವರ ಶ್ರೀಗಳಾದ ವಿಶ್ವಪ್ರಸನ್ನ ತೀರ್ಥರು (Vishwaprasanna Teertha) ಪ್ರತಿಕ್ರಿಯಿಸಿದ್ದು,  ಮಕ್ಕಳಿಗೆ ಮೊಟ್ಟೆ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

Latest Videos

undefined

ಸರ್ಕಾರ ಸಾಮೂಹಿಕವಾಗಿ ಮೊಟ್ಟೆ ನೀಡಿ ತಿಳಿವಿಲ್ಲದ ಮಕ್ಕಳಿಗೆ (Children) ತಮ್ಮ ಪರಂಪರೆಯಲ್ಲಿ ಬಂದ ಆಹಾರ ಕ್ರಮವನ್ನು ಬದಲಿಸುವಂತೆ ಮಾಡಬಾರದು ಎಂದು ಹೇಳಿದರು.

Egg Distribution in School  ಮೊಟ್ಟೆ ವಿತರಣೆ ಕೈ ಬಿಡದಿದ್ದರೆ ಸರ್ಕಾರವನ್ನೇ ಉರುಳಿಸುವ ಎಚ್ಚರಿಕೆ

 ಆಹಾರದ ವಿಷಯದಲ್ಲಿ ಎಲ್ಲರಿಗೂ ಸ್ವಾತಂತ್ರ್ಯವಿದೆ. ನಮ್ಮ ಪರಂಪರೆಯ ಭಾಗವಾಗಿರುವ ಆಹಾರ ಕ್ರಮವನ್ನು ಬದಲಿಸಬಾರದು. ಸಾಮೂಹಿಕವಾಗಿ ಮೊಟ್ಟೆ ನೀಡುವುದರಿಂದ ಹಲವರ ನಂಬಿಕೆಗಳಿಗೆ ಧಕ್ಕೆಯುಂಟಾಗುತ್ತದೆ. ಶಾಲೆ ಇರುವುದು ಶಿಕ್ಷಣ ನೀಡಲೆಂದು. ಯಾವುದೇ ಸಮುದಾಯದ ಜೀವನಶೈಲಿಯನ್ನು ಬದಲಿಸಬಾರದು. ಯಾರಿಗೆ ಯಾವುದನ್ನು ಸೇವಿಸಲು ಇಷ್ಟವಿದೆಯೋ ಅದನ್ನು ಸೇವಿಸಲಿ. ಸರ್ಕಾರ ಅದರ ಖರ್ಚು ವಹಿಸಿಕೊಳ್ಳಲಿ ಎಂದರು.

 ಶಾಲೆ ಮಕ್ಕಳಿಗೆ ತಿಳುವು ಇರುವುದಿಲ್ಲ. ಅಂಥವರಿಗೆ ಸರತಿಯಲ್ಲಿ ಹಾಕಿದ್ದನ್ನು ಆಯ್ಕೆ ಮಾಡಿಕೊಳ್ಳಲು ಗೊತ್ತಾಗುವುದಿಲ್ಲ.  ತಮ್ಮ ಪರಂಪರೆಯಿಂದ ರೂಢಿಸಿಕೊಂಡು ಬಂದಿರುವ ಆಹಾರ ಕ್ರಮವನ್ನು ಬದಲಿಸಬಾರದು. ಹೀಗಾಗಿ ಸರಕಾರ ಸಾಮೂಹಿಕವಾಗಿ ಮೊಟ್ಟೆ ನೀಡುವುದರಿಂದ ಸಮಾಜಕ್ಕೆ ಕೆಟ್ಟ ಅಭಿಪ್ರಾಯ ನೀಡಿದಂತಾಗುತ್ತದೆ. ಮಕ್ಕಳೊಳಗೆ ಮತಭೇದ ಉಂಟಾಗುವಂತೆ ಮಾಡಬಾರದು ತಿಳಿಸಿದರು.

ವಿಧಾನಸೌಧ ಚಲೋ ಚಳುವಳಿ
 ಶಾಲೆಗಳಲ್ಲಿ (School)  ಮತ್ತು ಅಂಗನವಾಡಿಯಲ್ಲಿ ಮೊಟ್ಟೆಗೆ (Egg) ಬದಲಾಗಿ ಸತ್ವಯುತ - ಸರ್ವ ಸಮ್ಮತ ಸಸ್ಯಹಾರ ಪದಾರ್ಥ ನೀಡಲು ಅಥವಾ ರಾಜ್ಯಾದ್ಯಂತ ಸಸ್ಯಾಹಾರಿಗಳಿಗೆ ಪ್ರತ್ಯೇಕ ಶಾಲೆ ಹಾಗೂ ಅಂಗನವಾಡಿಗಳನ್ನು ತೆರೆಯಲು ಹಕ್ಕೋತ್ತಾಯಿಸಿ ಡಿ.20 ರಂದು ಬೆಳಿಗ್ಗೆ 10 ಕ್ಕೆ ಬೆಳಗಾವಿ ವಿಧಾನ ಮಂಡಲ ಅಧಿವೇಶನ ಸಂದರ್ಭದಲ್ಲಿ ಸಂತ ಸಮಾವೇಶ ಮತ್ತು ವಿಧಾನಸೌಧ ಚಲೋ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಸಸ್ಯಹಾರಿ ಪ್ರಧಾನ ಸಂಚಾಲಕರಾದ ದಯಾನಂದ ಸ್ವಾಮೀಜಿ (Dayananda swamiji) ತಿಳಿಸಿದ್ದಾರೆ.

ಶಾಲೆಗಳಲ್ಲಿ ಮೊಟ್ಟೆ ವಿತರಣೆ ಮಾಡುತ್ತಿರುವುದೇಕೆ? 
ಶಿಕ್ಷಣ ಇಲಾಖೆ ಅಪೌಷ್ಟಿಕತೆ, ರಕ್ತಹೀನತೆ ಹೊಂದಿರುವ ಶಾಲಾ (School) ಮಕ್ಕಳಿಗೆ ಮೊಟ್ಟೆ ನೀಡಲು ಮುಂದಾಗಿದ್ದು, ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡಲು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿತ್ತು. 7 ಜಿಲ್ಲೆಗಳ ಶಾಲಾ ಮಕ್ಕಳಿಗೆ ಬೇಯಿಸಿದ ಮೊಟ್ಟೆ ವಿತರಣೆಗೆ ಮಾಡಲಾಗುತ್ತಿದ್ದು ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ವಿತರಣೆ ಮಾಡಲಾಗುತ್ತಿದೆ. ಆದರೆ ಇದಕ್ಕೆ ಹಲವು ಸಮುದಾಯಗಳು ವಿರೋಧ ವ್ಯಕ್ತಪಡಿಸಿವೆ.

ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ನೀಡುವ ಯೋಜನೆಗೆ ರಾಷ್ಟ್ರೀಯ ಲಿಂಗಾಯತ ಧರ್ಮ, ಮಹಾ ಸಭಾ ಬಸವ ಮಂಟಪದ ಜಗದ್ಗುರುಗಳು ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಕೋಳಿ ಮೊಟ್ಟೆ ಸಂಪೂರ್ಣವಾಗಿ ಮಾಂಸಾಹಾರವಾಗಿದೆ. ಮೊಟ್ಟೆ ಕೊಡುವುದರಿಂದ ಧಾರ್ಮಿಕ ನಂಬಿಕೆಗೆ ಧಕ್ಕೆ ಆಗುತ್ತದೆ. ಶಾಲೆಗಳಲ್ಲಿ ಮಕ್ಕಳಿಗೆ ಸರ್ವಸಮ್ಮತ ಆಹಾರವನ್ನು ನೀಡಬೇಕು. ಶಾಲೆಯಲ್ಲಿ ಮೊಟ್ಟೆ ಕೊಡುವುದರಿಂದ ಸಸ್ಯಹಾರಿ, ಮಾಂಸಹಾರಿ ಎಂಬ 2 ಗುಂಪು ರಚನೆಯಾಗತ್ತೆ. ಹೀಗಾಗಿ ಸರ್ಕಾರ ತಕ್ಷಣ ಈ ಆದೇಶವನ್ನು ಹಿಂಪಡೆಯಬೇಕು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. 

ಯಾದಗಿರಿ (Yadgir) ಜಿಲ್ಲೆಯಲ್ಲಿ ಶೇಕಡಾ 74, ಕಲಬುರಗಿ ಜಿಲ್ಲೆಯಲ್ಲಿ ಶೇಕಡಾ 72.4, ಬಳ್ಳಾರಿ(BellarY) ಜಿಲ್ಲೆಯಲ್ಲಿ ಶೇಕಡಾ 72.3, ಕೊಪ್ಪಳ(Koppal) ಜಿಲ್ಲೆಯಲ್ಲಿ ಶೇಕಡಾ 70.7, ರಾಯಚೂರು(Raichur) ಜಿಲ್ಲೆಯಲ್ಲಿ ಶೇಕಡಾ 70.6, ಬೀದರ್(Bidar) ಜಿಲ್ಲೆಯಲ್ಲಿ ಶೇಕಡಾ 69.1, ವಿಜಯಪುರ ಜಿಲ್ಲೆಯಲ್ಲಿ ಶೇಕಡಾ 68 ಮಕ್ಕಳಿಗೆ ಅಪೌಷ್ಟಿಕತೆ ಸಮಸ್ಯೆ ಕಂಡುಬಂದಿದೆ.

ಏಳು ಜಿಲ್ಲೆಗಳ 14 ಲಕ್ಷಕ್ಕೂ ಹೆಚ್ಚು ಮಕ್ಕಳು ರಕ್ತಹೀನತೆಯಿಂದಲೂ ಬಳಲುತ್ತಿರುವ ಬಗ್ಗೆ ತಿಳಿದುಬಂದಿದೆ. ಅಪೌಷ್ಟಿಕತೆ ರಕ್ತಹೀನತೆ ಬಳಲುವಿಕೆ ಹಿನ್ನೆಲೆಯಲ್ಲಿ ಡಿಸೆಂಬರ್ ನಿಂದ ಮೊಟ್ಟೆ ಬಾಳೆಹಣ್ಣು ವಿತರಿಸಲು ಸರ್ಕಾರ ಆದೇಶಿಸಿತ್ತು. 

click me!