
ಬೆಂಗಳೂರು(ಫೆ.02): ಕೇಂದ್ರ ಬಜೆಟ್ ರೈತರ ಬೇಡಿಕೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ನಿರಾಶಾದಾಯಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಮಂಡಿಸಿದ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ರೈತರು ಬೆಳೆದ ಬೆಳೆಗೆ ನಿಶ್ಚಿತ ಬೆಲೆ ಬರಬೇಕು. ಇಂದು ಅನ್ನದಾತರ ಸ್ಥಿತಿ ಅನಿಶ್ಚಿತತೆಯಿಂದ ಕೂಡಿದೆ. ಎಲ್ಲ ವಸ್ತುಗಳಿಗೂ ಎಂ.ಎಸ್.ಪಿ. ಇರುವಾಗ ರೈತರ ಕಷ್ಟಾರ್ಜಿತಕ್ಕೆ ನಿರ್ಧಿಷ್ಟ ಬೆಲೆ ನೀಡುವ ಎಂ.ಎಸ್.ಪಿ. ಕಾಯಿದೆ ಬಗ್ಗೆ ಪ್ರಕಟಿಸದ ಬಜೆಟ್ ಇದಾಗಿದೆ ಎಂದು ತಿಳಿಸಿದ್ದಾರೆ.
ಬಜೆಟ್‌ನಲ್ಲಿ ರಾಯಚೂರು ಏಮ್ಸ್ ಘೋಷಣೆ ಆಗಲೇ ಇಲ್ಲ: ನಿರಾಸೆಯೇ ಎಲ್ಲ!
ರೈತರು ಪ್ರಕೃತಿ ವಿಕೋಪದಿಂದ ತತ್ತರಿಸಿದ್ದು, ಸಾಲದ ಹೊರೆ ತಾಳದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರೈತರ ಕೃಷಿ ಸಾಲ ಮನ್ನಾ ಬಗ್ಗೆ ಈ ಬಜೆಟ್‌ನಲ್ಲಿ ಯಾವುದೇ ಘೋಷಣೆ ಮಾಡಿಲ್ಲ. ಬಜೆಟ್‌ನಲ್ಲಿ ಬಿಜೆಪಿ ಮತ್ತು ಎನ್.ಡಿ.ಎ.ಯೇತರ ರಾಜ್ಯಗಳಿಗೆ ಘೋರ ಅನ್ಯಾಯ ಮಾಡಲಾಗಿದೆ. ಒಕ್ಕೂಟ ವ್ಯವಸ್ಥೆಯ ಭಾರತದಲ್ಲಿ ಇಂತಹ ತಾರತಮ್ಯ ಸರ್ವತಾ ಸಮರ್ಥನಿಯವಲ್ಲ. ಇಂತಹ ಒಂದು ಕೆಟ್ಟ ಸಂಪ್ರದಾಯಕ್ಕೆ ಬಜೆಟ್ ನಾಂದಿ ಹಾಡಿದೆ. ಕರ್ನಾಟಕದ ನಿರೀಕ್ಷೆಗಳೂ ಹುಸಿಯಾಗಿವೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಎನ್.ಡಿ.ಎ. ಆಡಳಿತ 11 ವರ್ಷಗಳ ಕಾರ್ಯಕಾಲದಲ್ಲಿ ಹಿಂದೆಂದೂ ಕಂಡು ಕೇಳರಿಯದಷ್ಟು ನಿರುದ್ಯೋಗ ಸಮಸ್ಯೆ ಉಲ್ಬಣಿಸಿದೆ. ಈ ಬಜೆಟ್ ನಲ್ಲಿ ಕೂಡ ದುಡಿಯುವ ಯುವಕರ ಕೈಗೆ ಉದ್ಯೋಗ ನೀಡುವ ಯೋಜನೆ ರೂಪಿಸದಿರುವುದು ದುರ್ದೈವ ಎಂದು ತಿಳಿಸಿದ್ದಾರೆ.
ಖರ್ಗೆ ಮನವಿಗೆ ಇಲ್ಲ ಮನ್ನಣೆ; ಕಲ್ಯಾಣ ಕರ್ನಾಟಕ ಕಡೆಗಣನೆ
ಹಿಂದುಳಿದ ಈಶಾನ್ಯ ಭಾರತದ ಅಭಿವೃದ್ಧಿಗೆ ಆದ್ಯತೆ ನೀಡುವ ಕೇಂದ್ರ ಸರ್ಕಾರ, ಹಿಂದುಳಿದ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕಿಂಚಿತ್ತೂ ಗಮನ ಹರಿಸದೆ ಕಡೆಗಣಿಸಿರುವುದಕ್ಕೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಕಿಡಿಕಾರಿದ್ದಾರೆ. ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಹಿಂದುಳಿದ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಅಭಿವೃದ್ಧಿಗೆ 5 ಸಾವಿರ ಕೋಟಿ ರೂಪಾಯಿ ಗಳನ್ನು ಹಂಚಿಕೆ ಮಾಡುವಂತೆ ಕೇಂದ್ರ ಹಣಕಾಸು ಸಚಿವರಿಗೆ ಮನವಿ ಮಾಡಿದ್ದರು. ಆದರೆ, ಇದಕ್ಕೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ಸಚಿವ ಖಂಡ್ರೆ ಬೇಸರ ವ್ಯಕ್ತಪಡಿಸಿದರು.
ಕೇಂದ್ರ ಬಜೆಟ್ 2025: ಕಲ್ಯಾಣ ಕರ್ನಾಟಕ ಭಾಗಕ್ಕೆ ಖಾಲಿ ಚೊಂಬು!
ಕರ್ನಾಟಕದೆಡೆಗೆ ಎಂದಿನ ನಿರ್ಲಕ್ಷ್ಯ: ಸಂಸದ ಸಾಗರ ಖಂಡ್ರೆ ಅಸಮಾಧಾನ
ಬೀದರ್: ಕೇಂದ್ರದ ಈ ಬಜೆಟ್ ಮತ್ತೊಮ್ಮೆ ಕರ್ನಾಟಕದ ಮೇಲಿನ ಕೇಂದ್ರ ಸರ್ಕಾರದ ನಿರಂತರ ನಿರ್ಲಕ್ಷ ಪ್ರದರ್ಶಿಸುತ್ತಿದೆ ಎಂದು ಸಂಸದ ಸಾಗರ ಖಂಡ್ರೆ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿ, 12 ಲಕ್ಷದವರೆಗೆ ಆದಾಯ ತೆರಿಗೆ ವಿನಾಯಿತಿಯನ್ನು ಹೆಚ್ಚಿಸಿದ ಕ್ರಮ ಮಧ್ಯಮವರ್ಗಕ್ಕೆ ಕೆಲವು ಮಟ್ಟಿಗೆ ಸಮಾಧಾನ ನೀಡುವ ಸ್ವಾಗತಾರ್ಹ ನಿರ್ಧಾರ 'ವಾಗಿದೆ ಆದರೆ, ದೇಶದ ಅತಿ ಹೆಚ್ಚು ತೆರಿಗೆ ಪಾವತಿ ಸುವ ರಾಜ್ಯಗಳಲ್ಲಿ ಒಂದಾದರೂ, ಕರ್ನಾಟಕ ತನ್ನ ಹಕ್ಕಿನ ಅನುದಾನದಿಂದ ವಂಚಿತವಾಗಿದೆ. ಬರಪೀಡಿತ ರೈತರಿಗೆ ಯಾವುದೇ ಪರಿಹಾರವಿಲ್ಲ, ಯುವಕರಿಗೆ ಉದ್ಯೋಗ ಸೃಷ್ಟಿಸಲು ಯಾವುದೇ ಸ್ಪಷ್ಟ ಯೋಜನೆಗಳಿಲ್ಲ, ಮತ್ತು ಕಲ್ಯಾಣ ಕರ್ನಾಟಕ ಸೇರಿ ದಂತೆ ಹಿನ್ನಡೆ ಪ್ರದೇಶಗಳ ಅಭಿ ವೃದ್ಧಿಗೆ ವಿಶೇಷ ಅನುದಾನ ನೀಡ ಲಾಗಿಲ್ಲ. ಕರ್ನಾಟಕದ ಅವಶ್ಯಕತೆ ಗಳನ್ನು ಕಡೆಗಣಿಸಿ, ಚುನಾ ವಣಾ ರಾಜ್ಯಗಳಿಗೆ ಆದ್ಯತೆ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ