
ನವದೆಹಲಿ, (ಜು.27): ಒಂದೆಡೆ ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಆಯ್ಕೆ ಸಂಬಂಧ ಕ್ಷೀಪ್ರ ಬೆಳವಣಿಗೆಗಳು ನಡೆಯುತ್ತಿದ್ದು, ಮತ್ತೊಂದೆಡೆ ರಾಜ್ಯದಲ್ಲಿ ಭಾರೀ ಮಳೆಯಿಂದ ಹಲವೆಡೆ ಪ್ರವಾಹ ಎದುರಾಗಿದೆ.
ಇದರ ಮಧ್ಯೆ ಕರ್ನಾಟಕಕ್ಕೆ ಕೇಂದ್ರ ಸರ್ಕಾರ 629.03 ಕೋಟಿ ರೂ ಪರಿಹಾರ ಘೋಷಣೆ ಮಾಡಿದೆ. ಈ ಬಗ್ಗೆ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ ನೀಡಿದ್ದಾರೆ.
ಜನಜೀವನದ ಮೇಲೆ ಮಾರಕ ಪರಿಣಾಮ ಬೀರಿದ ಡೆಡ್ಲಿ ಪ್ರವಾಹ : ಮೈ ಜಲ್ ಎನ್ನಿಸೋ ದೃಶ್ಯಗಳು
ಈ ಬಾರಿಯ ಮಳೆಗಾಲದಲ್ಲಿ ಈವರೆಗಿನ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 629.03 ಕೋಟಿ ರೂ ಪರಿಹಾರ ಘೋಷಿಸಿದೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಜತೆಗೆ ಮಹಾರಾಷ್ಟ್ರಕ್ಕೆ 701 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಎಸ್ಡಿಆರ್ಎಫ್ ಮಾನದಂಡಗಳ ಅಡಿಯಲ್ಲಿ ಅತಿವೃಷ್ಟಿ ಪರಿಹಾರ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕರ್ನಾಟಕ & ಮಹಾರಾಷ್ಟ್ರ ರಾಜ್ಯಗಳಲ್ಲಿ 2020ರಲ್ಲಿ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಜಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ರೂ.629.03 ಕೋಟಿ ಹಾಗೂ ಮಹಾರಾಷ್ಟ್ರಕ್ಕೆ ರೂ.701.00 ಕೋಟಿಗಳ ನೆರವಿನ ಅನುಮೋದನೆಯನ್ನು SDRF ಮಾನದಂಡಗಳ ಅಡಿಯಲ್ಲಿ ರಾಜ್ಯ ಸರ್ಕಾರಕ್ಕೆ ನೀಡಿದೆ.
ಅನಾವೃಷ್ಟಿ ಕಾರಣದಿಂದ 2020ನೇ ವರ್ಷದಲ್ಲಿ ರಾಜಸ್ಥಾನದಲ್ಲಿನ ಕೃಷಿ ಸಮುದಾಯಕ್ಕೆ ಅಪಾರ ಬೆಳೆ ನಷ್ಟ ಉಂಟಾಗಿದ್ದು, ಕೇಂದ್ರ ಸರಕಾರ ಈ ಬೆಳೆ ನಷ್ಟಕ್ಕೆ ನೆರವಿನ ರೂಪದಲ್ಲಿ ರೂ.113.69 ಕೋಟಿಗಳನ್ನು SDRF ಮಾನದಂಡಗಳ ಅಡಿಯಲ್ಲಿ ಅನುಮೋದಿಸಿದೆ.
2020-21 ನೇ ವರ್ಷದಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಒಟ್ಟು 67.96 ಲಕ್ಷ ಹೆಕ್ಟೇರ್ ಕೃಷಿಭೂಮಿಯನ್ನು ಮಹಾರಾಷ್ಟ್ರ ರಾಜ್ಯದಲ್ಲಿ ವಿಮೆಗೆ ಒಳಪಡಿಸಿಲಾಗಿತ್ತು.
ಈ ಸಾಲಿನ ಖಾರಿಫ್ ಮತ್ತು ರಬಿಯಲ್ಲಾದ ಬೆಳೆ ನಷ್ಟಕ್ಕೆ ಕೇಂದ್ರ ಸರ್ಕಾರ ಒಟ್ಟು ರೂ. 750.12 ಕೋಟಿ ಬಿಡುಗಡೆ ಮಾಡಿದ್ದು, 11.43 ಲಕ್ಷ ರೈತರು ಇದರ ಫಲಾನುಭವವನ್ನು ಪಡೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ