ಪ್ರತ್ಯೇಕ ರಾಜ್ಯ ಪರ ಮತ್ತೆ ದನಿ ಎತ್ತಿದ ಕತ್ತಿ

By Web DeskFirst Published Dec 22, 2018, 10:21 AM IST
Highlights

ಪ್ರತ್ಯೇಕ ರಾಜ್ಯ ಪರ ಮತ್ತೆ ದನಿ ಎತ್ತಿದ ಕತ್ತಿ| ಕೇಂದ್ರಕ್ಕೆ ಪತ್ರ ಬರೆಯಲು ಸಿಎಂಗೆ ಆಗ್ರಹ

ಬೆಳಗಾವಿ[ಡಿ.22]: ಬೆಳಗಾವಿ ಅಧಿವೇಶನದಿಂದ ಉತ್ತರ ಕರ್ನಾಟಕ ಭಾಗಕ್ಕೆ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು ಎಂದು ಶಾಸಕ ಉಮೇಶ ಕತ್ತಿ ಅವರು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಆಗ್ರಹಿಸಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮೈತ್ರಿ ಸರ್ಕಾರ ಬೆಳಗಾವಿಯಲ್ಲಿ ಕಾಟಾಚಾರಕ್ಕಷ್ಟೇ ಬೆಳಗಾವಿಯಲ್ಲಿ ಅಧಿವೇಶನ ನಡೆಸಲಾಗಿದೆ. ಅಧಿವೇಶನ ನಿರೀಕ್ಷಿತ ಫಲ ಕೊಟ್ಟಿಲ್ಲ. ರಾಜ್ಯ ಸರ್ಕಾರಕ್ಕೆ ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಯಾವುದೇ ಕಾಳಜಿ ಇಲ್ಲ. ರೈತರ ಸಾಲ ಮನ್ನಾ ಮಾಡುವಲ್ಲಿ ಸರ್ಕಾರಕ್ಕೆ ಸ್ಪಷ್ಟನಿಲುವು ಇಲ್ಲ. ಬೆಳಗಾವಿ ಅಧಿವೇಶನವನ್ನು ಕಾಟಾಚಾರಕ್ಕೆ ಎಂಬಂತೆ ನಡೆಸಲಾಗಿದೆ ಎಂದು ದೂರಿದರು.

ಕರ್ನಾಟಕದ ಅಭಿವೃದ್ಧಿಗೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಯಾವುದೇ ಇಚ್ಛೆ ಇಲ್ಲ. ಹೀಗಾಗಿ ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು ಎಂದು ಉಮೇಶ್‌ ಕತ್ತಿ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.

click me!