Sharath R Ashok scuba diving: ಸಮುದ್ರದಾಳದಲ್ಲಿ ಆರ್ ಅಶೋಕ್ ಪುತ್ರನ ಗಿನ್ನೆಸ್ ಸಾಹಸ

Kannadaprabha News   | Kannada Prabha
Published : May 04, 2026, 08:00 AM IST
Sharath R Ashok scuba diving

ಸಾರಾಂಶ

ಅಂಡಮಾನ್‌ನ ಸ್ವರಾಜ್ ದ್ವೀಪದ ಸಮುದ್ರದಾಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು ಅನಾವರಣಗೊಳಿಸಿ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಲಾಗಿದೆ. ಈ ಐತಿಹಾಸಿಕ ಸಾಧನೆಯಲ್ಲಿ ಬೆಂಗಳೂರಿನ ಸಾಹಸ ಕ್ರೀಡಾಪಟು ಹಾಗೂ ಆರ್. ಅಶೋಕ್ ಅವರ ಪುತ್ರ ಶರತ್ ಆರ್. ಅಶೋಕ್ ಕೂಡ ಭಾಗವಹಿಸಿದ್ದರು.

 ಬೆಂಗಳೂರು (ಮೇ.4): ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದ ಸಮುದ್ರದ ಆಳದಲ್ಲಿ ಶನಿವಾರ ನಡೆದ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜ ಅನಾವರಣ ಮತ್ತು ಆ ಮೂಲಕ ಸೃಷ್ಟಿಯಾದ ‘ಗಿನ್ನೆಸ್ ವರ್ಲ್ಡ್ ರೆಕಾರ್ಡ್’ನಲ್ಲಿ ಕನ್ನಡಿಗ ಶರತ್‌ ಆರ್‌.ಅಶೋಕ್‌ ಕೂಡಾ ಭಾಗಿಯಾಗಿದ್ದರು.

ಬೆಂಗಳೂರಿನ ಪ್ರತಿಭಾವಂತ ಸಾಹಸ ಕ್ರೀಡಾ ಪರಿಣಿತ ಶರತ್ ಆರ್.ಅಶೋಕ್ ಅವರು ಪಾಲ್ಗೊಳ್ಳುವ ಮೂಲಕ ಕರ್ನಾಟಕದ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಎತ್ತಿ ಹಿಡಿದಿದ್ದಾರೆ. ಶರತ್, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರ ಪುತ್ರ.

ಶನಿವಾರ ನಡೆದ ಈ ಬೃಹತ್ ಕಾರ್ಯಾಚರಣೆಯಲ್ಲಿ ದೇಶದ ವಿವಿಧ ಭಾಗಗಳ ಸುಮಾರು 200ಕ್ಕೂ ಹೆಚ್ಚು ನುರಿತ ಸ್ಕೂಬಾ ಡೈವರ್‌ಗಳು ಭಾಗವಹಿಸಿದ್ದರು. ಅಂಡಮಾನ್ ಆಡಳಿತ ಮತ್ತು ಭಾರತೀಯ ರಕ್ಷಣಾ ಪಡೆಗಳ ಸಹಯೋಗದೊಂದಿಗೆ ನಡೆದ ಈ ಅಭಿಯಾನದಲ್ಲಿ, 60x40 ಮೀಟರ್ (2,400 ಚದರ ಮೀಟರ್) ವಿಸ್ತೀರ್ಣದ ಬೃಹತ್ ರಾಷ್ಟ್ರಧ್ವಜವನ್ನು ಅಲೆಗಳ ಅಬ್ಬರ ಮತ್ತು ನೀರಿನ ತೀವ್ರ ಒತ್ತಡದ ನಡುವೆ ಸಮುದ್ರದಾಳದಲ್ಲಿ ಅನಾವರಣಗೊಳಿಸಲಾಯಿತು. ಈ ಅಪ್ರತಿಮ ಸಾಧನೆಯನ್ನು ಗುರುತಿಸಿ ಅಂಡಮಾನ್ ಮತ್ತು ನಿಕೋಬಾರ್‌ನ ಲೆಫ್ಟಿನೆಂಟ್ ಗವರ್ನರ್ ಡಿ.ಕೆ.ಜೋಶಿ ಅವರು ಗಿನ್ನೆಸ್ ವಿಶ್ವ ದಾಖಲೆಯ ಪ್ರಮಾಣಪತ್ರ ನೀಡಿ ಗೌರವಿಸಿದ್ದಾರೆ.

ಬದುಕಿನ ಅತ್ಯಂತ ಗೌರವದ ಸಂದರ್ಭ

ನಮ್ಮ ತ್ರಿವರ್ಣ ಧ್ವಜವು 140 ಕೋಟಿ ಭಾರತೀಯರ ಶಕ್ತಿ ಮತ್ತು ಏಕತೆಯ ಪ್ರತೀಕ. ಸಾಹಸವು ನನ್ನ ಆಸಕ್ತಿಯಾಗಿದ್ದು, ಅಲೆಗಳ ಅಂತರಾಳದಲ್ಲಿ ರಾಷ್ಟ್ರಧ್ವಜ ಅರಳಿಸಿದ ಆ ಕ್ಷಣ ನನ್ನ ಬದುಕಿನ ಅತ್ಯಂತ ಗೌರವದ ಸಂದರ್ಭ. ವನ್ಯಜೀವಿ ಸಂರಕ್ಷಣೆ ಮತ್ತು ಸಾಹಸ ಕ್ರೀಡೆಗಳಲ್ಲಿನ ನನ್ನ ಅನುಭವ ಇಂತಹ ರಾಷ್ಟ್ರಮಟ್ಟದ ಸಾಧನೆಯಲ್ಲಿ ಭಾಗಿಯಾಗಲು ನನಗೆ ಸ್ಫೂರ್ತಿ ನೀಡಿದೆ.

-ಶರತ್ ಆರ್. ಅಶೋಕ್, ಸಾಹಸ ಕ್ರೀಡಾಪಟು

ಸ್ಕೂಬಾ ಡೈವ್‌ ಪರಿಣಿತ ಶರತ್‌

ಶರತ್ ಆರ್.ಅಶೋಕ್ ಅವರು ಸಾಹಸ ಕ್ರೀಡಾ ಕ್ಷೇತ್ರದಲ್ಲಿ ಕಳೆದೊಂದು ದಶಕದಿಂದ ನಿರಂತರವಾಗಿ ತೊಡಗಿಸಿಕೊಂಡಿದ್ದು, ಅಪಾರ ಅನುಭವ ಹೊಂದಿದ್ದಾರೆ. ಆಟೋಮೊಬೈಲ್ ಇಂಜಿನಿಯರಿಂಗ್ ಪದವೀಧರರಾಗಿರುವ ಇವರು, ಪ್ರಮಾಣೀಕೃತ ‘ಡೈವ್ ಮಾಸ್ಟರ್’ ಮತ್ತು ಸ್ಕೂಬಾ ಇನ್ಸ್ಟ್ರಕ್ಟರ್ ಆಗಿ ಅಂತಾರಾಷ್ಟ್ರೀಯ ಮಟ್ಟದ ಪರಿಣತಿ ಪಡೆದಿದ್ದಾರೆ. ಜಲಸಾಹಸ ಮಾತ್ರವಲ್ಲದೆ, ಪ್ಯಾರಾಗ್ಲೈಡಿಂಗ್, ಪ್ಯಾರಾಮೋಟರ್, ಮೊಟೋಕ್ರಾಸ್ ಮತ್ತು ಪರ್ವತಾರೋಹಣದಲ್ಲೂ ಶರತ್‌ ಪರಿಣಿತಿ ಹೊಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka By-Election Results 2026 LIVE: Sharath R Ashok scuba diving - ಸಮುದ್ರದಾಳದಲ್ಲಿ ಆರ್ ಅಶೋಕ್ ಪುತ್ರನ ಗಿನ್ನೆಸ್ ಸಾಹಸ
Davanagere South by election results 2026: ಇಂದು ಮತ ಎಣಿಕೆ ಹಿನ್ನೆಲೆ 'ಶುಷ್ಕ ದಿವಸ' ಘೋಷಣೆ, ಯಾವಕ್ಕೆಲ್ಲ ನಿರ್ಬಂಧ?