ಬಿಪಿಎಲ್‌ ಕಾರ್ಡ್‌ಗೆ ಈಗ ಜಾರಿಯಲ್ಲಿರುವ ಮಾನದಂಡಗಳೇ ಮುಂದುವರಿಯುತ್ತೆ: ಕತ್ತಿ ಸ್ಪಷ್ಟನೆ

By Suvarna News  |  First Published Feb 15, 2021, 8:47 PM IST
  • ಬಿಪಿಎಲ್ ಕಾರ್ಡ್ ವಿವಾದ: ಜನಾಕ್ರೋಶದ ಬೆನ್ನಲ್ಲೇ ಸಚಿವ ಉಮೇಶ್ ಕತ್ತಿ ಸ್ಪಷ್ಟನೆ
  • ಟಿವಿ, ಫ್ರಿಡ್ಜ್, ಬೈಕ್ ಹೊಂದಿದ್ದವರು ಬಿಪಿಎಲ್ ಕಾರ್ಡ್ ಹಿಂದಿರುಗಿಸಬೇಕು ಎಂಬ ಹೇಳಿಕೆ
  • ಯಾವುದೇ ತಿದ್ದುಪಡಿ ಮಾಡಿಲ್ಲ. ಮುಂದೆ ಸಹ ಮಾಡಲ್ಲ ಎಂದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ
     

ಬೆಂಗಳೂರು (ಫೆ.15): ಟಿವಿ, ಫ್ರಿಡ್ಜ್, ಬೈಕ್ ಹೊಂದಿದ್ದವರು ಬಿಪಿಎಲ್ ಕಾರ್ಡ್ ಹಿಂದಿರುಗಿಸಬೇಕು ಎಂಬ ಹೇಳಿಕೆ ತೀವ್ರ ವಿವಾದಕ್ಕೀಡಾದ ಬೆನ್ನಲ್ಲೇ ಸಚಿವ ಉಮೇಶ್ ಕತ್ತಿ ಸ್ಪಷ್ಟನೆ ನೀಡಿದ್ದು, ಬಿಪಿಎಲ್ ಕಾರ್ಡ್ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಉಮೇಶ್ ಕತ್ತಿ, ನಾನು ಸಚಿವನಾದ ಬಳಿಕ ಯಾವುದೇ ತಿದ್ದುಪಡಿ ಮಾಡಿಲ್ಲ. ಮುಂದೆ ಸಹ ಮಾಡಲ್ಲ. ಈಗ ಜಾರಿಯಲ್ಲಿರುವ ಮಾನದಂಡಗಳೇ ಮುಂದುವರಿಯುತ್ತದೆ ಎಂದಿದ್ದಾರೆ.

Tap to resize

Latest Videos

ಇದನ್ನೂ ಓದಿ : BPL ಕಾರ್ಡ್ ಹೊಂದಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಟಿವಿ, ಫ್ರಿಡ್ಜ್, ಬೈಕ್ ಇರುವವರಿಗೆ ಬಿಪಿಎಲ್ ಕಾರ್ಡ್ ರದ್ದು ಎಂದು ಸಚಿವ ಕತ್ತಿ ಹೇಳಿಕೆಗೆ ಸ್ವಪಕ್ಷೀಯ ನಾಯಕರೇ ವಿರೋಧ ವ್ಯಕ್ತಪಡಿಸಿದ್ದರು. ಸಚಿವರ ನಿರ್ಧಾರಕ್ಕೆ ರಾಜ್ಯಾದ್ಯಂತ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. 

ಈ ಹಿನ್ನೆಲೆಯಲ್ಲಿ ಸ್ಪಷ್ಟಪಡಿಸಿರುವ ಸಚಿವ ಉಮೇಶ್ ಕತ್ತಿ, ಬಿಪಿಎಲ್ ಕಾರ್ಡ್ ಮಾನದಂಡಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ.



 

click me!