ಪೊಲೀಸರು ನೋವು ಮಾಡಿದ್ದಾರೆಂದು ಕಣ್ಣೀರಿಟ್ಟ ಚೈತ್ರ ಕುಂದಾಪುರ! ಆದ್ರೂ ಸೆ.23ರವರೆಗೆ ಪೊಲೀಸ್‌ ವಶಕ್ಕೊಪ್ಪಿಸಿದ ಕೋರ್ಟ್‌

By Sathish Kumar KH  |  First Published Sep 13, 2023, 4:37 PM IST

ಬಿಜೆಪಿ ಎಂಎಲ್‌ಎ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ ಮಾಡಿದ ಚೈತ್ರಾ ಕುಂದಾಪುರ ಸೇರಿದಂತೆ 6 ಮಂದಿಯನ್ನು ಸೆ.23ರವರೆಗೆ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. 


ಬೆಂಗಳೂರು (ಸೆ.13): ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿಯಿಂದ 5 ಕೋಟಿ ರೂ. ಹಣವನ್ನು ಪಡೆದು ವಂಚನೆ ಮಾಡಿದ ಚೈತ್ರಾ ಕುಂದಾಪುರ ಸೇರಿದಂತೆ ಐವರನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗಿತ್ತು. ಈ ವೇಳೆ ನ್ಯಾಯಾಧೀಶರ ಮುಂದೆ ಉಡುಪಿಯಲ್ಲಿ ಪೊಲೀಸರು ನನ್ನನ್ನು ಹಿಡಿದು ಎಳೆದಾಡಿ ನೋವು ಮಾಡಿದ್ದಾರೆ ಎಂದು ಚೈತ್ರಾ ಗಳಗಳನೇ ಕಣ್ಣೀರಿಟ್ಟಿದ್ದಾರೆ. ಈ ಬಗ್ಗೆ ವಿಚಾರಣೆ ಮಾಡಿದ ನ್ಯಾಯಾಧೀಶರು 10 ದಿನಗಳ ಕಾಲ (ಸೆ.23) ಪೊಲೀಸರ ವಶಕ್ಕೆ ಕೊಡಲಾಗಿದೆ.

ಉಡುಪಿಯ ಉದ್ಯಮಿ ಗೋವಿಂದ ಪೂಜಾರಿ ಅವರಿಗೆ ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ 5 ಕೋಟಿ ರೂ. ಹಣವನ್ನು ಪಡೆದಿದ್ದಾರೆ. ಹಂತ ಹಂತವಾಗಿ ಅವರಿಗೆ ವಿವಿಧ ಮಾರ್ಗದಲ್ಲಿ ವಂಚನೆ ಮಾಡಿ ದಿಕ್ಕು ತಪ್ಪಿಸಿದ್ದಾರೆ. ನಂತರ ಚುನಾವಣೆ ವೇಳೆ ಬಿಜೆಪಿ ಟಿಕೆಟ್‌ ಸಿಗದಿದ್ದರಿಂದ ಮೋಸ ಹೋಗಿರುವ ಬಗ್ಗೆ ಅರಿವಾಗಿ ಉದ್ಯಮಿ ದೂರು ಕೊಟ್ಟಿದ್ದರು. ಈ ವಂಚನೆ ಜಾಲದಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ ಒಟ್ಟು 10 ಜನರು ಭಾಗಿಯಾಗಿದ್ದಾರೆ ಎಂದು ದೂರು ದಾಖಲಿಸಲಾಗಿದೆ. ನಿನ್ನೆ ರಾತ್ರಿ ವೇಳೆ ಉಡುಪಿಯ ಶ್ರೀಕೃಷ್ಣ ಮಠದ ಸಿನಿಮೀಯ ಶೈಲಿಯಲ್ಲಿ ದಾಳಿ ಮಾಡಿ ಚೈತ್ರಾ ಕುಂದಾಪುರ ಅವರನ್ನು ಬಂಧಿಸಲಾಗಿತ್ತು. ಇದಾದ ನಂತರ ವಂಚನೆ ಮಾಡಿದ 6ಜನರನ್ನು ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.

Tap to resize

Latest Videos

undefined

ಚೈತ್ರಾ ಕುಂದಾಪುರ ಬಿಜೆಪಿ ಟಿಕೆಟ್‌ ವಂಚನೆ ಕೇಸ್‌ನಲ್ಲಿ ಸ್ವಾಮೀಜಿ ಪಾಲೆಷ್ಟು ಗೊತ್ತಾ?

ನ್ಯಾಯಾಧೀಶರ ಮುಂದೆ ಗಳಗಳನೇ ಕಣ್ಣೀರಿಟ್ಟ ಚೈತ್ರಾ ಕುಂದಾಪುರ: ಇನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಚೈತ್ರಾ ಕುಂದಾಪುರ ಅವರನ್ನು ವಿಚಾರಣೆ ಮಾಡಿದಾಗ ಕೋರ್ಟ್‌ ಕಟಕಟೆಯಲ್ಲಿ ನಿಂತು ಪೊಲೀಸರು ನನ್ನನ್ನು ಎಳೆದಾಡಿ ನೋವುಂಟು ಮಾಡಿದ್ದಾರೆ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟಿದ್ದಾರೆ. ಉಡುಪಿ ಪೊಲೀಸರಿಂದ ತೊಂದರೆ ಆಗಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಪೊಲೀಸರನ್ನು ವಿಚಾರಿಸಿದಾಗ ಆರೋಪಿ ಹೇಳುವ ರೀತಿ ಯಾವುದೇ ತೊಂದರೆ ಕೊಟ್ಟಿಲ್ಲ ಎಂದು ಉಡುಪಿ ಠಾಣೆಯ ಎಸಿಪಿ ರೀನಾ ಸುವರ್ಣ ಹೇಳಿದ್ದಾರೆ. ಇನ್ನು ಬಂಧನದ ಬಗ್ಗೆ ಎಲ್ಲಾ ವಿಡಿಯೋ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ, ಮೆಡಿಕಲ್ ರಿಪೋರ್ಟ್ ಕೂಡ ಮಾಡಿಸಲಾಗಿದೆ ಎಂದು ಎಸಿಪಿ ರೀನಾ ಸುವರ್ಣ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ಪೊಲೀಸರ ಮೇಲೆ ಹಲವು ದೂರು ಹೇಳಿದ ಚೈತ್ರಾ: ಉಡುಪಿಯನ್ನು ನನ್ನನ್ನು ವಶಕ್ಕೆ ಪಡೆದ ಪೊಲೀಸರು ನಮ್ಮ ಮನೆಯವರಿಗೆ ಹಾಗೂ ಕುಟುಂಬ ಸದಸ್ಯರಿಗೆ ಯಾವುದೇ ಮಾಹಿತಿ ನೀಡಿಲ್ಲ. ನಾನು ಪೊಲೀಸರಿಗೆ ಕುಟುಂಬ ಸದಸ್ಯರ ಪೋನ್ ನಂಬರ್ ಕೊಟ್ಟರೂ ಕಾಲ್ ಮಾಡಿಲ್ಲ. ಉಡುಪಿ ಪೊಲೀಸರು ತೊಂದರೆ ಕೊಟ್ಟಿದ್ದಾರೆ. ಆದರೆ, ನನ್ನನ್ನು ಬೆಂಗಳೂರಿಗೆ ಕರೆತಂದ ನಂತರ, ಬೆಂಗಳೂರು ಪೊಲೀಸರು ಯಾವುದೇ ತೊಂದರೆ ಕೊಟ್ಟಿಲ್ಲ. ಜೊತೆಗೆ, ನನ್ನ ಮೇಲೆ ಯಾರು ದೂರು ಕೊಟ್ಟಿದ್ದಾರೆ? ದೂರಿವ ವಿವರವೇನು ಎಂಬುದರ ಬಗ್ಗೆಯೂ ಮಾಹಿತಿಯನ್ನು ನೀಡಿಲ್ಲ. ಪೊಲೀಸರು ನನ್ನನ್ನು ವಶಕ್ಕೆ ಪಡೆದ ನಂತರ ತಾಯಿಯೊಂದಿಗೆ ಮಾತನಾಡಲು ಕೂಡ ಅವಕಾಶ ನೀಡಿಲ್ಲ ಎಂದು ಚೈತ್ರಾ ಕಣ್ಣೀರು ಹಾಕಿದ್ದಾರೆ.

ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸಿಂಧುಗೊಂಡ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ

10 ದಿನ ಪೊಲೀಶರ ವಶಕ್ಕೊಪ್ಪಿಸಿದ ನ್ಯಾಯಾಲಯ: ಕೋರ್ಟ್‌ನಲ್ಲಿ ನ್ಯಾಯಾಧೀಶರ ಮುಂದೆ ಚೈತ್ರಾ ಕುಂದಾಪುರ ಎಷ್ಟೇ ಕಣ್ಣೀರು ಹಾಕಿದರೂ, ದೊಡ್ಡ ಮಟ್ಟದಲ್ಲಿ ವಂಚನೆ ಮಾಡಿರುವ ಆರೋಪವಿರುವ ಹಿನ್ನೆಲೆಯಲ್ಲಿ ಚೈತ್ರಾ ಸೇರಿದಂತೆ 6 ಮಂದಿ ಆರೋಪಿಯನ್ನು 14 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡುವಂತೆ ಸಿಸಿಬಿ ಅಧಿಕಾರಿಗಳು ಮನವಿ ಮಾಡಿದರು. ಈ ಬಗ್ಗೆ ವಿಚಾರಣೆ ಮಾಡಿದ ನ್ಯಾಯಾಲಯವು ಸಿಸಿಬಿ ಪೊಲೀಸರ ಮನವಿ ಮೇರೆಗೆ 10 ದಿನಗಳ ಕಾಲ (ಸೆ.23ರವರೆಗೆ) ಬಂಧಿತವಾದ ಎಲ್ಲ ಆರೋಪಿಗಳನ್ನು ಪೊಲೀಸರ ವಶಕ್ಕೆ ಪಡೆಯುವಂತೆ ಆದೇಶ ಹೊರಡಿಸಿದೆ.

  • ನ್ಯಾಯಾಲಯಕ್ಕೆ ಹಾಜರಾದ ಆರೋಪಿಗಳು: 
  • ಚೈತ್ರಾ ಕುಂದಾಪುರ,
  • ರಮೇಶ್, 
  • ಧನರಾಜ್
  • ಪ್ರಜ್ವಲ್
  • ಶ್ರೀಕಾಂತ್
click me!