ಡಾ.ಉಮೇಶ್ ಜಾಧವ್ ರಾಜೀನಾಮೆಯಿಂದ ತೆರವಾದ ಹಿನ್ನಲೆಯಲ್ಲಿ ಕಲಬುರಗಿ ಜಿಲ್ಲೆಯ ಚಿಂಚೋಳಿ ವಿಧಾನಸಭಾ ಉಪಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ.
ಬೆಂಗಳೂರು, [ಏ.16]: ಉಮೇಶ್ ಜಾಧವ್ ರಾಜೀನಾಮೆಯಿಂದ ತೆರವಾಗಿರುವ ಚಿಂಚೋಳಿ ಕ್ಷೇತ್ರದ ಉಪ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ.
ಶಿವಳ್ಳಿ ನಿಧನ: ಕುಂದಗೋಳ ವಿಧಾನಸಭಾ ಉಪಚುನಾವಣೆಗೆ ಡೇಟ್ ಫಿಕ್ಸ್..!
ಇದೇ ಮೇ 19ರಂದು ಮತದಾನ ನಡೆಯಲಿದ್ದು, ಮೇ 23ಕ್ಕೆ ಮತ ಎಣಿಕೆ ನಡೆಯಲಿದೆ. ಇನ್ನು ನಾಮಪತ್ರ ಸಲ್ಲಿಸಲು ಏಪ್ರಿಲ್ 29 ಕೊನೆಯ ದಿನವಾಗಿದೆ.
ಇನ್ನು ಮೇ 19ರಂದೇ ಸಚಿವ ಸಿ.ಎಸ್. ಶಿವಳ್ಳಿ ಅವರ ನಿಧನದಿಂದ ತೆರವಾಗಿದ್ದ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಮೇ23ಕ್ಕೆ ಮತ ಎಣಿಕೆ ನಡೆಯಲಿದೆ.
ಡಾ.ಉಮೇಶ್ ಜಾಧವ್ ಅವರು ಕೆಲಕಾರಣಾಂತರಗಳಿಂದ ಚಿಂಚೋಳಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಷ್ಟೇ ಅಲ್ಲದೇ ಕಂಗ್ರೆಸ್ ತೊರೆದು ಬಿಜೆಪಿ ಸೇರಿದ್ದು, ಇದೀಗ ಕಲಬುರಗಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ.