ಮಂಗಳೂರಿನ ಉಳ್ಳಾಲ ಪಾಕಿಸ್ತಾನ ಇದ್ದಂತೆ ಎಂದು ಕಲ್ಲಡ್ಕ ಪ್ರಭಾಕರ್ ಭಟ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ.
ಮಂಗಳೂರು, (ನ.02): ಉಳ್ಳಾಲವನ್ನು ಪಾಕಿಸ್ತಾನ ಎಂದ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.
ಇಂದು (ಸೋಮವಾರ) ತಲಪಾಡಿ ಕಿನ್ಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮತನಾಡಿದ ಅವರು, ಮಂಗಳೂರಿನ ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನವನ್ನು ನೋಡಿದಂಗೆ ಆಗುತ್ತದೆ. ಉಳ್ಳಾಲ ಪಾಕಿಸ್ತಾನವೇ ಅಲ್ವಾ..? ಅದು ಬೇರೆ ಆಗೋಕೆ ಸಾಧ್ಯ ಇದೆಯಾ..? ಎಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದವನ್ನ ಪ್ರಶ್ನಿಸಿದ್ದಾರೆ. ಈ ಮೂಲಕ ವಿವಾದ ಹುಟ್ಟುಹಾಕಿದ್ದಾರೆ.
'ಮಂಗನ ಕೈಗೆ ಮಾಣಿಕ್ಯ ಕೊಟ್ಟರೆ ಏನಾಗುತ್ತೆ ಎಂಬುದಕ್ಕೆ ಕಟೀಲ್ ಸಾಕ್ಷಿ'
ಮನೆಯಲ್ಲಿ ಒಂದೇ ಮಗುವಿದ್ದಾಗ ಆ ಮಗುವಿಗೆ ಅಣ್ಣ, ತಮ್ಮ, ಅಕ್ಕ, ತಂಗಿನೂ ಯಾರೂ ಇರಲ್ಲ. ಆ ಮಗು ಸ್ವಾರ್ಥಿಯಾಗುತ್ತದೆ. ಮನೆಯಲ್ಲಿ ಮಕ್ಕಳು ಹೆಚ್ಚಿದಷ್ಟು ಆನಂದ, ಖುಷಿ ಹೆಚ್ಚಾಗಿರುತ್ತದೆ. ಇದೀಗ ಹಿಂದೂ ಸಮಾಜದಲ್ಲಿ ಸಂಖ್ಯೆ ಕಡಿಮೆ ಇದೆ. ನಮ್ಮ ದೇವಸ್ಥಾನವನ್ನು ಉಳಿಸುವವರು ಯಾರು..? ನಮ್ಮ ಸಂಪ್ರದಾಯ, ಸಂಸ್ಕೃತಿಯನ್ನು ಉಳಿಸುವವರು ಯಾರು..? ಪಾಕಿಸ್ತಾನ ಯಾಕೆ ಆಯಿತು..? ನಮ್ಮವರ ಸಂಖ್ಯೆ ಕಡಿಮೆ ಇತ್ತು ಅವರ ಸಂಖ್ಯೆ ಹೆಚ್ಚಾಗಿತ್ತು. ಹೀಗಾಗಿ ಪಾಕಿಸ್ತಾನ, ಬಾಂಗ್ಲಾದೇಶ ನಿರ್ಮಾಣವಾಯಿತು ಎಂದು ವಿವಾದಾತ್ಮಕ ಹೇಳಿಕೆ ನೀಡಿದರು.
ಈ ಹೇಳಿಕೆ ವಿವಾದಾತ್ಮಕವಾಗಿದ್ದು,ಇದು ಮುಂದಿನ ದಿನಗಳಲ್ಲಿ ಯಾವ ರೀತಿ ಸ್ವರೂಪ ಪಡೆದುಕೊಳ್ಳುತ್ತದೆ ಎನ್ನುವುದನ್ನು ಕಾದುನೋಡಬೇಕಿದೆ.