
ಉಡುಪಿ (ಜು.29) : ಉಡುಪಿ ವಿಡಿಯೋ ಪ್ರಕರಣದ ವಿಚಾರಣೆ ನಡೆಸುತ್ತಿರುವ ಪೊಲೀಸರ ಮೇಲೆ ಅಪನಂಬಿಕೆ ಇದ್ದರೆ ನೀವು ಕಲ್ಲಡ್ಕ ಪ್ರಭಾಕರ್ ಭಟ್ಟರ ಬಳಿ ತನಿಖೆ ಮಾಡಿಸಿ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಕಿಡಿಕಾರಿದರು.
ಇಂದು ಮಣಿಪುರ ಘಟನೆ ವಿರೋಧಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಯಿತು. ಕಾಂಗ್ರೆಸ್‌ನ ಪ್ರಮುಖ ನಾಯಕರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದರು. ಈ ವೇಳೆ ಮಾತನಾಡಿದ ರಮೇಶ್ ಕಾಂಚನ್, ಶಾಸಕರು ತಮ್ಮ ಪ್ರತಿಷ್ಠೆಗಾಗಿ ಮಕ್ಕಳ ಜೀವನದ ಜೊತೆ ಚೆಲ್ಲಾಟ ಆಡಬಾರದು ಎಂದರು.
ಈಗಾಗಲೇ ಉಡುಪಿ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣದ ಸತ್ಯಾಸತ್ಯ ತನಿಖೆ ನಡೆಸಲು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಉಡುಪಿಗೆ ಬಂದಿದ್ದಾರೆ, ಪೊಲೀಸ್ ತನಿಖೆಯೂ ನಡೆಯುತ್ತಿದೆ. ನಿಮಗೆ ತನಿಖೆ ಮೇಲೆ ಅಪನಂಬಿಕೆ ಇದ್ದರೆ ಕಲ್ಲಡ್ಕ ಪ್ರಭಾಕರ್ ಭಟ್ಟರಿಂದಲೇ ಮಾಡಿಸಿ ಎಂದು ವಾಗ್ದಾಳಿ ನಡೆಸಿದರು.
'ಈಗ್ಲೇ 65, ಮುಂದೆ ಇನ್ನೆಷ್ಟು ಸೀಟ್‌ಗೆ ಜನ ಇಳಿಸ್ತಾರೋ..' ಯಶ್‌ಪಾಲ್ ಸುವರ್ಣಗೆ ಗೃಹ ಸಚಿವರ ತಿರುಗೇಟು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ