ಬೆಂಗಳೂರು (ಅ.22) : ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಪ್ರಾಮುಖ್ಯ ಯೋಜನೆಯಾಗಿ ಪಿಐಬಿ (ಸಾರ್ವಜನಿಕ ಬಂಡವಾಳ ಹೂಡಿಕೆ ಮಂಡಳಿ)ಯಲ್ಲಿ ಅನುಮೋದನೆ ನೀಡಲಾಗಿದೆ. ಕೇಂದ್ರ ಸಚಿವ ಸಂಪುಟದಿಂದ ಅನುಮೋದಯಾಗುವುದೊಂದು ಬಾಕಿಯಿದೆ. ಭದ್ರಾ ಮೇಲ್ದಂಡೆ ಯೋಜನೆ ರಾಜ್ಯದ ಪ್ರಥಮ 'ರಾಷ್ಟ್ರೀಯ ನೀರಾವರಿ ಯೋಜನೆ'ಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraj Bommai) ಹೇಳಿದರು.
ಸಿಎಂ ಬೊಮ್ಮಾಯಿ, ಬಿಎಸ್‌ವೈರಿಂದ ಸಚಿವ ಅಶ್ವತ್ಥ್ ಗುಣಗಾನ
undefined
ವಿವಿದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಶನಿವಾರ ಹೊಸದುರ್ಗ(Hosadurga) ಪಟ್ಟಣಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ಹೆಲಿಪ್ಯಾಡ್(Halipad) ಬಳಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮದವರೊಂದಿಗೆ ಮಾತನಾಡಿದರು.
'ಕೇಂದ್ರ ಜಲಸಂಪನ್ಮೂಲ ಸಚಿವರು ಯೋಜನೆ ಕುರಿತು ಕಾರ್ಯೋನ್ಮುಖರಾಗಿದ್ದಾರೆ. ವೈಯಕ್ತಿಕವಾಗಿ ಕೇಂದ್ರ ಜಲ ಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಇದರಿಂದಾಗಿ ಯೋಜನೆ ಬಹಳ ದೊಡ್ಡ ಹಣಕಾಸಿನ ನೆರವು ಲಭಿಸಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚಿತ್ರದುರ್ಗ(Chitradurga) ಭಾಗದ ಜನರ ಬಹುದಿನದ ಬೇಡಿಕೆ ತುಮಕೂರು ದಾವಣಗೆರೆ ನೇರ ರೈಲು ಮಾರ್ಗ. ಈ ಯೋಜನೆಯ ಅನುಷ್ಠಾನಕ್ಕೆ ಕೆಲವು ಭಾಗದಲ್ಲಿ ಭೂಸ್ವಾಧೀನ ಪ್ರಕ್ರಿಯೆಯ ಬಾಕಿಯಿದೆ. ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವಾಗಿ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಆದಷ್ಟು ಬೇಗ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಭೂ ಸ್ವಾಧೀನಕ್ಕೆ ಅಗತ್ಯ ಇರುವ ರೂ. 100 ಕೋಟಿ ರೂಪಾಯಿಗಳನ್ನು ನೀಡಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.
ಅಬ್ಬಿನಹೋಳೆ ಯೋಜನೆ(Abbinahole)ಯಲ್ಲಿ ಭೂಮಿ ನೀಡಿದ ರೈತರಿಂದ ಕೆಲವು ಕಾರಣಗಳಿಂದ ಅಡಚಣೆ ಉಂಟಾಗಿದೆ. ಇದನ್ನು ಬಗೆಹರಿಸಲಾಗುವುದು. ಎಂದರು. ಸಚಿವ ಸಂಪುಟ ವಿಸ್ತರಣೆ ಬಗ್ಗೆ ದೆಹಲಿ ವರಿಷ್ಠರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ರಾಜಕೀಯ ಸನ್ನಿವೇಶದಲ್ಲಿ ಕೆಲವು ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಲಭಿಸಿಲ್ಲ. ಈ ವಿಚಾರ ಗಮನದಲ್ಲಿದೆ ಎಂದರು.
ಕೆಂಪೇಗೌಡ ಥೀಮ್ ಪಾರ್ಕ್‌ಗೆ ಮಣ್ಣು ಸಂಗ್ರಹ ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ
ಸರ್ಕಾರಿ ನೌಕರರ 7ನೇ ವೇತನ ಆಯೋಗದ ವಿಚಾರ ಪ್ರಸ್ತಾಪಿಸಿದ ಸಿಎಂ ಬೊಮ್ಮಾಯಿ ಅವರು, ವೇತನ ಆಯೋಗ ಶೀಘ್ರವಾಗಿ ರಚನೆ ಮಾಡಲಾಗುವುದು ಎಂದು ಪತ್ರಕರ್ತರ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರಿಸಿದರು.
ಈ ಸಂದರ್ಭದಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್(B.C.Patil) ಕರ್ನಾಟಕ ರಾಜ್ಯ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ(M.Chandrappa) ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್, ಚಿತ್ರದುರ್ಗ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ವಿಧಾನ ಪರಿಷತ್ ಶಾಸಕ ನವೀನ್ ಸೇರಿದಂತೆ ಇತರೆ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.